ಕಲಬುರಗಿ | ಸಂವಿಧಾನ ಪೀಠಿಕೆ ಓದುವುದರ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನವಜೋಡಿ

Date:

Advertisements

ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಗೌರ್ ಗ್ರಾಮದ ರವಿ ಸದಾಶಿವಪ್ಪ ಮತ್ತು ವಾಡಿ ಪಟ್ಟಣದ ಪ್ರಿಯಾಂಕಾ ಎಚ್.ಶಿಂಧೆ ಇವರು ಸಂವಿಧಾನ ಪೀಠಿಕೆ ಓದುವುದರ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.

ನಗರದ ಶೆಟ್ಟಿ ಫಂಕ್ಷನ್ ಹಾಲ್‌ನಲ್ಲಿನಡೆದ ಮದುವೆಯ ಬಗ್ಗೆ ವರ ರವಿ ಗೌರ್ ಮಾತನಾಡಿ, ಸಮಸ್ತ ಭಾರತೀಯರಿಗೆ ಬದುಕುವ ಹಕ್ಕು ನೀಡಿದ್ದು ಭಾರತದ ಸಂವಿಧಾನ. ಸ್ವಾತಂತ್ರ್ಯವಿಲ್ಲದ ಬದುಕಿನಿಂದ ಮುಕ್ತಿ ನೀಡಿದ ಹೆಮ್ಮೆಯ ಸಂವಿಧಾನವೇ ನನ್ನ ಪ್ರತೀ ಕ್ಷಣ ಖುಷಿಯ ಬದುಕಿಗೆ ಸಾಕ್ಷಿಯಾಗಿದ್ದು. ದಾಂಪತ್ಯ ಜೀವನಕ್ಕೆ ಕಾಲಿಡುವ ಮಧುರ ಕ್ಷಣವೂ ಸಹ ಸಂವಿಧಾನದ ನೆರಳಲ್ಲಿ ನಡೆಯಬೇಕು ಎನ್ನುವುದು ನನ್ನ ಮಹದಾಸೆ ಆಗಿತ್ತು ಎಂದರು.

ಇದಕ್ಕೆ ನಮ್ಮ ಎರಡು ಕುಟುಂಬದವರು ಒಪ್ಪಿಗೆ ನೀಡಿರುವುದರಿಂದ ನಮ್ಮ ಆಸೆಯಂತೆ ಸಂವಿಧಾನ ಪೀಠಿಕೆ ಓದುವುದರ ಮೂಲಕ ದಾಂಪತ್ಯ ಜೀವನ ಪ್ರಾರಂಭೀಸಿದ್ದೇವೆ ಎಂದು ತಮ್ಮ ಖುಷಿ ಕ್ಷಣ ಎಲ್ಲರೊಂದಿಗೆ ಹಂಚಿಕೊಂಡರು.

Advertisements

ವಿಶೇಷ ಮದುವೆ ಸಮಾರಂಭದಲ್ಲಿ ಕುಟುಂಬದ ಸಂಬಂಧಿಕರು, ಸ್ನೇಹಿತರು, ಹಿತೈಷಿಗಳು ಭಾಗಿಯಾಗುವುದರ ಜೊತೆಗೆ ಎಲ್ಲರೂ ಸಂವಿಧಾನ ಪೀಠಿಕೆ ಓದುವುದರ ಮೂಲಕ ನವಜೋಡಿಗೆ ಶುಭ ಹಾರೈಸಿವುದರ ಮೂಲಕ ಆಶೀರ್ವದಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಕಾಯಂ ಜನತಾ ನ್ಯಾಯಾಲಯದ ಬಗ್ಗೆ ಜಾಗೃತಿ ಅಭಿಯಾನ

ಕಲಬುರಗಿ ಜಿಲ್ಲೆಯ ಜೇವರ್ಗಿ ನಗರದ ನ್ಯಾಯಾಲಯದ ಆವರಣದಲ್ಲಿ ಕಾನೂನು ಸೇವೆಗಳ ಸಮಿತಿ...

ಇಂಡಿ | ಬಿಜೆಪಿ ಮತಗಳ್ಳತನದ ವಿರುದ್ಧ ಕಾಂಗ್ರೆಸ್ ಅಭಿಯಾನ; ತನಿಖೆಗೆ ಒತ್ತಾಯ

ವಿಜಯಪುರ ಜಿಲ್ಲೆ ಇಂಡಿ ತಾಲೂಕು ಯುವ ಕಾಂಗ್ರೆಸ್ ವತಿಯಿಂದ ಪಟ್ಟಣದ ಬಸವೇಶ್ವರ...

ರಾಯಚೂರು | ನಗರದ ವಿವಿಧ ಬಡಾವಣೆಗಳಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಅಡಿಗಲ್ಲು

ರಾಯಚೂರು ನಗರದ ವಾರ್ಡ್ ನಂ.34ರ ಬಂದೇನವಾಜ ಕಾಲೋನಿ, ದೇವರಾಜ ಅರಸ್ ಕಾಲೋನಿ,...

Download Eedina App Android / iOS

X