ಗದಗ | ಕೇಂದ್ರ ಸರ್ಕಾರದ ವಿರುದ್ಧ ಸಚಿವ ಎಚ್.ಕೆ.ಪಾಟೀಲ್ ವಾಗ್ಧಾಳಿ

Date:

Advertisements

ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಷ್ಟೇ ತೊಡಗಿಸಿಕೊಂಡಿಲ್ಲ. ಚುನಾವಣಾ ಬಾಂಡ್‌ ವಿಚಾರದಲ್ಲಿ ಹಲವರನ್ನು ಶೋಷಣೆ ಮಾಡಿ ಅವರಿಂದ ಹಣ ಪಡೆದಿದೆ. ಜಾಗತಿಕ ಮಟ್ಟದಲ್ಲಿ ಇದು ಅತ್ಯಂತ ದೊಡ್ಡ ಹಗರಣ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಕೆ. ಪಾಟೀಲ್ ಆರೋಪ ಮಾಡಿದರು.

ಭ್ರಷ್ಟಾಚಾರದ ಮುಂದಿನ ಹಂತವೇ ಹಿಂಸಾತ್ಮಕ ಶೋಷಣೆ. ದೇಣಿಗೆ ಪಡೆಯಲು ಇಂತಹ ಮಾರ್ಗ ಅನುಸರಿಸಿರುವ ರಾಜಕೀಯ ಪಕ್ಷ ಜಗತ್ತಿನಲ್ಲಿ ಎಲ್ಲೂ ಇಲ್ಲ. ಚುನಾವಣಾ ಬಾಂಡ್‌ ವಿಷಯದಲ್ಲಿ ಪ್ರಧಾನಿ ಮೋದಿ ಅವರ ಸುತ್ತ ಆರೋಪದ ಮೋಡಗಳು ಕವಿದಿವೆ. ಅದಕ್ಕೆ ಚುನಾವಣಾ ಬಾಂಡ್‌ ಮತ್ತು ರಾಜಕೀಯ ಪಕ್ಷಗಳಿಗೆ ಬಂದಿರುವ ಹಣದ ಬಗ್ಗೆ ಚುನಾವಣೆಗೂ ಮುನ್ನ ಶ್ವೇತಪತ್ರ ಹೊರಡಿಸಬೇಕು ಎಂದು ಆಗ್ರಹಿಸಿದರು.

ಲೋಕಸಭೆ ಚುನಾವಣೆ ಹತ್ತಿರ ಬರುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ರೋಚಕ ಸುದ್ದಿಗಳು ಒಂದೊಂದೇ ಹೊರಬರುತ್ತಿವೆ. ಕೆಲವು ಸುಪ್ರೀಂಕೋರ್ಟ್ ಮೂಲಕ ಬೆಳಕಿಗೆ ಬರುತ್ತಿದ್ದರೆ ಮತ್ತೆ ಕೆಲವು ಬಿಜೆಪಿ ಜತೆಯಲ್ಲಿದ್ದವರ ಮೂಲಕವೇ ಬರುತ್ತಿವೆ. ಮತ್ತೊಂದಿಷ್ಟು ಸಂಘ-ಸಂಸ್ಥೆ, ಮಾಧ್ಯಮಗಳ ಮೂಲಕ ಜನತೆಗೆ ತಿಳಿಯುತ್ತಿದ್ದು, ಬಿಜೆಪಿ ಆಡಳಿತ ನಿಜವಾದ ಬಣ್ಣ ಜನರ ಮುಂದೆ ಕಳಚುತ್ತಿದೆ ಎಂದು ಹೇಳಿದರು.

Advertisements

ಚುನಾವಣಾ ಬಾಂಡ್‌ಗಳ ಮೂಲಕ ಅಧಿಕೃತವಾಗಿಯೇ ಇಷ್ಟು ಹಣ ಪಡೆದಿದ್ದು ಒಂದೆಡೆಯಾದರೆ, ಖಾಸಗಿಯಾಗಿ ಎಷ್ಟು ಪಡೆದಿರಬಹುದು? ಇದರಲ್ಲಿ ಕಪ್ಪುಹಣ ಎಷ್ಟಿರಬಹುದು? ಎಂದು ಜನರು ಯೋಚಿಸುತ್ತಿದ್ದಾರೆ. ಯಾರೆಲ್ಲ ದೊಡ್ಡ ಕುಳಗಳು ಚುನಾವಣಾ ಬಾಂಡ್‌ ಖರೀದಿಸಿದ್ದಾರೆ? ಖರೀದಿಗೂ ಮುನ್ನ ಅವರ ಮೇಲೆ ಜಾರಿ ನಿರ್ದೇಶನಾಲಯ, ಸಿಬಿಐ ಹಾಗೂ ಐಟಿ ಪ್ರಕರಣಗಳು ಎಷ್ಟಿದ್ದವು? ಈ ಅಂಶಗಳನ್ನು ಮೊದಲು ಗುರುತಿಸಬೇಕು. ಚುನಾವಣಾ ಬಾಂಡ್‌ ಖರೀದಿಸಿದ ಬಳಿಕ ಅವರ ವಿರುದ್ಧ ಇದ್ದ ಪ್ರಕರಣಗಳ ತನಿಖೆ ಸ್ಥಗಿತಗೊಂಡಿದ್ದರೆ ಅಥವಾ ಪೂರ್ಣಗೊಂಡಿದ್ದರೆ ಅದರ ಮಾಹಿತಿಯನ್ನು ಜನರಿಗೆ ಒದಗಿಸಬೇಕು ಎಂದು ಆಗ್ರಹಿಸಿದರು.

ಮೋದಿ ನೇತೃತ್ವದ ಕಾಂಗ್ರೆಸ್ ಸರ್ಕಾರವು ಆಡಳಿತ ವಿರೋಧಿ ಅಲೆ ತಪ್ಪಿಸಿಕೊಳ್ಳಲು ವಿರೋಧ ಪಕ್ಷಗಳನ್ನು ಹಣಿಯಲು ಇನ್ನಿಲ್ಲದ ಕಸರತ್ತು ನಡೆಸುತ್ತಿದೆ ಎಂದು ಕಿಡಿಕಾರಿದರು.

10 ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಇದೀಗ ಚುನಾವಣೆ ನೀತಿ ಸಂಹಿತೆ ಘೋಷಣೆ ಬಳಿಕ ಐಟಿ ಇಲಾಖೆ ಮೂಲಕ ಕಾಂಗ್ರೆಸ್ ಪಕ್ಷಕ್ಕೆ 1,800 ರೂ. ತೆರಿಗೆ ಬಾಕಿ ನೋಟಿಸ್ ಕೊಡಿಸಿ, ಚುನಾವಣೆಯಲ್ಲಿ ಭಯ ಮೂಡಿಸುತ್ತಿದೆ. ಆದರೆ, ಕಾಂಗ್ರೆಸ್ ಪಕ್ಷ ಅದಕ್ಕೆ ಅಂಜುವುದಿಲ್ಲ ಎಂದು ತಿಳಿಸಿದರು.

ಯಾವುದೇ ದುರುದ್ದೇಶದಿಂದ ಹಾವೇರಿ-ಗದಗ ಬಿಜೆಪಿ ಅಭ್ಯರ್ಥಿ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ದಾವಣಗೆರೆ ಚಾರ್ಲಿಗೆ ಹೋಲಿಕೆ ಮಾಡಿಲ್ಲ ಎಂದು ಸಚಿವ ಎಚ್‌.ಕೆ.ಪಾಟೀಲ ಸ್ಪಷ್ಟಪಡಿಸಿದರು.

ಚುನಾವಣಾ ಸ್ಪರ್ಧಾ ಕಣದಲ್ಲಿ ಹಿರಿಯರು-ಕಿರಿಯರು ಮುಖಾಮುಖಿ ಆದಾಗ ಇದನ್ನು ಬಳಸುವುದು ವಾಡಿಕೆ. ಬೊಮ್ಮಾಯಿ ಅವರೂ ಸೇರಿ ಹಲವರು ಇದನ್ನು ತಪ್ಪಾಗಿ ಅರ್ಥೈಸಿಕೊಂಡಂತಿದೆ. ಆದಾಗ್ಯೂ ಈ ಹೋಲಿಕೆಯಿಂದ ಯಾರಿಗಾದರೂ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಹೇಳಿದರು.

ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ, ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಅವರ ನಾಮಪತ್ರ ಸಲ್ಲಿಕೆ ದಿನಾಂಕವನ್ನು ಶೀಘ್ರ ನಿಗದಿಗೊಳಿಸುತ್ತೇವೆ. ಈ ಬಾರಿ ಅನಂದಸ್ವಾಮಿ ಅವರು 2 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದರು.

ಕಾಂಗ್ರೆಸ್‌ ಮುಖಂಡರಾದ ಸಿದ್ದು ಪಾಟೀಲ್‌, ಅಶೋಕ ಮಂದಾಲಿ, ಬಿ.ಬಿ.ಅಸೂಟಿ ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

ಧಾರವಾಡ | ಹಾಳುಬಿದ್ದ ಸಂಶಿ ಎಪಿಎಂಸಿ; ವಾರದ ಸಂತೆ ಸ್ಥಳಾಂತರಿಸಲು ಒತ್ತಾಯ

ಸರ್ಕಾರದ ಮಟ್ಟದಲ್ಲಿ ಆಗುವ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಇತ್ತ...

ಹಾಸನ | ಕ್ಯೂಬಾ ದೇಶದ ಸಮಗ್ರ ಅಭಿವೃದ್ಧಿಯಲ್ಲಿ ಫಿಡೆಲ್ ಕ್ಯಾಸ್ಟ್ರೋ ಕೊಡುಗೆ ಅಪಾರ: ಬರಹಗಾರ ರವಿಕುಮಾರ್

ಕೃಷಿ ಪ್ರಧಾನವಾಗಿರುವ ಪುಟ್ಟ ಕ್ಯೂಬಾ ದೇಶವನ್ನು ಎಲ್ಲಾ ಕ್ಷೇತ್ರದಲ್ಲಿ ಅಭಿವೃದ್ಧಿ ಹೊಂದುವಂತೆ...

ಕುಶಾಲನಗರ | ಕೊಡಗು ಪ್ರವೇಶ ನಿರ್ಬಂಧ; ಪುನೀತ್ ಕೆರೆಹಳ್ಳಿಯನ್ನು ಹೊರಹಾಕಿದ ಪೊಲೀಸರು

ಕೊಡಗು ಜಿಲ್ಲೆ, ಕುಶಾಲನಗರಕ್ಕೆ ಆಗಮಿಸಿದ್ದ ರಾಷ್ಟ್ರ ರಕ್ಷಣಾ ಪಡೆಯ ಸಂಸ್ಥಾಪಕ ಪುನೀತ್...

Download Eedina App Android / iOS

X