ಉತ್ತರ ಪ್ರದೇಶ| ಹೊಲಕ್ಕೆ ನುಗ್ಗಿದ ಮೇಕೆ; ದಲಿತ ವೃದ್ಧ ಮಹಿಳೆ ಮೇಲೆ ಅಮಾನುಷ ಹಲ್ಲೆ

Date:

Advertisements

ಮೇಕೆ ದಾರಿ ತಪ್ಪಿ ಹೊಲವೊಂದಕ್ಕೆ ನುಗ್ಗಿದ ಕಾರಣಕ್ಕೆ ಸುಮಾರು 60 ವರ್ಷದ ದಲಿತ ಮಹಿಳೆಯೊಬ್ಬರ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿ ನಡೆದಿರುವುದಾಗಿ ವರದಿಯಾಗಿದೆ.

ಹೊಲದ ಮಾಲೀಕರು ಮಹಿಳೆಗೆ ಕೋಲಿನಿಂದ ಹೊಡೆದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಆರೋಪಿ ಹೊಲದ ಮಾಲೀಕ ಮಹಿಳೆಗೆ ಜಾತಿ ನಿಂಧನೆ ಮಾಡಿ, ನಿರ್ದಯವಾಗಿ ಥಳಿಸಿದ್ದಾನೆ ಎಂದು ತಿಳಿದುಬಂದಿದೆ. ಹಲ್ಲೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಸಂತ್ರಸ್ತೆಗೆ ನ್ಯಾಯ ದೊರಕಿಸಿಕೊಡುವಂತೆ ಆಗ್ರಹಿಸಿ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನು ಓದಿದ್ದೀರಾ?  ಜಾತಿ ದೌರ್ಜನ್ಯ | ಮದುವೆ ಮೆರವಣಿಗೆಯಲ್ಲಿ ದಲಿತ ವರನನ್ನು ಕುದುರೆಯಿಂದ ಇಳಿಸಿದ ಸವರ್ಣೀಯರು

Advertisements

ಈ ಘಟನೆಯು ಭಾರತದ ಕೆಲವು ಭಾಗಗಳಲ್ಲಿ ದಲಿತರ ಮೇಲೆ ನಡೆಯುತ್ತಿರುವ ಹಿಂಸಾಚಾರಗಳ ಮೇಲೆ ಮತ್ತೆ ಬೆಳಕು ಚೆಲ್ಲಿದೆ. ಇನ್ನು ಸ್ಥಳೀಯ ಅಧಿಕಾರಿಗಳು ಈ ಬಗ್ಗೆ ತನಿಖೆ ಆರಂಭಿಸಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ದುಷ್ಕರ್ಮಿಗಳ ವಿರುದ್ಧ ಶೀಘ್ರ ಕ್ರಮಕೈಗೊಳ್ಳುವ ಭರವಸೆ ನೀಡಿದ್ದಾರೆ.

ಫೆಬ್ರವರಿಯಲ್ಲಿ, ಗುಜರಾತ್‌ನ ಗಾಂಧಿನಗರದಲ್ಲಿ ದಲಿತ ಯುವಕನ ಮದುವೆಯ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ್ದಕ್ಕಾಗಿ ಹಲ್ಲೆ ನಡೆಸಲಾಗಿತ್ತು. ವರ ಸುಮಾರು 100 ಮಂದಿ ಭಾಗವಹಿಸಿದ್ದ ಮೆರವಣಿಗೆಯಲ್ಲಿ ಕುದುರೆಯ ಮೇಲೆ ಸವಾರಿ ಮಾಡುತ್ತಿದ್ದು, ಮೋಟಾರು ಸೈಕಲ್‌ನಲ್ಲಿ ಬಂದ ವ್ಯಕ್ತಿಯೊಬ್ಬ ಅಡ್ಡಗಟ್ಟಿ ಯುವಕನನ್ನು ಕುದುರೆಯಿಂದ ಕೆಳಗೆ ಎಳೆದು ಕಪಾಳಮೋಕ್ಷ ಮಾಡಿದ್ದನು. ಆರೋಪಿಯು ತನ್ನ ಸಮುದಾಯದವರು ಮಾತ್ರ ಕುದುರೆ ಸವಾರಿ ಮಾಡಬಹುದು ಎಂದು ಹೇಳುವ ಮೂಲಕ ಜಾತಿ ನಿಂದನೆ ಮಾಡಿದ್ದನು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

Download Eedina App Android / iOS

X