ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ನಾಮಪತ್ರ ಸಲ್ಲಿಕೆಯ ನಾಲ್ಕನೆಯ ದಿನವಾದ ಮಂಗಳವಾರ ಒಟ್ಟು 6 ಮಂದಿ ಅಭ್ಯರ್ಥಿಗಳು ಚುನಾವಣಾಧಿಕಾರಿ ಪಿ ಎನ್ ರವೀಂದ್ರ ಅವರಿಗೆ ನಾಮಪತ್ರ ಸಲ್ಲಿಸಿದರು.
ಸೋಶಿಯಲಿಸ್ಟ್ ಯುನಿಟಿ ಸೆಂಟರ್ ಆಫ್ ಇಂಡಿಯಾ(ಕಮ್ಯುನಿಸ್ಟ್) ಪಕ್ಷದಿಂದ ಎನ್ ಕಲಾವತಿ, ಬಹುಜನ್ ಸಮಾಜ ಪಾರ್ಟಿಯಿಂದ ಪಿ ಮಹದೇವ್ ನಾಮಪತ್ರ ಸಲ್ಲಿಸಿದರು. ಪಕ್ಷೇತರ ಅಭ್ಯರ್ಥಿಗಳಾಗಿ ಎಚ್ ಸಿ ಚಂದ್ರಶೇಖರ್, ರಮೇಶ್, ಜಿ ಎನ್ ರವಿ, ರಾಮನಾಯ್ಕ ಅವರು ನಾಮಪತ್ರ ಸಲ್ಲಿಸಿದರು.
ಈ ಸುದ್ದಿ ಓದಿದ್ದೀರಾ? ಬೃಹತ್ ಭೂ ಹಗರಣ | ಒತ್ತಾಯದ ಲೋಕಾಯುಕ್ತ ದಾಳಿ; ತನಿಖೆಗೆ ಸಿಪಿಐಎಂ ಆಗ್ರಹ
“ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಈವರೆಗೆ ಒಟ್ಟು 15 ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆಯಾಗಿವೆ. ಅಭ್ಯರ್ಥಿಗಳು ನಾಮಪತ್ರದೊಂದಿಗೆ ಸಲ್ಲಿಸಿರುವ ಅಫಿಡವಿಟ್ ಪ್ರತಿಯನ್ನು ಭಾರತ ಚುನಾವಣಾ ಆಯೋಗದ https://affidavit.eci.gov.in ಪೋರ್ಟಲ್‌ನಲ್ಲಿ ಅಪ್ ಲೋಡ್ ಮಾಡಲಾಗಿದೆ ಮತ್ತು ಚುನಾವಣಾಧಿಕಾರಿಗಳ ಕಾರ್ಯಾಲಯದ ಸೂಚನಾ ಫಲಕದಲ್ಲಿ ನಾಮಪತ್ರದ ನಕಲು ಪ್ರತಿ ಮತ್ತು ಅಫಿಡೆವಿಟ್ ಅನ್ನು ಪ್ರಚುರಪಡಿಸಲಾಗಿದೆ” ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿ ಪಿ ಎನ್ ರವೀಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.