ದೆಹಲಿ ಅಬಕಾರಿ ನೀತಿಯ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಎಎಪಿಯ ರಾಜ್ಯಸಭಾ ಸದಸ್ಯ ಸಂಜಯ್ ಸಿಂಗ್ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನ ಹಾಗೂ ರಿಮ್ಯಾಂಡ್ ಕಸ್ಟಡಿಯಲ್ಲಿರುವುದನ್ನು ಪ್ರಶ್ನಿಸಿ ಸಂಜಯ್ ಸಿಂಗ್ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು.
ಹೆಚ್ಚುವರಿ ಸಾಲಿಟರ್ ಜನರಲ್ ಎಸ್ ವಿ ರಾಜು ಅವರಿಗೆ ಮುಂದಿನ ಕಸ್ಟಡಿ ಅವಧಿಯ ಬಗ್ಗೆ ತಿಳಿಸಲು ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ, ದೀಪಂಕರ್ ದತ್ತ ಹಾಗೂ ಪಿ ಬಿ ವರಾಳೆ ಅವರಿದ್ದ ಪೀಠ ನಿರ್ದೇಶಿಸಿತು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೈತ್ರಿ ಕಷ್ಟ; ಅದೇ ಇಷ್ಟ ಎಂದದ್ದೇಕೆ ಕುಮಾರಸ್ವಾಮಿ?
ಅಬಕಾರಿ ಹಗರಣದಲ್ಲಿ ತಮ್ಮದು ಯಾವುದೇ ಪಾತ್ರವಿಲ್ಲ ಎಂದು ಜಾರಿ ನಿರ್ದೇಶನಾಲಯ ಬಂಧಿಸಿರುವುದನ್ನು ಪ್ರಶ್ನಿಸಿ ಸಂಜಯ್ ಸಿಂಗ್ ಅವರು ಜಾಮೀನಿಗಾಗಿ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದರು. ದೆಹಲಿ ಹೈಕೋರ್ಟ್ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು.
ದೆಹಲಿ ಅಬಕಾರಿ ಹಗರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೇರಿದಂತೆ ಹಲವು ನಾಯಕರನ್ನು ಬಂಧಿಸಿದೆ.
