ರಾಯಚೂರು | ಅರವಿಂದ ಕೇಜ್ರಿವಾಲ್ ಬಂಧನ ಖಂಡಿಸಿ ಎಎಪಿ ಪ್ರತಿಭಟನೆ

Date:

Advertisements

ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಅಬಕಾರಿ ನೀತಿ ಹಗರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರವಾಲ್ ಬಂಧಿಸಿದ್ದು, ರಾಷ್ಟ್ರಪತಿಗಳು ಮಧ್ಯಪ್ರವೇಶಿಸಿ ನ್ಯಾಯ ಒದಗಿಸಿಕೊಡಬೇಕು ಎಂದು ಆಮ್ ಆದ್ಮಿ ಪಕ್ಷದ ರಾಯಚೂರು ಜಿಲ್ಲಾ ಘಟಕ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿತು.

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಬಂಧಿಸಿರುವುದು ಪ್ರಜಾಪ್ರಭುತ್ವದ ಮತ್ತು ಸಂವಿಧಾನ ವಿರೋಧಿ ನಡೆಯಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಭವಿಷ್ಯದಲ್ಲಿ ತಮ್ಮ ಎದುರಾಳಿಯಾಗಬಹುದಾದ ರಾಜ ಕೀಯ ಪಕ್ಷಗಳನ್ನು ಹಾಗೂ ನಾಯಕರನ್ನು ಕುತಂ ತ್ರದಿಂದ ಹತ್ತಿಕ್ಕುತ್ತಿದ್ದು, ಸರ್ವಾಧಿಕಾರಿ ಧೋರಣೆ ತೋರುತ್ತಿದ್ದಾರೆ. ಜಾರಿ ನಿರ್ದೇಶನಾಲಯ, ಸಿಬಿಐ, ತೆರಿಗೆ ಇಲಾಖೆ ಸೇರಿದಂತೆ ಎಲ್ಲ ಸ್ವತಂತ್ರ ತನಿಖಾ ಸಂಸ್ಥೆಗಳನ್ನು ತನ್ನ ಮೂಗಿನ ನೇರಕ್ಕೆ ತಕ್ಕಂತೆ ಕುಣಿಯುವಂತೆ ಮಾಡಿಕೊಂಡಿದ್ದಾರೆ ಎಂದು ದೂರಿದರು.

Advertisements

ಪ್ರಧಾನಿ ನರೇಂದ್ರ ಮೋದಿ ಅವರು, ಚುನಾವಣಾ ಆಯೋಗಕ್ಕೂ ಮೂಗುದಾರ ತೊಡಿಸಿ ತನ್ನ ಕೈಯಲ್ಲಿ ಇಟ್ಟುಕೊಂಡಿದ್ದಾರೆ. ಇದು ಅತ್ಯಂತ ಕಳವಳಕಾರಿ ವಿಚಾರವಾಗಿದೆ. ಅಬಕಾರಿ ನೀತಿ ಹಗರಣದಲ್ಲಿ ಎಎಪಿ ಮುಖಂಡರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ನಿರಂತರವಾಗಿ ಮೋದಿ ಸರ್ಕಾರ ಕಿರುಕುಳ ನೀಡುತ್ತಿದೆ. ಅದರ ಭಾಗವಾಗಿ ಈಗಾಗಲೇ ಸತ್ಯೇಂದ್ರ ಜೈನ್, ಮನೀಷ್ ಸಿಸೋಡಿಯಾ ಹಾಗೂ ಸಂಜಯ್ ಸಿಂಗ್ ಅವರನ್ನು ಈಗಾಗಲೇ ಬಂಧಿಸಿದ್ದನ್ನು ಖಂಡಿಸಿದರು.

ಆಮ್ ಆದ್ಮಿ ಪಕ್ಷದ ನಾಯಕರು ಸತ್ಯದ ಪರವಾಗಿ ದೃಢವಾಗಿ ನಿಂತರು. ಬಿಜೆಪಿಯ ಭಾಗವಾಗಲು ಒಪ್ಪಲಿಲ್ಲ. ಕೊನೆಯ ಅಸ್ತ್ರ ಎಂಬಂತೆ ಲೋಕಸಭೆ ಚುನಾವಣೆಗೆ  ದಿನಗಳು ಬಾಕಿ ಇರುವಂತೆ ಅರವಿಂದ ಕೇಜ್ರಿವಾಲ್ ಅವರನ್ನು ಬಂಧಿಸಲಾಗಿದೆ. ಅಬಕಾರಿ ನೀತಿ ಹಗರಣಕ್ಕೆ ಸಂಬಂಧಪಟ್ಟಂತೆ ಕಳೆದ ಎರಡು ವರ್ಷಗಳಲ್ಲಿ ಸುಮಾರು 800 ಅಧಿಕಾರಿಗಳು ನಿರಂತರವಾಗಿ ತನಿಖೆ ನಡೆಸಿದ್ದಾರೆ.250ಕ್ಕಿಂತ ಹೆಚ್ಚು ಸ್ಥಳಗಳಲ್ಲಿ ಶೋಧ ನಡೆಸಿದ್ದಾರೆ. ಆದರೆ, ಇದುವರೆಗೆ ಅವರಿಗೆ ಒಂದು ರೂಪಾಯಿ ಅಕ್ರಮ ಹಣವನ್ನು ಸಾಬೀತು ಪಡಿಸಲು ಸಾಧ್ಯವಾಗಿಲ್ಲ. ಆದರೂ, ದೆಹಲಿ ಸರ್ಕಾರದ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಆರೋಗ್ಯ ಸಚಿವರನ್ನು ಬಂಧಿಸಲಾಗಿದೆ. ಇದು ದೆಹಲಿ ಸರ್ಕಾರವನ್ನು ಕಟ್ಟಿಹಾಕುವ ಕುತಂತ್ರ ನಡೆಸಿದೆ ಎಂದು ಆರೋಪಿಸಿದರು.

ತಪ್ಪಿತಸ್ಥರನ್ನು ಬಿಟ್ಟು ನಿರಪರಾಧಿಗಳ ಮೇಲೆ ಆರೋಪ ಹೊರಿಸಿ ಬಂಧಿಸುತ್ತಿರುವುದು ಅತ್ಯಂತ ಕಳವಳಕಾರಿಯಾಗಿದೆ. ರಾಷ್ಟ್ರಪತಿಗಳು ಮಧ್ಯಸ್ಥಿಕೆ ವಹಿಸಿ ಭಾರತದ ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಉಳಿಸಬೇಕು, ಬಂಧನದಲ್ಲಿರುವ ನಾಯಕರನ್ನು ಬಂಧಮುಕ್ತಗೊಳಿಸಿ ಜನಸೇವೆಗೆ ಅವಕಾಶ ಮಾಡಿಕೊಡಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾದ್ಯಕ್ಷ ಡಿ.ವೀರೇಶ ಕುಮಾರ, ಸೈಯದ್ ನುಸ್ರತ್ ಅಲಿ, ಮಕ್ಬುಲ್ ಪಾಷಾ, ಆನಂದ ಕುಮಾರ, ಸೈಯದ್ ಶೆಕ್ಷಾವಲಿ, ಡಾ.ವಾಹೀದ್, ರೋಫ್, ಅಬ್ದುಲ್ ಖಾದರ್, ಸುನಿಲ್, ಸೈಯದ್ ಬದ್ರುಲ್, ಈರೇಶ, ಕೃಷ್ಣ, ಸಂಗಪ್ಪ ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X