ಅಮೆರಿಕ | ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಪತ್ತೆ

Date:

Advertisements

ಸಿಂಗಾಪುರಕ್ಕೆ ಸೇರಿದ ಸರಕು ಸಾಗಣೆ ಮಾಡುತ್ತಿದ್ದ ಹಡಗು ಡಿಕ್ಕಿ ಹೊಡೆದ ಪರಿಣಾಮ ಅಮೆರಿಕದ ಬಾಲ್ಟಿಮೋರ್‌ನಲ್ಲಿರುವ 2.6 ಕಿಮೀ ಉದ್ದದ ಪ್ರಮುಖ ಸೇತುವೆಯೊಂದು ಮಂಗಳವಾರ ಕುಸಿದುಬಿದ್ದಿದ್ದು ರಕ್ಷಣಾ ಕಾರ್ಯಾಚರಣೆ ವೇಳೆ ಎರಡು ಮೃತದೇಹ ಪತ್ತೆಯಾಗಿದೆ.

ಮೃತ ವ್ಯಕ್ತಿಗಳನ್ನು ಮೆಕ್ಸಿಕೊ ಮೂಲದ ಅಲೆಜಾಂಡ್ರೊ ಹೆರ್ನಾಂಡೆಜ್ ಪ್ಯೂಯೆಂಟೆಸ್ (35) ಮತ್ತು ಗ್ವಾಟೆಮಾಲಾ ಮೂಲದ ಡೋರ್ಲಿಯನ್ ರೋನಿಯಲ್ ಕ್ಯಾಸ್ಟಿಲೊ ಕ್ಯಾಬ್ರೆರಾ (26) ಎಂದು ಗುರುತಿಸಲಾಗಿದೆ.

ಬಾಲ್ಟಿಮೋರ್‌ ಸೇತುವೆ ಕುಸಿದು ಬಿದ್ದು ಹಲವು ಮಂದಿ ನದಿಗೆ ಬಿದ್ದು ನಾಪತ್ತೆಯಾಗಿದ್ದು ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ. ಸೇತುವೆಯ ಮೇಲೆ ರಸ್ತೆಯ ಕಾಮಗಾರಿ ನಡೆಸುತ್ತಿದ್ದ ಸಂದರ್ಭದಲ್ಲಿ ಸೇತುವೆ ಕುಸಿದು ಬಿದ್ದಿದ್ದು, ಇದೀಗ ರಕ್ಷಣಾ ತಂಡಕ್ಕೆ ಇಬ್ಬರ ಮೃತದೇಹ ಪತ್ತೆಯಾಗಿದೆ.

Advertisements

ಸೇತುವೆ ಕುಸಿದ ಮಧ್ಯಭಾಗದಲ್ಲಿ ಸುಮಾರು 25 ಅಡಿ ಆಳದಲ್ಲಿ ಕೆಂಪು ಪಿಕಪ್ ವಾಹನ ಬಿದ್ದಿರುವುದು ಕಾಣಿಸಿತು. ಪರಿಶೀಲಿಸಿದಾಗ ಅದರಲ್ಲಿ ಇಬ್ಬರ ಮೃತದೇಹ ಪತ್ತೆಯಾಗಿದೆ ಎಂದು ಮೇರಿಲ್ಯಾಂಡ್ ಸ್ಟೇಟ್ ಪೊಲೀಸ್ ಕರ್ನಲ್ ರೋಲ್ಯಾಂಡ್ ಬಟ್ಲರ್ ತಿಳಿಸಿದರು. ಇನ್ನು ಶೋಧ ಕಾರ್ಯಾಚರಣೆ ಮುಂದುವರಿದಿದೆ.

ಇದನ್ನು ಓದಿದ್ದೀರಾ?  ಅಮೇರಿಕ | 2.6 ಕಿ.ಮೀ ಉದ್ದದ ಬಾಲ್ಟಿಮೋರ್ ಸೇತುವೆಗೆ ಹಡಗು ಡಿಕ್ಕಿ: 7 ಮಂದಿ ನಾಪತ್ತೆ; ವಿಡಿಯೋ ವೈರಲ್

ಡಿಕ್ಕಿ ಹೊಡೆದ ಘಟನೆಯ ದೃಶ್ಯವು ಸಿಸಿಟಿವಿಯಲ್ಲಿ ದಾಖಲಾಗಿದೆ. ಕಂಟೇನರ್ ಹಡಗು ಸೇತುವೆಯ ಸಮೀಪ ಬರುತ್ತಿದಂತೆಯೇ ಹಡಗಿನ ವಿದ್ಯುತ್ ಸಂಪರ್ಕ ಕಡಿತಗೊಂಡ ಪರಿಣಾಮ ಸ್ತಂಭಗಳಿಗೆ ಡಿಕ್ಕಿ ಹೊಡೆದ ಬಳಿಕ ಈ ದುರಂತ ಸಂಭವಿಸಿದೆ. ಸೇತುವೆಯ ಹಲವು ಭಾಗಗಳು ಪಾಟಾಪ್‌ಸ್ಕೋ ನದಿಗೆ ಉರುಳಿದೆ. ಬೃಹತ್ ಸೇತುವೆಯ ಪ್ರಮುಖ ಭಾಗ ನದಿಯಲ್ಲಿ ಮುಳುಗಿದೆ. ಘಟನೆಯಿಂದಾಗಿ ಹಡಗಿಗೂ ಕೂಡ ಅಪಾರ ಪ್ರಮಾಣ ಹಾನಿಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತದ ಮೇಲೆ ಅಮೆರಿಕ ದ್ವೇಷ: ಟ್ರಂಪ್‌ಗೆ ನೊಬೆಲ್ ನೀಡುವಂತೆ ಮೋದಿ ಶಿಫಾರಸು ಮಾಡಿದ್ರೆ ಎಲ್ಲವೂ ಸರಿಹೋಗತ್ತ?

ಪಾಕಿಸ್ತಾನವು 2026ರ ನೊಬೆಲ್ ಶಾಂತಿ ಪ್ರಶಸ್ತಿಗೆ ಟ್ರಂಪ್‌ ಅವರನ್ನು ಶಿಫಾರಸು ಮಾಡುವುದಾಗಿ...

ಗಾಝಾದಲ್ಲಿ ನರಮೇಧ: ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಮತ್ತು ಇಸ್ರೇಲ್ ರಾಯಭಾರಿ ನಡುವೆ ವಾಕ್ಸಮರ

ಗಾಝಾದಲ್ಲಿ 'ಅಲ್‌ಝಝೀರಾ' ಸಂಸ್ಥೆಯ ಪತ್ರಕರ್ತನನ್ನು ಇಸ್ರೇಲ್ ಹತ್ಯೆಗೈದಿದೆ. ಈ ಹತ್ಯೆಯನ್ನು ಕಾಂಗ್ರೆಸ್‌...

ಮೋದಿ-ಝೆಲೆನ್ಸ್ಕಿ ಫೋನ್ ಮಾತುಕತೆ: ರಷ್ಯಾ ತೈಲ ಖರೀದಿ ಕುರಿತು ಭಾರತದ ಮೇಲೆ ಉಕ್ರೇನ್‌ ಒತ್ತಡ

ರಷ್ಯಾ ಜೊತೆ ಸಂಘರ್ಷದಲ್ಲಿರುವ ಉಕ್ರೇನ್‌ನ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ಪ್ರಧಾನಿ...

Download Eedina App Android / iOS

X