ಸಿಎಂ ವಿರುದ್ಧ ಸುಳ್ಳು ಸುದ್ದಿ ಪ್ರಸಾರ: ಅರ್ನಬ್ ಗೋಸ್ವಾಮಿ, ಆರ್.‌ಕನ್ನಡ ಸಂಪಾದಕರ ವಿರುದ್ಧ ಎಫ್‌ಐಆರ್

Date:

Advertisements

ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ವಿರುದ್ಧ ಸುಳ್ಳು ಸುದ್ದಿ ಪ್ರಸಾರ ಮಾಡಿ ದ್ವೇಷ ಹುಟ್ಟಿಹಾಕಲು ಯತ್ನ ಮಾಡಿದ ಆರೋಪದ ಮೇಲೆ ರಿಪಬ್ಲಿಕ್ ಟಿವಿ ಮುಖ್ಯಸ್ಥ ಅರ್ನಬ್ ಗೋಸ್ವಾಮಿ ಮತ್ತು ಆರ್.‌ಕನ್ನಡ ಸಂಪಾದಕ ನಿರಂಜನ್ ಅವರ ವಿರುದ್ಧ ಎಸ್. ಜೆ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಕೆಪಿಸಿಸಿಯ ಕಾನೂನು, ಮಾನವ ಹಕ್ಕುಗಳು ಮತ್ತು ಮಾಹಿತಿ ಹಕ್ಕು ವಿಭಾಗದ ರಾಜ್ಯ ಕಾರ್ಯದರ್ಶಿ ರವೀಂದ್ರ ಎಂ ಡಿ ಎಸ್ ಜೆ ಪಾರ್ಕ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಮಾರ್ಚ್ 27ರಂದು ಸಂಜೆ ಸಂಜೆ 7:15 ಗಂಟೆಗೆ ಆರ್ ಕನ್ನಡ ಸುದ್ದಿ ವಾಹಿನಿಯಲ್ಲಿ ಎಂಜಿ ರಸ್ತೆಯ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಚರಿಸುವಾಗ ವಾಹನಗಳ ಸಂಚಾರ ತಡೆದು ಆ್ಯಂಬುಲೆನ್ಸ್ ಸಂಚಾರಕ್ಕೆ ಅಡ್ಡಿಪಡಿಸಿದ್ದಾರೆ ಎಂದು ವ್ಯಕ್ತಿಯೊಬ್ಬರು ಮಾಡಿದ ವಿಡಿಯೋ ತುಣುಕನ್ನು ಪ್ರಸಾರ ಮಾಡಲಾಗಿದೆ.

Advertisements

ಇದನ್ನು ಓದಿದ್ದೀರಾ?  ಜೆಎನ್‌ಯುವಿನಲ್ಲಿ ಎಬಿವಿಪಿ ಕ್ಲೀನ್‌ಸ್ವೀಪ್ ಎಂದು ಸುಳ್ಳು ಸುದ್ದಿ ಪ್ರಕಟಿಸಿದ ಸುವರ್ಣ ನ್ಯೂಸ್!

ಆದರೆ ನಿಜವಾಗಿ ಸಿಎಂ ಸಿದ್ಧರಾಮಯ್ಯ ಅವರು ಈ ಸಂದರ್ಭದಲ್ಲಿ ಮೈಸೂರಿನಲ್ಲಿದ್ದು, ಬೆಂಗಳೂರಿನ ಕಡೆಗೆ ಪ್ರಯಾಣ ಮಾಡಿಲ್ಲ. ಈ ವಿಡಿಯೋವನ್ನು ಪರಿಶೀಲನೆ ನಡೆಸದೆ ಚುನಾವಣೆಯ ಸಂದರ್ಭದಲ್ಲಿ ಸಾರ್ವಜನಿಕರನ್ನು ಪ್ರಚೋದಿಸುವ ನಿಟ್ಟಿನಲ್ಲಿಯೇ ತಪ್ಪು ಮಾಹಿತಿ ಪ್ರಸಾರ ಮಾಡಲಾಗಿದೆ ಎಂದು  ದೂರು ನೀಡಿದೆ.

ಈ ದೂರಿನ ಆಧಾರದಲ್ಲಿ ತಪ್ಪು ಮಾಹಿತಿ ಪ್ರಸಾರ ಮಾಡಿರುವ ಆರ್ ಕನ್ನಡ (ರಿಪಬ್ಲಿಕ್) ವಾಹಿನಿಯ ಮಾಲೀಕ ಅರ್ನಬ್ ಗೋ ಸ್ವಾಮಿ ಮತ್ತು ಸಂಪಾದಕ ನಿರಂಜನ್ ವಿರುದ್ಧ ಎಸ್. ಜೆ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

2 COMMENTS

  1. ಅರಚಾಡುವ ಗೋಸ್ವಾಮಿ ಕನ್ನಡಕ್ಕೂ ಬಂದುಬಿಟ್ಟನಾ,,,ಈ ರಾಜ್ಯದ ನೆಮ್ಮದಿಯನ್ನು ದೇವರೇ ಕಾಪಾಡಬೇಕು

  2. ಅರ್ಣಬ, ಬಾಯಿ ಚಪಲ , ಇವನು ಸುಳ್ಳು ಮಾಹಿತಿ ಕೊಡುವುದರಲ್ಲಿ ನಿಪುಣ, ಇಂಥವನ್ನು ನಮ್ಮ ಸುದ್ದಿವಾಹಿನಿಯಲ್ಲಿ ಇರಲೇಬರಧು. ಇವನನ್ನು ಬಂಧಿಸಿ ಕಾರಾಗೃಹಕ್ಕೆ ಹಾಕಬೇಕು. ಆಗ ಎಲ್ಲಾ ಸುಳ್ಳು ಸುದ್ದಿ ಮಾಡುವವರಿಗೆ ಬುದ್ಧಿ ಬರುತೆ.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

Download Eedina App Android / iOS

X