ಪಕ್ಷ ಮರೆತು ನಾರಾಯಣ‌ಗುರು ವಿಚಾರ ವೇದಿಕೆಯಿಂದ ಬಿಲ್ಲವ ಅಭ್ಯರ್ಥಿಗಳಿಗೆ ಬೆಂಬಲ: ಸತ್ಯಜಿತ್ ಸುರತ್ಕಲ್

Date:

Advertisements

ಈ ಸಲದ ಲೋಕಸಭಾ ಚುನಾವಣೆಯಲ್ಲಿ ಶ್ರೀ ನಾರಾಯಣ ಗುರು ವಿಚಾರ ವೇದಿಕೆಯ ಸಭೆಯಲ್ಲಿ ಕೈಗೊಳ್ಳಲಾದ ನಿರ್ಣಯದಂತೆ ಸಮಾಜಕ್ಕೆ ಶಕ್ತಿ ತುಂಬುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ, ಉಡುಪಿ- ಚಿಕ್ಕಮಗಳೂರು ಹಾಗೂ ಉತ್ತರ ಕನ್ನಡ, ಶಿವಮೊಗ್ಗ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿರುವ ಬಿಲ್ಲವ ಅಭ್ಯರ್ಥಿಗಳನ್ನು ಬೆಂಬಲಿಸಲಿದೆ ಎಂದು ಎಸ್‌ಎನ್‌ಜಿವಿ ರಾಜ್ಯಾಧ್ಯಕ್ಷ ಸತ್ಯಜಿತ್ ಸುರತ್ಕಲ್ ಹೇಳಿದ್ದಾರೆ.

ಮಂಗಳೂರು ಪ್ರೆಸ್‌ ಕ್ಲಬ್‌ನಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಟೀಮ್ ಸತ್ಯಜಿತ್ ಸುರತ್ಕಲ್‌ನಲ್ಲಿ ವಿವಿಧ ಸಮಾಜದ ಬಾಂಧವರು ಇರುವುದರಿಂದ ಅದು ಹಾಗೇ ಮುಂದುವರಿಯಲಿದೆ. ಚುನಾವಣೆಯ ನನ್ನ ಕಾರ್ಯಕ್ಕೂ ಆ ತಂಡಕ್ಕೂ ಯಾವುದೇ ಸಂಬಂಧ ಇರುವುದಿಲ್ಲ. ನನ್ನ ಯಾವುದೇ ಕಾರ್ಯಕ್ಕೂ ಬೆಂಬಲ ನೀಡವುದಾಗಿ ಹೇಳಿದ್ದು, ಮುಂದಿನ ದಿನಗಳಲ್ಲಿ ಆ ತಂಡ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಲಿದೆ ಎಂದು ಹೇಳಿದರು.

“ಕಳೆದ ಶುಕ್ರವಾರ ಎಸ್‌ಎನ್‌ಜಿವಿಯ ಸಭೆ ನಡೆದು ಅಂತಿಮ ನಿರ್ಧಾರಕ್ಕೆ ಬರಲಾಗಿದೆ. ರಾಜ್ಯದಲ್ಲಿ ನಾರಾಯಣಗುರು ಸಮಾಜ ಎಂದು ಹೇಳುವ ಬಿಲ್ಲವ, ಈಡಿಗ, ನಾಮಧಾರಿ ಎಂಬ 26 ಪಂಗಡಗಳ ಸಮಾಜ ಅನೇಕ ವರ್ಷಗಳ ನಂತರ ಸಮಾಜಕ್ಕೆ ಮೂರು ಕ್ಷೇತ್ರಗಳಲ್ಲಿ ಅವಕಾಶ ದೊರಕಿದೆ. ದ.ಕ., ಉಡುಪಿ, ಚಿಕ್ಕಮಗಳೂರು, ಕಾರವಾರ, ಶಿವಮೊಗ್ಗದಲ್ಲಿ ಸಮಾಜದ 12 ಲಕ್ಷಕ್ಕೂ ಅಧಿಕ ಮತದಾರರಿದ್ದಾರೆ. ನಮ್ಮ ಸಮಾಜ ಬಹುಸಂಖ್ಯಾತ ಸಮಾಜವಾಗಿದೆ. ಆದರೆ ಬಿಜೆಪಿಯಿಂದ 33 ವರ್ಷಗಳಿಂದ ಈ ನಾಲ್ಕೂ ಕ್ಷೇತ್ರಗಳಲ್ಲಿಯೂ ಸಮಾಜದ ಅಭ್ಯರ್ಥಿಗೆ ಅವಕಾಶ ನೀಡಲಾಗಿಲ್ಲ. ಕಾಂಗ್ರೆಸ್‌ನಲ್ಲಿ ನಾಲ್ಕನೆ ಬಾರಿ ಜನಾರ್ದನ ಪೂಜಾರಿ ಸೋತ ಬಳಿಕ ಕಳೆದ ಬಾರಿ ದ.ಕ.ದಲ್ಲಿ ಬಂಟ ಸಮುದಾಯದ ಅಭ್ಯರ್ಥಿಯಾಗಿದ್ದ ಮಿಥುನ್ ರೈ ಅವರಿಗೆ ಅವಕಾಶ ನೀಡಲಾಗಿತ್ತು. ಆದರೆ ಅವರು ಸೋತಿದ್ದರು” ಎಂದು ಸಂಘಪರಿವಾರದ ಮಾಜಿ ಮುಖಂಡ ಸತ್ಯಜಿತ್ ಸುರತ್ಕಲ್ ಹೇಳಿದರು.

Advertisements

“ಎಸ್‌ಎನ್‌ಜಿವಿ ಸಂಘಟನೆ ಆರಂಭವಾದ ಶಿವಮೊಗ್ಗದ ಸಿಗಂದೂರಿನಲ್ಲಿ ಆರಂಭಗೊಂಡ ಹೋರಾಟ ಬ್ರಹ್ಮಶ್ರೀ ನಾರಾಯಣಗುರುಗಳ ಟ್ಯಾಬ್ಲೋ ವಿಚಾರ, ಪಠ್ಯಪುಸ್ತಕ, ಅಭಿವೃದ್ಧಿ ನಿಗಮ, ಕಾಂತರಾಜು ವರದಿ ಹೋರಾಟ, ವಿಮಾನ ನಿಲ್ದಾಣಕ್ಕೆ ಕೋಟಿಚೆನ್ನಯ ಹೆಸರು, ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಂಗಾರಪ್ಪರ ಹೆಸರಿಡುವ ಹೋರಾಟ ಸೇರಿದಂತೆ ಹಲವು ಹೋರಾಟಗಳು ನಡೆದಿವೆ. ಇದರ ಪರಿಣಾಮವಾಗಿ ಸಮಾಜಕ್ಕೆ ಬಿಜೆಪಿಯಿಂದ ಉಡುಪಿ- ಚಿಕ್ಕಮಗಳೂರು, ಕಾಂಗ್ರೆಸ್‌ನಿಂದ ಶಿವಮೊಗ್ಗ ಹಾಗೂ ದ.ಕ.ದಲ್ಲಿ ಅವಕಾಶ ನೀಡಲಾಗಿದೆ. ಸಮಾಜದ ಸಂಘಟನೆಯಾಗಿ, ಸಮಾಜವನ್ನು ಗೆಲ್ಲಿಸಲು, ಪಕ್ಷವನ್ನು ಪಕ್ಕಕ್ಕಿಟ್ಟು ಸಮಾಜದ ಅಭ್ಯರ್ಥಿಗಳಾದ ಪದ್ಮರಾಜ್ ಆರ್., ಕೋಟ ಶ್ರೀನಿವಾಸ ಪೂಜಾರಿ ಹಾಗೂ ಗೀತಾ ಶಿವರಾಜ್ ಕುಮಾರ್ ಅವರನ್ನು ಗೆಲ್ಲಿಸುವ ಪ್ರಯತ್ನ ನಾರಾಯಣ ಗುರು ವಿಚಾರವೇದಿಕೆಯಿಂದ ಆಗಲಿದೆ” ಎಂದು ಸತ್ಯಜಿತ್ ತಿಳಿಸಿದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮೈತ್ರಿ ಕಷ್ಟ; ಅದೇ ಇಷ್ಟ ಎಂದದ್ದೇಕೆ ಕುಮಾರಸ್ವಾಮಿ?

ಇವರು ಮೂವರು ಗೆದ್ದರೆ ಸಮಾಜಕ್ಕೆ ದೊಡ್ಡ ಶಕ್ತಿ ಸಿಗಲಿದೆ. ಉಳಿದ ಸಮಾಜಗಳಂತೆ ನಮ್ಮ ಸಮಾಜವನ್ನು ಶೈಕ್ಷಣಿಕವಾಗಿ, ಆರ್ಥಿಕವಾಗಿ ಮೇಲೆತ್ತಲು ಸಾಧ್ಯ ಆಗಲಿದೆ. ಆ ನಿಟ್ಟಿನಲ್ಲಿ ಮೂರು ಕ್ಷೇತ್ರಗಳಲ್ಲಿಯೂ ತಾನೂ ಪ್ರಚಾರ ಕಾರ್ಯ ನಡೆಸುವುದಾಗಿ ಸತ್ಯಜಿತ್ ಸುರತ್ಕಲ್ ಘೋಷಿಸಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ರೈತನ ಕೃಷಿ ಚಟುವಟಿಕೆಗೆ ಜೇನು ಸಾಕಾಣಿಕೆ ವರದಾನ : ಪುಷ್ಪಲತಾ

ರೈತರು ತಮ್ಮ ಕೃಷಿ ಚಟುವಟಿಕೆಯಲ್ಲಿ ಪ್ರಮುಖ ಘಟವಾದ ಪರಾಗಸ್ಪರ್ಶ ಕ್ರಿಯೆಗೆ...

ಮಂಗಳೂರು | ಆ. 23: ಅಲ್ ವಫಾ ಚಾರಿಟೇಬಲ್ ಟ್ರಸ್ಟ್‌ನಿಂದ 15 ಜೋಡಿಗಳ ಸರಳ ಸಾಮೂಹಿಕ ವಿವಾಹ

ಮಂಗಳೂರು ಭಾಗದಲ್ಲಿ ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿರುವ ಅಲ್ ವಫಾ ಚಾರಿಟೆಬಲ್ ಟ್ರಸ್ಟ್...

ಗುಬ್ಬಿ | ಎಂ.ಎನ್.ಕೋಟೆ ಗ್ರಾಪಂ ಉಪಾಧ್ಯಕ್ಷರಾಗಿ ಸಿದ್ದಗಂಗಮ್ಮ ಅವಿರೋಧ ಆಯ್ಕೆ

ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿ ಎಂ.ಎನ್.ಕೋಟೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸ್ಥಾನಕ್ಕೆ...

ಕೋಲಾರ | ಐಎಎಸ್, ಐಪಿಎಸ್ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ; ಅ.ಮು ಲಕ್ಷ್ಮೀನಾರಾಯಣ ಭರವಸೆ

ಕೆಎಎಸ್, ಐಎಎಸ್ ಮತ್ತು ಐಪಿಎಸ್ ಓದಲು ಆಸಕ್ತಿ ಇರುವ ವಿದ್ಯಾರ್ಥಿಗಳಿಗೆ ಉಚಿತ...

Download Eedina App Android / iOS

X