ನಮ್ಮ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಮೇಲೆ ಕೊಟ್ಟ ಮಾತಿನಂತೆ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತರುವ ಮೂಲಕ ನುಡಿದಂತೆ ನಡೆದಿದ್ದೇವೆ. ರಾಯಚೂರು ಲೋಕಸಭಾ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿ ಜತೆಗೆ ದೇಶದ ಅಭಿವೃದ್ಧಿಗಾಗಿಯೂ ಕಾಂಗ್ರೆಸ್ ಅಭ್ಯರ್ಥಿ ಜಿ ಕುಮಾರ ನಾಯಕರಿಗೆ ಬೆಂಬಲಿಸಬೇಕು” ಎಂದು ಸಚಿವ ಎನ್ ಎಸ್ ಬೋಸರಾಜು ಮನವಿ ಮಾಡಿದರು.
ರಾಯಚೂರು ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಆಯೋಜಿಸಿದ್ದ ರಾಯಚೂರು ಲೋಕಸಭೆ ಕ್ಷೇತ್ರದ ರಾಯಚೂರು ನಗರ ವಿಧಾನಸಭೆ ಕ್ಷೇತ್ರದ ಪ್ರಮುಖ ಕಾರ್ಯಕರ್ತರ ಸಮಾವೇಶ ಕಾರ್ಯಕ್ರಮದಲ್ಲಿ ಮಾತನಾಡಿದರು.
ಈ ಸುದ್ದಿ ಓದಿದ್ದೀರಾ? ಕಲಬುರಗಿ | 6ನೇ ಗ್ಯಾರಂಟಿ ಪರಿಣಾಮ ಮನೆ ಖಾಲಿ: ಸಚಿವ ಪ್ರಿಯಾಂಕ್ ಖರ್ಗೆ ವ್ಯಂಗ್ಯ
ಈ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಾದ್ಯಕ್ಷ ಎ ವಸಂತ ಕುಮಾರ್, ಮುಖಂಡ ಪಾರಸಮಾಲ್ ಸುಖಾಣಿ, ಶರಣಗೌಡ ಬಯ್ಯಾಪೂರು, ಮಾಜಿ ಶಾಸಕರಾದ ಸೈಯದ್ ಯಾಸೀನ್, ಬಸವರಾಜ ಪಾಟೀಲ್ ಇಟಗಿ, ಮೊಹ್ಮದ್ ಶಾಲಂ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಸವರಾಜ ರೆಡ್ಡಿ, ಕುರಬದೊಡ್ಡಿ ಆಂಜನೇಯ್ಯ, ಜಯಣ್ಣ, ಕೆ ಶಾಂತಪ್ಪ, ಬಶೀರುದ್ದೀನ್, ರಾಜಶೇಖರ್ ರಾಮಸ್ವಾಮಿ, ಜಿ ಶಿವಮೂರ್ತಿ, ರುದ್ರಪ್ಪ ಅಂಗಡಿ, ಅಮರೇಗೌಡ ಹಂಚಿನಾಳ, ಬಿ ರಮೇಶ್ ಸೇರಿದಂತೆ ಬಹುತೇಕರು ಇದ್ದರು.
ವರದಿ : ಹಫೀಜುಲ್ಲ