ರಾಜ್ಯದ ಉತ್ತರ ಒಳನಾಡು ಸೇರಿದಂತೆ ಹಲವೆಡೆ ಮುಂದಿನ ಐದು ದಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಐದು ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಿಸಿದೆ.
ಬಾಗಲಕೋಟೆ, ಗದಗ, ಕಲಬುರಗಿ, ಕೊಪ್ಪಳ, ವಿಜಯಪುರ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ರಾಯಚೂರು, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಅಲ್ಲದೇ, ಮುಂದಿನ ಮೂರು ದಿನಗಳಲ್ಲಿ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಬಿಸಿ ವಾತಾವರಣವಿರಲಿದೆ.
ಬಾಗಲಕೋಟೆ, ಕಲಬುರಗಿ, ವಿಜಯಪುರ, ಕೊಪ್ಪಳ ಹಾಗೂ ಗದಗ ಜಿಲ್ಲೆಗಳಲ್ಲಿ ಉಷ್ಣ ಅಲೆ ಇರುವ ಸಾಧ್ಯತೆ ಇದೆ. ಕಲಬುರಗಿಯಲ್ಲಿ 42.3 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ.
ಬೆಂಗಳೂರಿನಲ್ಲಿ ಶೂನ್ಯ ಮಳೆ ದಾಖಲು
ಬೆಂಗಳೂರಿನಲ್ಲಿ ಕಳೆದ ಮೂರು ವರ್ಷಗಳಲ್ಲಿಯೇ ಶೂನ್ಯ ಮಳೆ ದಾಖಲಾಗಿದೆ. ಫೆಬ್ರವರಿಯಲ್ಲಿ 7.1ಮಿ.ಮೀ ಹಾಗೂ ಮಾರ್ಚ್‌ನಲ್ಲಿ 14.7ಮಿ.ಮೀ ಮಳೆಯಾಗಬೇಕಿತ್ತು. ಆದರೆ, ಈ ಬಾರಿ ಎರಡು ತಿಂಗಳಿನಲ್ಲಿ ಮಳೆಯೇ ಆಗಿಲ್ಲ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ವಾಡಿಕೆಯ ಪ್ರಕಾರ ಏಪ್ರಿಲ್‌ನಲ್ಲಿ 61.7 ಮೀ ಮಳೆಯಾಗಬೇಕಿತ್ತು. ಆದರೆ, ಬೆಂಗಳೂರಿನಲ್ಲಿ ಏಪ್ರಿಲ್ ಮಧ್ಯದವರೆಗೆ ಮಳೆಯಾಗಿಲ್ಲ. ಅಲ್ಲದೇ, ಅಂತ್ಯದವರೆಗೂ ಮಳೆಯ ಸುಳಿವಿಲ್ಲ ಎನ್ನಲಾಗಿದೆ
ಬೆಂಗಳೂರಿನಲ್ಲಿ ಮತ್ತೆ ಎರಡು ಡಿಗ್ರಿ ಉಷ್ಣಾಂಶ ಏರಿಕೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ. ನಗರದಲ್ಲಿ ಸಾಮಾನ್ಯವಾಗಿ ಮೋಡಕವಿದ ವಾತಾವರಣವಿರಲಿದೆ.
ಈ ಸುದ್ದಿ ಓದಿದ್ದೀರಾ? ತೆಲಂಗಾಣ | ಔಷಧ ಘಟಕದಲ್ಲಿ ರಿಯಾಕ್ಟರ್ ಸ್ಫೋಟ; 7 ಮಂದಿ ಸಾವು
ಎಚ್ಎಎಲ್ನಲ್ಲಿ 36.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.5 1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 37.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 37.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 36.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊನ್ನಾವರದಲ್ಲಿ 33.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 35.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 38.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.