- ಕೊತ್ತನೂರು ಬೆಸ್ಕಾಂ ಕಚೇರಿಯ ಸಹಾಯಕ ಎಂಜಿನಿಯರ್ ಬಂಧನ
- ರಾಜೇಶ್ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆ ಅಡಿ ಎಫ್ಐಆರ್ ದಾಖಲು
ಬೆಂಗಳೂರು ವಿದ್ಯುತ್ ಸರಬರಾಜು ನಿಗಮ (ಬೆಸ್ಕಾಂ)ದ ಸಹಾಯಕ ಎಂಜಿನಿಯರ್‌ವೊಬ್ಬರು ₹30,000 ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದಾರೆ.
ರಾಜೇಶ್ ಎಂಬಾತ ಲೋಕಾಯುಕ್ತ ಬಲೆಗೆ ಸಿಕ್ಕಿ ಬಿದ್ದ ಆರೋಪಿ. ಇವರು ಬೆಂಗಳೂರಿನ ಕೊತ್ತನೂರು ಬೆಸ್ಕಾಂ ಕಚೇರಿಯಲ್ಲಿ ಸಹಾಯಕ ಎಂಜಿನಿಯರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಲಂಚ ಪಡೆದ ಆರೋಪದ ಮೇಲೆ ರಾಜೇಶ್ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆ ಅಡಿ ಎಫ್ಐಆರ್ ದಾಖಲು ಮಾಡಲಾಗಿದೆ.
ರಾಜೇಶ್ ಕಚೇರಿಯಲ್ಲಿ ₹2 ಲಕ್ಷಕ್ಕೂ ಅಧಿಕ ನಗದು ಪತ್ತೆಯಾಗಿದೆ. ಲೋಕಾಯುಕ್ತ ಅಧಿಕಾರಿಗಳು ರಾಜೇಶ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.