ಹಲಸಿನ ಹಣ್ಣು ಕೀಳಲು ಹೋಗಿ ಆಯತಪ್ಪಿ ಮರದ ಮೇಲಿಂದ ಬಿದ್ದು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಬಸ್ ಚಾಲಕ ಮೃತಪಟ್ಟ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಅರಳಸಂದ್ರ ಗ್ರಾಮದಲ್ಲಿ ನಡೆದಿದೆ.
ಮಂಜುನಾಥ್ (34) ಮೃತ ವ್ಯಕ್ತಿ. ಇವರು ಪೀಣ್ಯದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಘಟಕದಲ್ಲಿ ಬಸ್ ಚಾಲಕರಾಗಿ ಕಳೆದ 15 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದರು.
ಮಾರ್ಚ್ 30ರಂದು ಮರದಿಂದ ಹಲಸಿನ ಹಣ್ಣು ಕೀಳಲು ತೆರಳಿದ್ದಾರೆ. ಈ ವೇಳೆ, ಆಯತಪ್ಪಿ ಮರದ ಮೇಲಿನಿಂದ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ನೆಲಮಂಗಲ ಸಾರ್ವಜನಿಕ ಆಸ್ಪತ್ರೆಗೆ ಮೃತದೇಹ ರವಾನೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಸಂವಿಧಾನಕ್ಕೆ ಬದ್ಧರಾಗಿ ರಾಜ್ಯಪಾಲರು ಕಾರ್ಯನಿರ್ವಹಿಸಬೇಕು: ಸುಪ್ರೀಂ ಕೋರ್ಟ್ ನ್ಯಾ. ನಾಗರತ್ನ
ಈ ಸಂಬಂಧ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.