ಮಂಡ್ಯ ಕ್ಷೇತ್ರ ಬಿಟ್ಟು ಹೋಗುತ್ತೇನೆಂದು ಎಲ್ಲೂ ಹೇಳಿಲ್ಲ; ವಿಜಯೇಂದ್ರ ಭೇಟಿ ಬಳಿಕ ಸುಮಲತಾ ಹೇಳಿಕೆ

Date:

Advertisements

ಬಿಜೆಪಿ-ಜೆಡಿಎಸ್‌ ಮೈತ್ರಿಗೆ ಬೆಂಬಲ ನೀಡಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಅವರು ಕೇಳಿದ್ದಾರೆ. ಆದರೆ, ಬೆಂಬಲಿಗರ ಸಭೆ ಬಳಿಕ ನನ್ನ ನಿರ್ಧಾರ ತಿಳಿಸುತ್ತೇನೆ ಎಂದು ಹೇಳಿದ್ದೇನೆ. ಮಂಡ್ಯ ಕ್ಷೇತ್ರ ಬಿಟ್ಟು ಹೋಗುತ್ತೇನೆ ಎಂದು ನಾನು ಎಲ್ಲೂ ಹೇಳಿಲ್ಲ ಎಂದು ಸಂಸದೆ ಸುಮಲತಾ ಅಂಬರೀಷ್‌ ಹೇಳಿದರು.

ಮಂಡ್ಯ ಲೋಕಸಭಾ ಕ್ಷೇತ್ರ ಜೆಡಿಎಸ್​ ಪಾಲಾಗಿರುವುದರಿಂದ ಸುಮಲತಾ ಅಂಬರೀಷ್‌ ಅವರು ಅಸಮಾಧಾನಗೊಂಡಿದ್ದು, ಅವರನ್ನು ಮನವೊಲಿಸಲು ವಿಜಯೇಂದ್ರ ಶುಕ್ರವಾರ ಬೆಂಗಳೂರಿನ ಜೆಪಿ ನಗರದಲ್ಲಿ ಅವರ ನಿವಾಸಕ್ಕೆ ಭೇಟಿ ನೀಡಿ ಚರ್ಚಿಸಿದರು. ಆ ಬಳಿಕ ಸುಮಲತಾ ಭೇಟಿ ವಿವರವನ್ನು ಸುದ್ದಿಗಾರರಿಗೆ ತಿಳಿಸಿದರು.

“ಮಂಡ್ಯ ಲೋಕಸಭಾ ಕ್ಷೇತ್ರವನ್ನು ಬಿಜೆಪಿಯೇ ಉಳಿಸಿಕೊಳ್ಳಬೇಕಿತ್ತು. ನಾಳೆ(ಮಾರ್ಚ್ 30) ಮಂಡ್ಯದಲ್ಲಿ ನಾನು ಬೆಂಬಲಿಗರ ಜೊತೆ ಸಭೆ ನಡೆಸುತ್ತಿದ್ದೇನೆ. ನನ್ನ ನಿಲುವನ್ನು ಮಂಡ್ಯದಲ್ಲೇ ತಿಳಿಸಲು ಇಷ್ಟಪಡುತ್ತೇನೆ” ಎಂದು ಕುತೂಹಲದ ಹೇಳಿಕೆ ನೀಡಿದರು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಸವಣ್ಣ, ಕುವೆಂಪು, ಶರೀಫರು ನಡೆದಾಡಿದ ಈ ನೆಲಕ್ಕೆ ಯೋಗಿ ಮಾದರಿಯ ಆಡಳಿತ ಬೇಕೇ ಭೈರಪ್ಪನವರೇ?

ಸುಮಲತಾ ಭೇಟಿ ಬಳಿಕ ಸುದ್ದಿಗಾರರೊಂದಿಗೆ ವಿಜಯೇಂದ್ರ ಮಾತನಾಡಿ, “ಸುಮಲತಾ ಅವರ ಜೊತೆ ಉತ್ತಮ ವಿಚಾರಗಳನ್ನು ಚರ್ಚೆ ಮಾಡಿದ್ದೇವೆ. ಅವರು ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳುವ ವಿಶ್ವಾಸವಿದೆ. ಸುಮಲತಾ ಅಂಬರೀಷ್‌​​ ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಒಳ್ಳೆ ನಿರ್ಧಾರ ಮಾಡುತ್ತಾರೆಂಬ ವಿಶ್ವಾಸವಿದೆ” ಎಂದರು.

“ಸಂಸದರಾಗಿ ಅವರು ಅವರ ಬೆಂಬಲಿಗರ ಸಲಹೆ ಪಡೆಯಬೇಕಾಗುತ್ತದೆ. ನಾನೂ ಕೂಡಾ ಅದೇ ಸಲಹೆ ಕೊಟ್ಟಿದ್ದೇನೆ. ಒಳ್ಳೆಯ ತೀರ್ಮಾನ ಮಾಡುತ್ತಾರೆ ಎಂಬ ವಿಶ್ವಾಸವಿದೆ. ಎಲ್ಲವೂ ರಾಷ್ಟ್ರಮಟ್ಟದಲ್ಲಿ ಚರ್ಚೆ ಆಗಿದೆ. ಸುಮಲತಾ ಅವರಿಗೂ ಈ ಬಗ್ಗೆ ಎಲ್ಲ ಮಾಹಿತಿ ಇದೆ. ಇದರ ನಡುವೆಯೂ ಮೋದಿಯವರಿಗೆ ಶಕ್ತಿ ತುಂಬಬೇಕು ಎಂಬ ಸದಭಿಪ್ರಾಯವೂ ಅವರಲ್ಲಿದೆ” ಎಂದು ಹೇಳಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಧಾನಸಭೆಯ ಮುಂಗಾರು ಅಧಿವೇಶನ ಮುಕ್ತಾಯ: ಒಟ್ಟು 39 ವಿಧೇಯಕ ಅಂಗೀಕಾರ

ಕಳೆದ ಆಗಸ್ಟ್ 11ರಿಂದ ಆರಂಭಗೊಂಡಿದ್ದ 16ನೇ ವಿಧಾನಸಭೆಯ ಮುಂಗಾರು ಅಧಿವೇಶನವು ಇಂದು(ಆ.22)...

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

Download Eedina App Android / iOS

X