- ತಡೆಯಾಜ್ಞೆಯನ್ನು ಹಲವು ಸಲ ವಿಸ್ತರಿಸಿದ್ದ ಹೈಕೋರ್ಟ್
- ಸಿಬಿಐ ತನಿಖೆ ರದ್ದು ಕೋರಿದ್ದ ಅರ್ಜಿ ಸಲ್ಲಿಸಿದ್ದ ಡಿಕೆಶಿ
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಿಬಿಐ ತನಿಖೆ ರದ್ದುಗೊಳಿಸುವಂತೆ ಕೋರಿ ಅರ್ಜಿ ಸಲ್ಲಿಸಿದ್ದ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಮೇ ಅಂತ್ಯಕ್ಕೆ ಅಂದರೆ, ರಾಜ್ಯ ವಿಧಾನಸಭಾ ಚುನಾವಣೆ ಮುಗಿಯುವವರೆಗೂ ಮುಂದೂಡಿ, ಮುಂದಿನ ವಿಚಾರಣೆವರೆಗೆ ಸಿಬಿಐ ತನಿಖೆಗೆ ತಡೆಯಾಜ್ಞೆ ವಿಸ್ತರಿಸಿದೆ.
ಆದಾಯಕ್ಕೂ ಹೆಚ್ಚಿನ ಆಸ್ತಿ ಗಳಿಕೆ ಪ್ರಕರಣದಲ್ಲಿ ಡಿಕೆ ಶಿವಕುಮಾರ್ ಅವರ ಮೇಲೆ ಸರ್ಕಾರವು ಸಿಬಿಐ ತನಿಖೆಗೆ ಆದೇಶಿಸಿತ್ತು, ಇದನ್ನು ಪ್ರಶ್ನಿಸಿದ್ದ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ತನ್ನ ವಿರುದ್ಧ ನಡೆಯುತ್ತಿರುವ ಸಿಬಿಐ ತನಿಖೆಗೆ ತಡೆಯಾಜ್ಞೆ ನೀಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು.
ಈ ಸುದ್ದಿ ಓದಿದ್ದೀರಾ? : ಡಿಕೆಶಿ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ; ಆದೇಶ ಕಾಯ್ದಿರಿಸಿದ ಹೈಕೋರ್ಟ್
ಡಿಕೆಶಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಕೈಗೆತ್ತಿಕೊಂಡಿದ್ದ ಹೈಕೋರ್ಟ್ ನ್ಯಾಯಾಧೀಶರು ಅರ್ಜಿದಾರರ ಪರ ಹಾಗೂ ಸಿಬಿಐ ಪರ ವಾದಗಳನ್ನು ಆಲಿಸಿ, ಹಲವು ಸಲ ತಡೆಯಾಜ್ಞೆಯನ್ನು ವಿಸ್ತರಿಸುತ್ತಾ ಬಂದಿತ್ತು.