ಶಿವಮೊಗ್ಗ | ಗ್ಯಾರಂಟಿ ಯೋಜನೆಗಳ ಬಗೆಗಿನ ತಪ್ಪು ಸಂದೇಶಗಳಿಗೆ ಕಿವಿಕೊಡಬೇಡಿ; ಗೀತಾ ಶಿವರಾಜಕುಮಾರ್

Date:

Advertisements

ಗ್ಯಾರಂಟಿ ಯೋಜನೆಗಳಿಂದ ಜನರು ದಾರಿ ತಪ್ಪುತ್ತಿದ್ದಾರೆ ಎಂದು ಕೆಲವರು ತಪ್ಪು ಸಂದೇಶ ಹರಡುತ್ತಿದ್ದಾರೆ. ಈ ರೀತಿಯ ವದಾಂತಿಗಳಿಗೆ ಜನರು ಕಿವಿಕೊಡಕೂಡದು. ಗ್ಯಾರಂಟಿ ಯೋಜನೆಗಳಿಂದ ಬಡವರ ಬಾಳು ಹಸನಾಗಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಸಾಗರ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಇಲ್ಲಿನ ಪಡವಗೋಡು ಗ್ರಾಮ ಪಂಚಾಯಿತಿ ಲಿಂಗದಹಳ್ಳಿ ಹಾಗೂ ಭೀಮನೇರಿಯ ಸೂರನಗದ್ದೆ ದೇವಸ್ಥಾನ ವೃತ್ತದಲ್ಲಿ ಬುಧವಾರ (ಏ.3) ಆಯೋಜಿದ್ದ ಗ್ರಾಮ ಪಂಚಾಯಿತಿ ಮಟ್ಟದ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.

ಗ್ರಾಮೀಣ ಕೃಪಾಂಕ ಕಲ್ಪಿಸುವ ಮೂಲಕ ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರು ಅಶಕ್ತ ಕುಟುಂಬಗಳಿಗೆ ಆಶಾಕಿರಣ ಆಗಿದ್ದರು. ಅವರ ಮಗಳಾದ ನಾನು ಕೂಡ ಬಂಗಾರಪ್ಪ ಅವರ ಹಾದಿಯಲ್ಲಿ ಸಾಗುತ್ತೇನೆ‌. ನೊಂದವರ ಕಣ್ಣೀರು ಒರೆಸುತ್ತೇನೆ ಎಂದರು.

Advertisements

ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ 5 ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಲಾಗಿದೆ ಎಂದರು.

ಶಾಸಕ ಬೇಳೂರು ಗೋಪಾಲಕೃಷ್ಣ ಮಾತನಾಡಿ, ಜಿಲ್ಲೆಯಲ್ಲಿ ಚುನಾವಣಾ ಪ್ರಚಾರ ಕಾವು ಹೆಚ್ಚಾಗಿದೆ.  ಆದ್ದರಿಂದ, ಇಲ್ಲಿ ಗೀತಾ ಶಿವರಾಜಕುಮಾರ್ ಅವರನ್ನು ಹೆಚ್ಚಿನ ಮತದಿಂದ ಗೆಲ್ಲಿಸಬೇಕು. ಗೀತಾ ಶಿವರಾಜಕುಮಾರ್ ಅವರು ರಾಜಕೀಯಕ್ಕೆ ಬರಲು ಹಕ್ಕಿದೆ. ಅವರ ರಕ್ತದಲ್ಲಿಯೇ ಸಾಮಾಜಿಕ ಸೇವೆಯ ಗುಣವಿದೆ. ಆದರೆ, ಈ ಬಗ್ಗೆ ಕೆಲವರು ಟೀಕಿಸುತ್ತಿದ್ದಾರೆ. ಇದಕ್ಕೆ ಉತ್ತರವಾಗಿ ಮತ ನೀಡಿ ಹರಿಸಬೇಕು ಎಂದು ಕೋರಿದರು.

ಸಂಸದ ಬಿ.ವೈ. ರಾಘವೇಂದ್ರ ಅವರು ಗ್ರಾಮೀಣ ಮಟ್ಟಕ್ಕೆ ಯಾವುದೇ ಕೊಡುಗೆ ನೀಡಿಲ್ಲ. ಸೋಗಾನೆ ವಿಮಾನ ನಿಲ್ದಾಣ, ಸೇತುವೆ, ರಸ್ತೆ ಮಾಡಿದರೆ ಮಾತ್ರ ಅಭಿವೃದ್ಧಿ ಅಲ್ಲ. ಬಡ ಜನರ ಅಳಲು ಆಲಿಸಬೇಕು. ಈ ಕಾರ್ಯವನ್ನು ಗೀತಾ ಅವರು ಪ್ರಮಾಣಿಕವಾಗಿ ಮಾಡಲಿದ್ದಾರೆ ಎಂದರು.

ನಟ ಶಿವರಾಜಕುಮಾರ್ ಮಾತನಾಡಿ, ಆರೋಗ್ಯ ಸಮಸ್ಯೆ ನಡುವೆಯೂ ಕಾರ್ಯಕ್ರಮಕ್ಕೆ ಆಗಮಿಸಿದ್ದೇನೆ. ಇದಕ್ಕೆ ಕಾರಣ ಶಿವಮೊಗ್ಗ ಜನರು ಗೀತಾ ಅವರ (ಪತ್ನಿ) ಮೇಲಿಟ್ಟಿರುವ ನಂಬಿಕೆ. ಆದ್ದರಿಂದ, ನಾನು ಗೀತಾ ಅವರನ್ನು ನಂಬಿದ್ದೇನೆ. ಮತ ನೀಡಿ ಎಂದು ಮನೆ ಬಾಗಿಲಿಗೆ ಬಂದಿದ್ದೇವೆ. ಮತ ನೀಡಿ ಆಶೀರ್ವದಿಸಿ ಎಂದು ಕೋರಿದರು.

ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಅವರು ಜಿಲ್ಲೆಯಲ್ಲಿ ಕಣ್ಮರೆ ಆಗಿದ್ದಾರೆ ಎಂದು ಕೆಲವರು ವದಾಂತಿ ಹಬ್ಬಿಸುತ್ತಿದ್ದಾರೆ. ಆದರೆ, ಈ ರೀತಿ ಮಾಡುವುದು ತಪ್ಪು. ಚುನಾವಣೆ ಪ್ರಚಾರ ಎಂದಾಕ್ಷಣಾ ಪೋಟೊ, ವಿಡಿಯೋ ತೆಗೆಸಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಲ್ಲ. ಜನರ ಅಳಲು ಆಲಿಸಬೇಕು. ಈ ಕಾರ್ಯವನ್ನು ನಾನು ಮಾಡುತ್ತಿದ್ದೇನೆ ಎಂದರು.

ಶಾಸಕ ಬೇಳೂರು ಗೋಪಾಲಕೃಷ್ಣ, ಸಾಗರ ತಾಲ್ಲೂಕಿನಲ್ಲಿ ಮಾಜಿ ಶಾಸಕ ಹರತಾಳು ಹಾಲಪ್ಪ ಆಡಳಿತದ ಅವಧಿಯಲ್ಲಿ ಅಭಿವೃದ್ಧಿ ಕಾರ್ಯ ಶೂನ್ಯ. ಸಾಗರದಲ್ಲಿ ಮದ್ಯದಂಗಡಿ ತೆರೆದಿರುವುದ ಬಿಟ್ಟರೆ, ಬೇರೆ ಯಾವುದೇ ಅಭಿವೃದ್ಧಿ ಮಾಡಿಲ್ಲ. ಜನರಿಗೆ ಬೇಕಿರುವುದು ಕಣ್ಣೀರು ಒರೆಸುವ ಕೈಗಳು. ಅದೇ ಕಾರಣಕ್ಕೆ ಹಾಲಪ್ಪ ಮನೆ ಸೇರಿದ್ದಾರೆ. ಆದ್ದರಿಂದ, ಇಲ್ಲಿ ಗೀತಾ ಶಿವರಾಜಕುಮಾರ್ ಅವರನ್ನು ಬೆಂಬಲಿಸಬೇಕು ಎಂದರು.

ಕೆಪಿಸಿಸಿ ಉಪಾಧ್ಯಕ್ಷ ಅನಿಲ್ ಕುಮಾರ್ ತಡಕಲ್, ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ, ಕಲಗೋಡು ರತ್ನಾಕರ್, ಸಾಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಲಸೆ ಚಂದ್ರಪ್ಪ, ಮೋಹನ್, ಅನಿತಾ ಕುಮಾರಿ, ಸೂರನಗದ್ದೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೇಖಾ ಅಣ್ಣಪ್ಪ ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

Download Eedina App Android / iOS

X