ಬಾಕಿ ಇರಿಸಿದ್ದ ನಾಲ್ಕು ಕ್ಷೇತ್ರಗಳ ಪೈಕಿ ಮೂರು ಕ್ಷೇತ್ರದ ಅಭ್ಯರ್ಥಿ ಪ್ರಕಟಿಸಿದ ಕಾಂಗ್ರೆಸ್: ಕಗ್ಗಂಟಾದ ಕೋಲಾರ!

Date:

Advertisements

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕದ ಮೂರು ಕ್ಷೇತ್ರಗಳಿಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ.

ಬಾಕಿ ಉಳಿಸಿದ್ದ ನಾಲ್ಕು ಕ್ಷೇತ್ರಗಳ ಪೈಕಿ ಚಾಮರಾಜನಗರ, ಬಳ್ಳಾರಿ ಮತ್ತು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿಗಳನ್ನು ಘೋಷಿಸಿದ್ದು, ಕೋಲಾರ ಕ್ಷೇತ್ರದ ಟಿಕೆಟ್ ಮಾತ್ರ ಕಾಯ್ದಿರಿಸಿದೆ.

ನಿರೀಕ್ಷೆಯಂತೆ ಬಳ್ಳಾರಿ ಲೋಕಸಭಾ ಟಿಕೆಟ್ ಇ ತುಕರಾಂ, ಚಾಮರಾಜನಗರ ಕ್ಷೇತ್ರದ ಟಿಕೆಟ್​ ಸಚಿವ ಎಚ್​ಸಿ ಮಹದೇವಪ್ಪ ಅವರ ಪುತ್ರ ಸುನೀಲ್ ಬೋಸ್​ಗೆ ನೀಡಲಾಗಿದೆ.

Advertisements

ಚಿಕ್ಕಬಳ್ಳಾಪುರದಿಂದ ಯುವ ಕಾಂಗ್ರೆಸ್ ಮುಖಂಡ ರಕ್ಷಾ ರಾಮಯ್ಯಗೆ ಟಿಕೆಟ್ ನೀಡಿದೆ. ಈ ಟಿಕೆಟ್ ಘೋಷಣೆಯ‌ ಮೂಲಕ ಕಾಂಗ್ರೆಸ್ ಒಟ್ಟು 28 ಕ್ಷೇತ್ರಗಳ ಪೈಕಿ 27 ಕ್ಷೇತ್ರದ ಅಭ್ಯರ್ಥಿಗಳನ್ನು ಘೋಷಿಸಿದಂತಾಗಿದೆ.

ಕಗ್ಗಂಟಾದ ಕೋಲಾರ!

ಕೋಲಾರ ಲೋಕಸಭಾ ಕ್ಷೇತ್ರದ ಟಿಕೆಟ್ ವಿಚಾರವಾಗಿ ಕಾಂಗ್ರೆಸ್‌ನ ಮುಖಂಡರ ನಡುವೆ ಭಿನ್ನಾಭಿಪ್ರಾಯ ಇರುವ ಕಾರಣ, ಬಣ ರಾಜಕೀಯ ಪ್ರಾರಂಭವಾಗಿತ್ತು. ಸಚಿವ ಮುನಿಯಪ್ಪ ತನ್ನ ಅಳಿಯನಿಗೆ ಟಿಕೆಟ್ ನೀಡಲು ಶ್ರಮಿಸುತ್ತಿದ್ದಾರೆ. ಆದರೆ ಇದಕ್ಕೆ ರಮೇಶ್ ಕುಮಾರ್ ಬಣ ತೀವ್ರ ವಿರೋಧ ವ್ಯಕ್ತಪಡಿಸಿತ್ತು. ಅಲ್ಲದೇ, ಮುನಿಯಪ್ಪ ಕುಟುಂಬಕ್ಕೆ ಟಿಕೆಟ್ ನೀಡಿದರೆ ಐವರು ಶಾಸಕರು ರಾಜೀನಾಮೆ ನೀಡುವುದಾಗಿ ಘೋಷಿಸಿದ್ದರು. ಆ ಬಳಿಕ ನಿನ್ನೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಸಂಧಾನ ನಡೆಸಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಹನುಮಂತ ಮೊದಲ ಬಾಹ್ಯಾಕಾಶ ಯಾತ್ರಿಕ’ ಎಂದ ಬಿಜೆಪಿ ನಾಯಕ ಅನುರಾಗ್ ಠಾಕೂರ್; ಟ್ರೋಲ್‌ಗೆ ಗುರಿ

"ಭಗವಾನ್ ಹನುಮಂತ ಮೊದಲ ಬಾಹ್ಯಾಕಾಶ ಯಾತ್ರಿಕ" ಎಂದು ಹೇಳುವ ಮೂಲಕ ಬಿಜೆಪಿ...

ಡಿ ಕೆ ಶಿವಕುಮಾರ್‌ ಆರ್​ಎಸ್​ಎಸ್ ಗೀತೆ ಹಾಡಿದ್ದಕ್ಕೆ ಕ್ಷಮೆ ಕೇಳಬೇಕು: ಬಿ ಕೆ ಹರಿಪ್ರಸಾದ್ ಆಗ್ರಹ

ಕೆಪಿಸಿಸಿ ಅಧ್ಯಕ್ಷರಾಗಿ ಡಿ ಕೆ ಶಿವಕುಮಾರ್‌ ಆರ್​ಎಸ್​ಎಸ್ ಗೀತೆ ಹಾಡಿದ್ದರೆ ಕ್ಷಮೆ...

ಕಲ್ಯಾಣ ಕರ್ನಾಟಕದಲ್ಲಿ 36 ಪಿಯು ಉಪನ್ಯಾಸಕರ ಹುದ್ದೆ ಭರ್ತಿಗೆ ಸರ್ಕಾರ ಅನುಮತಿ!

ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಾಲಾ ಶಿಕ್ಷಣ ಇಲಾಖೆಯ (ಪದವಿ ಪೂರ್ವ) ಸರ್ಕಾರಿ...

ಆಧಾರ್ ಕಾರ್ಡ್‌ ಪೌರತ್ವದ ಪುರಾವೆಯಲ್ಲ: ಬಿಜೆಪಿಯ ಅಮಿತ್ ಮಾಳವೀಯ

ಆಧಾರ್ ಕಾರ್ಡ್‌ ಪೌರತ್ವದ ಪುರಾವೆಯಲ್ಲ. ಸುಪ್ರೀಂ ಕೋರ್ಟ್ ತನ್ನ ಮಧ್ಯಂತರ ಆದೇಶದಲ್ಲಿ...

Download Eedina App Android / iOS

X