ಶಿವಮೊಗ್ಗ | ಹಾರನಳ್ಳಿಯಲ್ಲಿ ಗೀತಾ ಶಿವರಾಜಕುಮಾರ್ ಪ್ರಚಾರ ಸಭೆ

Date:

Advertisements

ಶಿವಮೊಗ್ಗ ಜಿಲ್ಲೆಯ ಗ್ರಾಮಾಂತರ ಪ್ರದೇಶಗಳಿಗೆ ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರು ಅಪಾರ ಕೊಡುಗೆ ನೀಡಿದ್ದಾರೆ. ಅದೇ, ಧೈರ್ಯದಿಂದ ಗೀತಾ ಅಕ್ಕನಿಗೆ ಮತ ನೀಡಿ, ಚುನಾವಣೆಯಲ್ಲಿ ಗೆಲುವು ಸಾಧಿಸಲು ಆಶೀರ್ವದಿಸಬೇಕಾಗಿ ಕೇಳಿಕೊಳ್ಳುತ್ತಿದ್ದೇನೆ‌ ಎಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಎಸ್ ಮಧು ಬಂಗಾರಪ್ಪ ಹೇಳಿದರು.

ಶಿವಮೊಗ್ಗ ತಾಲೂಕಿನ ಹಾರನಹಳ್ಳಿ ಗ್ರಾಮದಲ್ಲಿ ಬುಧವಾರ ಆಯೋಜಿಸಿದ್ದ ಲೋಕಸಭಾ ಚುನಾವಣೆ ಶಿವಮೊಗ್ಗ ಕ್ಷೇತ್ರದ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಪರ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದರು.

“ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳು ಜನಸಾಮಾನ್ಯರಿಗೆ ದಾರಿ ದೀಪವಾಗಿವೆ. ಅದೇ ರೀತಿ, ಎಸ್ ಬಂಗಾರಪ್ಪ ಅವರ ಆಡಳಿತದ ಅವಧಿಯಲ್ಲಿ ಉಚಿತ ವಿದ್ಯುತ್ ಸೇರಿದಂತೆ ಅನೇಕ ಯೋಜನೆಗಳನ್ನು ಜಾರಿಗೆ ತಂದು ಶೋಷಿತ ವರ್ಗಕ್ಕೆ ನೆರಳಾಗಿ ನಿಂತಿದ್ದರು” ಎಂದರು.

Advertisements

“ಮುಳುಗಡೆ ಸಂತ್ರಸ್ತರು ಹಾಗೂ ಬಗರ್‌ ಹುಕುಂ ರೈತರ ಸಮಸ್ಯೆ ಬಗೆಹರಿಸುವ ಕೀಲಿ ಕೈ ದೆಹಲಿಯ ಕೇಂದ್ರದಲ್ಲಿದೆ. ಆದರೆ, ೧೦ ವರ್ಷದಿಂದ ಆಡಳಿತ ನಡೆಸುತ್ತಿರುವ ಸ್ಥಳೀಯ ಸಂಸದರು, ಈ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಅದೇ ಉದ್ದೇಶಕ್ಕೆ ಗೀತಾ ಶಿವರಾಜ ಕುಮಾರ್ ಅವರಿಗೆ ಮತ ನೀಡಿ ಗೆಲ್ಲಿಸಬೇಕಿದೆ. ಗೀತಾ ಅಕ್ಕ ಗೆದ್ದರೆ, ಜಿಲ್ಲೆಯ ಶೋಷಿತ ವರ್ಗಕ್ಕೆ ಖಂಡಿತ ನ್ಯಾಯ ಸಿಗಲಿದೆ. ಇದಕ್ಕೆ ನಾನು ಗ್ಯಾರಂಟಿ ನೀಡುತ್ತೇನೆ” ಎಂದು ಸಚಿವ ಮಧುಬಂಗಾರಪ್ಪ ಭರವಸೆ ನೀಡಿದರು.‌

ಕಾಂಗ್ರೆಸ್‌ ಪ್ರಚಾರ

ಶಿವಮೊಗ್ಗ ಲೋಕಸಭಾ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಮಾತನಾಡಿ, “ರೈತರಿಗೆ ಬೆಂಬಲ ಬೆಲೆ ಸಿಗುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುತ್ತೇನೆ. ರಾಜ್ಯ ಮಟ್ಟದಲ್ಲಿ ಸಚಿವ ಮಧು ಬಂಗಾರಪ್ಪ ರೈತರ ಕಷ್ಟಗಳಿಗೆ ನೆರವಾದರೆ, ಕೇಂದ್ರದ ಹಂತದಲ್ಲಿ ರೈತರ ಕಷ್ಟಗಳಿಗೆ ಸ್ಪಂದಿಸಲು ನಾನು ಶ್ರಮಿಸುತ್ತೇನೆ. ಅದೇ ಕಾರಣಕ್ಕೆ ನನಗೆ ಮತ ನೀಡಿ” ಎಂದು ಕೋರಿದರು.

ನಟ ಶಿವರಾಜಕುಮಾರ್ ಮಾತನಾಡಿ, “ಜನರು ಬದಲಾವಣೆ ಬಯಸುತ್ತಿದ್ದಾರೆ. ಗ್ಯಾರಂಟಿ ಯೋಜನೆಗಳ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ. ಆದರೆ, ಈ ಯೋಜನೆಗಳಿಂದ ಬಡವರಿಗೆ ಸಹಾಯ ಆಗಬೇಕು. ಆಗ ಮಾತ್ರ ಸರ್ಕಾರದ ಯೋಜನೆಗಳಿಗೆ ಬೆಲೆ ಸಿಗಲಿದೆ. ಈ ನಿಟ್ಟಿನಲ್ಲಿ ಯೋಜನೆಗಳು ಜನಸಾಮಾನ್ಯರಿಗೆ ನೆರವಾಗಿವೆಯೆಂದು ನಾನು ಬಯಸುತ್ತೇನೆ” ಎಂದು ಹೇಳಿದರು.

ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಮಾತನಾಡಿ, “ಏತ ನೀರಾವರಿ ಯೋಜನೆಗೆ ಬೀಜ ಬಿತ್ತಿದವರು ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಎನ್ನುವುದು ಹೆಮ್ಮೆಯ ಸಂಗತಿ. ಜಿಲ್ಲೆಯಲ್ಲಿ ಮುಳುಗಡೆ ಸಂತ್ರಸ್ತರ ಸಮಸ್ಯೆ ನುಂಗಲಾಗದ ತುತ್ತಾಗಿದೆ. ಇದಕ್ಕೆ ಪರಿಹಾರ ಕಂಡುಕೊಳ್ಳಲು ಗೀತಾ ಅವರು ಶಾಸ್ವತ ಪರಿಹಾರ ಸೂಚಿಸುವರು” ಎಂದು ಭರವಸೆ ನೀಡಿದರು.

“ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳಿಗೆ ಶಕ್ತಿ ತುಂಬುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಅಶಕ್ತರಿಗೆ ನೆರವಾಗಿದ್ದಾರೆ. ಇದರ ಋಣ ತೀರಿಸುವ ಸಕಾಲ ಈಗ ಬಂದಿದೆ. ಎಂದರು.

ಕಾಂಗ್ರೆಸ್ ಜಿಲ್ಲಾ ಘಟಕ ಅಧ್ಯಕ್ಷ ಎಚ್ ಎಸ್ ಸುಂದರೇಶ್ ಮಾತನಾಡಿ, “ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತಕ್ಕೆ ಬಂದ ಬಳಿಕ ಜನರಿಗೆ ನೀಡಿದ್ದ ಭರವಸೆಗಳನ್ನು ಈಡೇರಿಸಲಾಗಿದೆ. ಇಲ್ಲಿ ಬಿಜೆಪಿಯನ್ನು ಕಿತ್ತೊಗೆಯಬೇಕಿದೆ. ಅದೇ ಕಾರಣಕ್ಕೆ ಗೀತಾ ಅವರನ್ನು ಬೆಂಬಲಿಸೋಣ” ಎಂದರು.

ಕಾಂಗ್ರೆಸ್ ಮುಖಂಡ ಶ್ರೀನಿವಾಸ ಕರಿಯಣ್ಣ ಮಾತನಾಡಿ, “ಗ್ಯಾರಂಟಿ ಯೋಜನೆಗಳು ಜನಪರವಾಗಿವೆ. ಅದೇ ಕಾರಣಕ್ಕೆ ಲೋಕಸಭಾ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಅವರಿಗೆ ಮತ ನೀಡಿ ಆಯ್ಕೆ ಮಾಡೋಣ” ಎಂದು ಕರೆ ನೀಡಿದರು.

ಈ ಸುದ್ದಿ ಓದಿದ್ದೀರಾ? ತುಮಕೂರು | ನನ್ನದು ಟೀಕೆ ಟಿಪ್ಪಣಿಯ ರಾಜಕಾರಣವಲ್ಲ, ಅಭಿವೃದ್ಧಿಯ ರಾಜಕಾರಣ: ಮುದ್ದಹನುಮೇಗೌಡ

ವಿಧಾನ ಪರಿಷತ್ ಮಜಿ ಸದಸ್ಯ ಆರ್ ಪ್ರಸನ್ನಕುಮಾರ್, ಎಂಎಡಿಬಿ ಅಧ್ಯಕ್ಷ ಆರ್ ಎಂ ಮಂಜುನಾಥ್ ಗೌಡ, ಎಸ್ ರವಿಕುಮಾರ್, ಜಿ ಡಿ ಮಂಜುನಾಥ್, ಎನ್ ರಮೇಶ್, ಜಿ ಪಲ್ಲವಿ, ಕಲಗೋಡು ರತ್ನಾಕರ್, ಎಂ ಶ್ರೀಕಾಂತ್, ವೈ ಎಚ್ ನಾಗರಾಜ್, ಚಂದ್ರಭೂಪಾಲ್, ರವಿಕುಮಾರ್, ಮಲೆಶಂಕರ ರಮೇಶ, ಸಿ ಹನುಮಂತ್, ಇಕ್ಕೇರಿ ರಮೇಶ್, ಅನಿತಾ ಕುಮಾರಿ ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X