ಬೀದರ್‌ | ಕೇಂದ್ರ ಸಚಿವ ಭಗವಂತ ಖೂಬಾಗೆ ಇದು ಕೊನೆ ಚುನಾವಣೆ: ಸಚಿವ ಈಶ್ವರ ಖಂಡ್ರೆ

Date:

Advertisements

ಕೇಂದ್ರ ಸಚಿವ ಭಗವಂತ ಖೂಬಾ ಅವರ ದುರಂಕಾರ, ಅಧಿಕಾರದ ದರ್ಪ ಹಾಗೂ ಅವರ ನಡವಳಿಕೆಯಿಂದ ಬೀದರ್‌ ಜಿಲ್ಲೆಯ ಜನರು ಬೇಸತ್ತು ಹೋಗಿದ್ದಾರೆ. ಅವರ ಹತ್ತು ವರ್ಷಗಳ ಆಡಳಿತ ಅಂತ್ಯಗೊಳಿಸಲು ಜನರು ತೀರ್ಮಾನಿಸಿದ್ದಾರೆ. ಇದು ಖೂಬಾ ಅವರಿಗೆ ಕೊನೆಯ ಚುನಾವಣೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು.

ಬೀದರ್‌ನಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, “ಭಗವಂತ ಖೂಬಾ ಅವರು ಎರಡು ಸಲ ಸಂಸದರಾಗಿದ್ದಾರೆ. ಕೇಂದ್ರದಲ್ಲಿ ಸಚಿವರೂ ಆಗಿದ್ದಾರೆ. ಆದರೆ ಹತ್ತು ವರ್ಷಗಳಲ್ಲಿ ಅವರ ಕೊಟ್ಟ ಒಂದೇ ಒಂದು ಭರವಸೆ ಈಡೇರಿಸಿಲ್ಲ. ಹತ್ತು ವರ್ಷದ ಸಾಧನೆ ಏನೆಂಬುದು ಜನ ಉತ್ತರ ಬಯಸುತ್ತಿದ್ದಾರೆ. ಸುಳ್ಳು ಅವರ ದೇವ್ರು, ಇದೇ ಅವರ ಸಾಧನೆ” ಎಂದು ಖಂಡ್ರೆ ಟೀಕಿಸಿದರು.

“ಜಿಲ್ಲೆಗೆ ʼಸಿಪೆಟ್‌ʼ ತರುತ್ತೇನೆ ಎಂದ್ರು ಅದೂ ಬರಲಿಲ್ಲ, ಎರಡು ವಾರದಲ್ಲಿ ಎಫ್‌ಎಮ್ ರೇಡಿಯೋ ಕೇಂದ್ರ ಆರಂಭಿಸಲಾಗುವುದು, ಪ್ರಧಾನಿ ಮೋದಿ ಅವರಿಂದ ಉದ್ಘಾಟನೆಗೊಳ್ಳಲಿದೆ ಎಂದು ಹೇಳಿದರು. ಅದೂ ಆಗಲಿಲ್ಲ. ನಮ್ಮ ಅವಧಿಯಲ್ಲಿ ಶುರುವಾದ ಬೀದರ್‌ – ಬೆಂಗಳೂರು ವಿಮಾನಯಾನ ಅದೂ ನಿಂತು ಹೋಗಿದೆ. ಬಿಎಸ್‌ಎಸ್‌ಕೆ ಆರಂಭಿಸುತ್ತೇನೆ ಎಂದು ಭರವಸೆ ಕೊಟ್ಟಿದ್ದರೂ ಆದರೆ ಬಿಜೆಪಿ ಆಡಳಿತವಿದ್ದರೂ ಸಹ ಅನುದಾನ ಕೊಡಿಸಬಾರದೆಂದು ಷಡ್ಯಂತ್ರ ರೂಪಿಸಿದರು. ಬೀದರ್‌ ಸಹಕಾರ ಸಕ್ಕರೆ ಕಾರ್ಖಾನೆ ನಾಶವಾಗಲು ಭಗವಂತ ಖುಬಾ ಅವರೇ ನೇರ ಕಾರಣ” ಎಂದು ಆರೋಪಿಸಿದರು.

Advertisements

ಸಂಸದ ಭಗವಂತ ಖುಬಾ ಅವರು ನನ್ನ ಕೊಲೆ ಮಾಡಿಸಿ ಉಪಚುನಾವಣೆಗೆ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಅವರ ಪಕ್ಷದ ಶಾಸಕರೊಬ್ಬರು ಬಹಿರಂಗ ಸಭೆಯಲ್ಲಿಯೇ ಅವರ ಪಕ್ಷದ ಮುಖಂಡರ ಕಾಲಿಗೆ ಬಿದ್ದು ಗಂಭೀರವಾಗಿ ಆರೋಪಿಸಿದರು. ಆದರೂ ಅದಕ್ಕೆ ಖೂಬಾ ಸ್ಪಷ್ಟನೆ ಕೊಡಲಿಲ್ಲ. ಇವರ ಆಡಳಿತ ವೈಖರಿ ಹೇಗಿದೆ ಎಂಬುದು ಅವರ ಪಕ್ಷದವರಿಂದಲೇ ಬಹಿರಂಗ ಆಗುತ್ತದೆ” ಎಂದರು.

“ಬಿಜೆಪಿಯ ದುರಾಡಳಿತದಿಂದ ಬೆಲೆ ಏರಿಕೆಯಾಗಿದೆ. ದೇಶದಲ್ಲಿ ಅರಾಜಕತೆ, ಪ್ರಜಾಪ್ರಭುತ್ವ, ಸಂವಿಧಾನ ಅಪಾಯದಲ್ಲಿದೆ. ಯಾವ ಸರ್ವಾಧಿಕಾರಿ ಧೋರಣೆ ನಡೀತಾ ಇದೆ. ಇಡಿ, ಸಿಬಿಐ ದುರ್ಬಳಕೆ ಮಾಡುತ್ತಿರುವುದು, ಅಭಿವ್ಯಕ್ತಿ ಸ್ವಾತಂತ್ರ್ಯದ ಹರಣ ನಡೆಯುತ್ತಿರುವುದು ರಾಜ್ಯ, ರಾಷ್ಟ್ರದ ಜನ ಗಮನಿಸುತ್ತಿದ್ದಾರೆ. ಈ ಲೋಕಸಭೆ ಚುನಾವಣೆಯಲ್ಲಿ ತಕ್ಕಪಾಠ ಕಲಿಸುತ್ತಾರೆ” ಎಂದು ಹೇಳಿದರು.

“ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್‌ 20 ರಿಂದ 25 ಸ್ಥಾನ ಗೆದ್ದೇ ಗೆಲ್ಲುತ್ತೇವೆ. ಬೀದರ್‌ ಕ್ಷೇತ್ರದಲ್ಲಿ ಕೇಂದ್ರ ಸಚಿವ ಭಗವಂತ ಖೂಬಾ ಅವರಿಗೆ ಇದು ಕೊನೆ ಚುನಾವಣೆ ಎಂದು ಹೇಳಬಹುದು. ಅವರ ವರ್ತನೆಯಿಂದ ಜನ ಅವರನ್ನು ತಿರಸ್ಕರಿಸಿದ್ದಾರೆ. ರಸಗೊಬ್ಬರ ಕೇಳಿದ ವ್ಯಕ್ತಿಗೆ ಬೈದು ಸಸ್ಪೆಂಡ್‌ ಮಾಡಿದ್ದಾರೆ. ಇದ್ದರಿಂದ ಜನರಿಗೆ ಏನು ಸಂದೇಶ ಕೊಟ್ಟಿದ್ದಾರೆ” ಎಂದು ಖುಬಾ ವಿರುದ್ಧ ಕಿಡಿಕಾರಿದರು.

“ಭಗವಂತ ಖೂಬಾ ಅವರೇ ಜಿಲ್ಲೆಗೆ ನಿಮ್ಮ ಕೊಡುಗೆ ಏನಿದೆ, ಜನರ ಸಂಕಷ್ಟಗಳಿಗೆ ಎಂದಾದರೂ ಸ್ಪಂದಿಸಿದ್ದೀರಾ? ಕೋವಿಡ್‌ ಸಂದರ್ಭದಲ್ಲಿ ನಾವೆಲ್ಲರೂ ರೋಗಿಗಳ ಚಿಕಿತ್ಸೆಗೆ ಬೇಕಾದ ವ್ಯವಸ್ಥೆ ಕಲ್ಪಿಸಲು ಕಳಕಳಿಯಿಂದ ಹಗಲಿರಳು ಶ್ರಮಿಸುತ್ತಿದ್ದ ವೇಳೆ ಖುಬಾರವರು ಮೌನಾಚರಣೆ ಮಾಡಿದರು. ಇಂತಾ ಸಂಸದರು ಇನ್ನೊಮ್ಮೆ ಬೇಕಾ ಎಂಬುದು ಜನತೆ ಯೋಚಿಸಬೇಕು” ಎಂದು ಹೇಳಿದರು.

“ಲೋಕಸಭಾ ಚುನಾವಣೆ ಪ್ರಚಾರಕ್ಕೆ ಕಾಂಗ್ರೆಸ್ಸಿನ ರಾಷ್ಟ್ರೀಯ ನಾಯಕರಾದ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ, ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ್‌ ಖರ್ಗೆ, ಸರ್ಜೆವಾಲ್‌ ಹಾಗೂ ರಾಜ್ಯದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌ ಸೇರಿದಂತೆ ಪಕ್ಷದ ಹಿರಿಯ ಮುಖಂಡರಿಗೆ ಆಹ್ವಾನಿಸಲಾಗಿದೆ. ನಾವೆಲ್ಲರೂ ಒಗ್ಗಟಾಗಿ ಕಾಂಗ್ರೆಸ್‌ ಅಭ್ಯರ್ಥಿಯ ಗೆಲುವಿಗಾಗಿ ಹಗಲಿರುಳು ಶ್ರಮಿಸುತ್ತಿದ್ದೇವೆ” ಎಂದು ಮಾಹಿತಿ ನೀಡಿದರು.

“ರಾಜ್ಯದಲ್ಲಿ ನಮ್ಮ ಸರ್ಕಾರವಿದೆ. ಹೀಗಾಗಿ ನಮ್ಮ ಪಕ್ಷದ ಸಂಸದರಾಗಿದ್ದರೆ ಉತ್ತಮ ಆಡಳಿತ ನೀಡುವ ಮೂಲಕ ಈ ಭಾಗದ ಸರ್ವಾಂಗೀಣ ಅಭಿವೃದ್ಧಿಗೆ ಮತ್ತಷ್ಟು ಸಾಧ್ಯ ಆಗುತ್ತದೆ. ಕ್ಷೇತ್ರದ ಜನಪರ ಆಡಳಿತ ದೃಷ್ಟಿಯಿಂದ ಜನತೆ ಈ ಬಾರಿ ಕಾಂಗ್ರೆಸ್‌ ಪಕ್ಷಕ್ಕೆ ಆಶೀರ್ವದಿಸಬೇಕೆಂದು ಕೋರಿದರು. ಕ್ಷೇತ್ರದ ಜನ ಬದಲಾವಣೆ ಬಯಸುತ್ತಿದ್ದಾರೆ. ಹೀಗಾಗಿ ಈ ಬಾರಿ ಬೀದರ್‌ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿ ಗೆದ್ದೇ ಗೆಲ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ನನ್ನನ್ನು ಎನ್‌ಕೌಂಟರ್ ಮಾಡುವ ಜೀವ ಬೆದರಿಕೆ ಪತ್ರ ಬಂದಿದೆ: ಸಚಿವ ಪ್ರಿಯಾಂಕ್ ಖರ್ಗೆ

ಪತ್ರಿಕಾಗೋಷ್ಠಿಯಲ್ಲಿ ಸಚಿವ ರಹೀಂ ಖಾನ್‌, ವಿಧಾನ ಪರಿಷತ್‌ ಸದಸ್ಯರಾದ ಅರವಿಂದ ಕುಮಾರ್‌ ಅರಳಿ, ಭೀಮರಾವ್‌ ಪಾಟೀಲ್‌, ಮಾಜಿ ಸಚಿವ ರಾಜಶೇಖರ್‌ ಪಾಟೀಲ್‌ ಹುಮನಾಬಾದ್,‌ ಮಾಜಿ ಶಾಸಕ ಅಶೋಕ ಖೇಣಿ, ಮಾಜಿ ಎಂಎಲ್‌ಸಿ ವಿಜಯ ಸಿಂಗ್‌, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ, ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಾಲಾ ಬಿ.ನಾರಾಯಣರಾವ್‌, ಮಾಜಿ ಸಂಸದ ನರಸಿಂಗರಾವ್‌ ಸೂರ್ಯವಂಶಿ, ಗ್ಯಾರಂಟಿ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಅಮೃತರಾವ ಚಿಮಕೋಡೆ, ಮುಖಂಡರಾದ ಸುಭಾಷ ರಾಠೋಡ್‌, ಆನಂದ ದೇವಪ್ಪಾ, ಭೀಮಶೇನ್‌ರಾವ್‌ ಶಿಂಧೆ, ಕೆ.ಪುಂಡಲಿಕರಾವ್‌, ಕಾಂಗ್ರೆಸ್‌ ಅಭ್ಯರ್ಥಿ ಸಾಗರ್‌ ಖಂಡ್ರೆ ಸೇರಿದಂತೆ ಪಕ್ಷದ ಮುಖಂಡರು ಉಪಸ್ಥಿತರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X