ರಾಯಚೂರು | ಲಾರಿ ಮಾಲೀಕರಿಗೆ ಐದು ವರ್ಷಗಳಿಂದ ಬಾಡಿಗೆ ಬಾಕಿ: ಸೈಯದ್ ಹಸನ್

Date:

Advertisements

ರೈಲು ಮೂಲಕ ಪೂರೈಕೆಯಾಗುವ ರಸಗೊಬ್ಬರ ಪೂರೈಸುವ ಲಾರಿ ಮಾಲೀಕರಿಗೆ ಜಿ.ಕೆ. ಲಾಜಿಸ್ಟಿಕ್ ಗ್ರೂಪ್‌ನಿಂದ ಕಳೆದ ಐದು ವರ್ಷಗಳಿಂದ ಬಾಡಿಗೆ ಬಾಕಿ ಉಳಿದಿದ್ದು ಆರ್ಥಿಕ ಸಂಕಷ್ಟಕ್ಕೆ ಸಿಲುಕುವಂತಾಗಿದೆ ಎಂದು ಲಾರಿ ಓನರ್ ವೆಲ್ ಫೇರ್ ಅಸೋಸಿಯೇಷನ್ ಅಧ್ಯಕ್ಷ ಸೈಯದ್ ಹಸನ್ ಅರೋಪಿಸಿದರು.

ಕಲಬುರಗಿಯಲ್ಲಿ ಇಂದು (ಏ.2) ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಜಿ.ಕೆ. ಲಾಜಸ್ಟಿಕ್ ಗ್ರೂಪ್ ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಗೊಬ್ಬರ ಪೂರೈಸುವ ಗುತ್ತಿಗೆ ಪಡೆದಿದೆ. ಕಳೆದ ಎರಡು ವರ್ಷಗಳಿಂದ ಸಮರ್ಪಕವಾಗಿ ಲಾರಿ ಬಾಡಿಗೆ ಪಾವತಿಸುತ್ತಿಲ್ಲ. ಡಿಸೇಲ್ ದರಗಳ ಏರಿಕೆಯಾಗಿರುವುದರಿಂದ ವಾಹನಗಳ ದುರಸ್ತಿ, ನಿರ್ವಹಣೆ ಮಾಡಲಾಗದ ಸ್ಥಿತಿಯಲ್ಲಿ ಲಾರಿ ಮಾಲೀಕರು ಸಿಲುಕಿದ್ದಾರೆ ಎಂದರು.

ಗುತ್ತಿಗೆ ಪಡೆದಾಗ ಮಾಡಿಕೊಂಡಿರುವ ಒಪ್ಪಂದದಂತೆ ಐದಾರು ದಿನಗಳಲ್ಲಿ ಪಾವತಿಸುವ ಒಪ್ಪಂದವಾಗಿದೆ. ಆದರೆ ವರ್ಷಗಳಿಂದ ಲಕ್ಷಾಂತರ ಹಣ ಬಾಕಿಯಿದೆ. ಜಿ.ಕೆ. ಲಾಜಸ್ಟಿಕ್ ಗ್ರೂಪ್‌ನಿಂದ ನೀಡಲಾಗಿರುವ ಚೆಕ್ ಬೌನ್ಸ್ ಆಗಿದೆ. ಕೂಡಲೇ ಬಾಕಿಯಿರುವ ಹಣ ಪಾವತಿಸದೇ ಇದ್ದಲ್ಲಿ ಪೂರೈಕೆ ಸ್ಥಗಿತಗೊಳಿಸಿ ಕಾನೂನಾತ್ಮಕ ಹೋರಾಟಕ್ಕೆ ಮುಂದಾಗಬೇಕಾಗುತ್ತದೆ ಎಂದು ಎಚ್ಚರಿಸಿದರು.

Advertisements

ಈ ಸಂದರ್ಭದಲ್ಲಿ ತೌಫೀಕ್ ಹುಸೇನ್, ಅಜೀಂ ಪಾಷಾ, ಚಂದ್ರಶೇಖರ ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಅಧಿಕ ಮಳೆಯಿಂದ ಹಾನಿಗೀಡಾದ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಿ : ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್

 "ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಿಂದ ಸಾಕಷ್ಟು ಮಳೆಯಾಗುತ್ತಿದ್ದು, ಮಳೆಯಿಂದ ಹಾನಿಗೊಳಗಾಗುವ ಪ್ರದೇಶಗಳ ಸಾರ್ವಜನಿಕರ...

ಬೀದರ್‌ | ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ಸಚಿವದ್ವಯರ ಭೇಟಿ; ಪರಿಶೀಲನೆ

ಕಮಲನಗರ ಹಾಗೂ ಔರಾದ್‌ ತಾಲೂಕಿನಲ್ಲಿ ಅಧಿಕ ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ಉಸ್ತುವಾರಿ...

ಹಾವೇರಿ | ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಅರ್ಜಿ ಆಹ್ವಾನ

"ಪರಿಶಿಷ್ಟ ವರ್ಗದ ಜನಾಂಗದ ಏಳಿಗಾಗಿ ಶ್ರಮಿಸಿದ ಅರ್ಹ ವ್ಯಕ್ತಿಗಳಿಗೆ ಶ್ರೀ ಮಹರ್ಷಿ...

ಉಡುಪಿ | ಶಾಸಕ ಯಶ್ಪಾಲ್ ಸುವರ್ಣರವರ ಮೇಲೆ ಕಠಿಣ ಸಾಂವಿಧಾನಿಕ ಕ್ರಮ ಜರುಗಿಸಿ – ಕೆ ಫಣಿರಾಜ್

ತಮ್ಮ ಶಾಸಕ ಸ್ಥಾನದ ಸಂವಿಧಾನಿಕ ಮರ್ಯಾದೆಯನ್ನು ಮೀರಿ ವರ್ತಿಸಿರುವ ಉಡುಪಿಯ ಶಾಸಕ...

Download Eedina App Android / iOS

X