ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಗೆ ನಕಲು ಮಾಡಲು ಸಹಕರಿಸಿ, ಕರ್ತವ್ಯಲೋಪ ಎಸಗಿದ ನಾಲ್ವರು ಶಿಕ್ಷಕರನ್ನು ಅಮಾನತು ಮಾಡಲಾಗಿದೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ನಾಲ್ಕು ಶಾಲೆಗಳ ನಾಲ್ವರು ಶಿಕ್ಷಕರು ಅಮಾನತಾಗಿದ್ದಾರೆ.
ಚಳ್ಳಕೆರೆ ಮಂಜರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ರೇವಣ್ಣ, ಗೋಸಿಕೆರೆ ಪ್ರೌಢಶಾಲೆಯ ಶಿಕ್ಷಕ ರಾಘವೇಂದ್ರ, ಪಿ ಓಬನಹಳ್ಳಿ ಶಾಲೆಯ ಚಂದ್ರಶೇಖರ್ ಹಾಗೂ ಕೊರ್ಲಕುಂಟೆ ಶಾಲೆಯ ಪ್ರಕಾಶ್ ಅಮಾನತಾಗಿರುವ ಶಿಕ್ಷಕರು. ಚಿತ್ರದುರ್ಗ ಡಿಡಿಪಿಐ ರವಿಶಂಕರರೆಡ್ಡಿ ಅವರು ಅಮಾನತು ಆದೇಶ ಹೊರಡಿಸಿದ್ದಾರೆ.
ಮಾರ್ಚ್ 28ರಂದು ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ನಕಲು ಮಾಡಲು ವಿದ್ಯಾರ್ಥಿಗಳಿಗೆ ಶಿಕ್ಷಕರು ಸಹಕಾರ ನೀಡಿದ್ದರು ಎಂದು ಆರೋಪಿಸಲಾಗಿತ್ತು. ಈ ಹಿನ್ನೆಲೆ ಅಮಾನತು ಮಾಡಲಾಗಿದೆ.