ಲೋಕಸಭಾ ಚುನಾವಣೆ | 40 ದಿನ ಬಿಜೆಪಿ ‘ಧನ್ಯವಾದ ಮೋದಿ’ ಅಭಿಯಾನ: ಸುನೀಲ್ ಕುಮಾರ್

Date:

Advertisements

ಲೋಕಸಭಾ ಚುನಾವಣೆ ರಾಜ್ಯದ ಎಲ್ಲ ಕ್ಷೇತ್ರಗಳಿಗೂ ಪ್ರಮುಖ ಮೂರು ಪಕ್ಷಗಳು ತಮ್ಮ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿವೆ. ಕಾಂಗ್ರೆಸ್‌ ಮತ್ತು ಬಿಜೆಪಿ-ಜೆಡಿಎಸ್‌ ಭಾರೀ ತಯಾರಿ ನಡೆಸುತ್ತಿವೆ. ಮೋದಿ ಹೆಸರಲ್ಲಿನಲ್ಲೇ ಕಳೆದ ಚುನಾವಣೆ ಗೆದ್ದಿದ್ದ ರಾಜ್ಯದ ಬಿಜೆಪಿಗರು, ಈಗಲೂ ಮೋದಿ ಹೆಸರನ್ನೇ ಮುಂದಿಟ್ಟುಕೊಂಡು ಚುನಾವಣೆಗೆ ಹೋಗುತ್ತಿದೆ. ಹಾಗಾಗಿಯೇ, ರಾಜ್ಯದಲ್ಲಿ 40 ದಿನಗಳ ಕಾಲ ‘ಧನ್ಯವಾದ ಮೋದಿ’ ಅಭಿಯಾನ ಆರಂಭಿಸಿದೆ.

ಶನಿವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ರಾಜ್ಯ ಸಂಚಾಲಕ ವಿ ಸುನೀಲ್ ಕುಮಾರ್, “ಕಳೆದ 10 ವರ್ಷಗಳ ಮೋದಿ ಆಡಳಿತದಲ್ಲಿ ಬಿಜೆಪಿ ಸರ್ಕಾರದ ಕೊಡುಗೆಗಳ ಬಗ್ಗೆ ರಾಜ್ಯದ ಜನರಿಗೆ ತಿಳಿಸಲು ಮುಂದಾಗಿದ್ದೇವೆ. ಅದಕ್ಕಾಗಿ, 40 ದಿನಗಳ ಕಾಲ ‘ಧನ್ಯವಾದ ಮೋದಿ’ ಅಭಿಯಾನ ನಡೆಸುತ್ತಿದ್ದೇವೆ” ಎಂದು ಹೇಳಿದ್ದಾರೆ.

“ಮೋದಿ ಅವರು ಯಾವುದೇ ತಾರತಮ್ಯ ಇಲ್ಲದ ಆಡಳಿತ ನೀಡಿದ್ದಾರೆ. ಕರ್ನಾಟಕಕ್ಕೆ ಕೇಂದ್ರ ಸರ್ಕಾರದ ಕೊಡುಗೆಗಳನ್ನು ಗುರುತಿಸಿ, ವಿಡಿಯೋ ಮೂಲಕ ಅಭಿಯಾನದಲ್ಲಿ ಜನರಿಗೆ ಪರಿಚಯಿಸಲಾಗುತ್ತದೆ” ಎಂದು ಹೇಳಿದ್ದಾರೆ.

Advertisements

“ಯುವಕರು, ಮಹಿಳೆಯರು, ರೈತರು ಮತ್ತು ಬಡವರ ವರ್ಗಗಳ ಕಲ್ಯಾಣಕ್ಕಾಗಿ ದುಡಿಯುತ್ತೇವೆಂದು ಮೋದಿ ಹೇಳಿದ್ದಾರೆ. ಈ ಕ್ಷೇತ್ರಗಳಿಗಾಗಿ ಬೇರೆ-ಬೇರೆ ಕಾರ್ಯಕ್ರಮಗಳನ್ನು ಕೇಂದ್ರ ಸರ್ಕಾರ ನೀಡುತ್ತಿದೆ” ಎಂದಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ ಸುತ್ತ ವ್ಯವಸ್ಥಿತ ಷಡ್ಯಂತ್ರ, ಹಿಂದಿನ ಶಕ್ತಿಗಳನ್ನು ಎಸ್‌ಐಟಿ ಪತ್ತೆ ಮಾಡಲಿ: ಸುನಿಲ್‍ ಕುಮಾರ್

ಧರ್ಮಸ್ಥಳಕ್ಕೆ ಸಂಬಂಧಿಸಿ ಎಸ್‍ಐಟಿ ತನಿಖೆಯಲ್ಲಿ ಬಿಜೆಪಿ ಯಾವುದೇ ಹಸ್ತಕ್ಷೇಪ ಮಾಡುವುದಿಲ್ಲ ಎಂದು...

ನಾನು ದಲಿತರನ್ನು ವಿರೋಧಿಸಿಲ್ಲ, ನನ್ನಿಂದ ತಪ್ಪಾಗಿದ್ದರೆ ಕ್ಷಮೆ ಇರಲಿ: ಶಾಸಕ ಜಿ.ಟಿ.ದೇವೇಗೌಡ

ಸರ್ಕಾರದ ಪಾಲುಗಾರಿಕೆ ಇರುವ ಸಂಘಗಳಲ್ಲಿ ನಾಮನಿರ್ದೇಶಿತ ಸದಸ್ಯರನ್ನು ಸೇರಿಸಿ ಹಾಗೂ ಒಬ್ಬ...

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ಸ್ವಾಗತ, ಬಿಜೆಪಿ ಮುಖಂಡರ ನಡೆಗೆ ಖಂಡನೆ: ಸಿಪಿಐಎಂ

ನಾಡಹಬ್ಬ ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತೆ, ಲೇಖಕಿ ಬಾನು ಮುಷ್ತಾಕ್...

ವಿಧಾನಸಭೆ ಅಧಿವೇಶನದಲ್ಲಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದಕ್ಕೆ ಕ್ಷಮೆಯಾಚಿಸಿದ ಡಿ ಕೆ ಶಿವಕುಮಾರ್

ವಿಧಾನಸಭೆ ಅಧಿವೇಶನದಲ್ಲಿಯೇ ‘ನಮಸ್ತೆ ಸದಾ ವತ್ಸಲೇ ಮಾತೃಭೂಮಿ’ ಎಂದು ಆರ್‌ಎಸ್‌ಎಸ್‌ ಗೀತೆ...

Download Eedina App Android / iOS

X