ಹಾವೇರಿ | ʼಶಬರಿʼ ಪರೀಕ್ಷೆ ಯೋಜನೆ: ಎಲ್ಲ ಹಾಸ್ಟೆಲ್‌ಗಳಿಗೂ ವಿಸ್ತರಿಸಲು ಎಸ್ಎಫ್ಐ ಒತ್ತಾಯ

Date:

Advertisements

ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವಸತಿ ನಿಲಯಗಳಲ್ಲಿ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆ ತಯಾರಿ ʼಶಬರಿʼ ಪರೀಕ್ಷೆ ಯೋಜನೆಯನ್ನು ತಾರತಮ್ಯ ಮಾಡದೇ ಎಲ್ಲಾ ಹಾಸ್ಟೆಲ್ ವಿದ್ಯಾರ್ಥಿಗಳಿಗೂ ವಿಸ್ತರಣೆ ಮಾಡಬೇಕೆಂದು ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ಒತ್ತಾಯಿಸಿದೆ.

ಎಸ್ಎಫ್ಐ ಜಿಲ್ಲಾ ಸಹ ಕಾರ್ಯದರ್ಶಿ ಬಸವರಾಜ.ಎಸ್ ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ್ದು, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ನಂತರದ ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಪದವಿ/ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ಆಸಕ್ತ ವಿದ್ಯಾರ್ಥಿ/ ವಿದ್ಯಾರ್ಥಿನಿಯರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಹೇಗೆ ಎದುರಿಸಬೇಕು ಎಂಬುದನ್ನು ಮನದಟ್ಟು ಮಾಡಲು ಪ್ರತೀ ಗುರುವಾರ ಕಿರು ಪರೀಕ್ಷೆ ನಡೆಸಿ ಮೌಲ್ಯಮಾಪನ ಮಾಡಿ ಫಲಿತಾಂಶವನ್ನು ಇಲಾಖೆಯ ಕೇಂದ್ರ ಕಚೇರಿಗೆ ಸಲ್ಲಿಸಬೇಕೆಂದು ಆದೇಶಿಸಿದೆ.

ಪ್ರಥಮ ದರ್ಜೆ ನೇಮಕಾತಿ ಪ್ರವೇಶ ಪರೀಕ್ಷೆಯ ಸ್ಪರ್ಧಾತ್ಮಕ ಪರೀಕ್ಷೆಯ ತಯಾರಿ ನಡೆಸಲು ʼS.M. Careerʼ ಸಂಸ್ಥೆಯೊಂದಿಗೆ ಒಪ್ಪಂದ ಮಾಡಿಕೊಂಡು. ಒಪ್ಪಂದದಂತೆ ಪ್ರತೀ ವಿದ್ಯಾರ್ಥಿನಿಲಯಗಳಿಗೆ 20 ಪುಸ್ತಕಗಳನ್ನು ಸರಬರಾಜು ಮಾಡಿ ಗ್ರಂಥಾಲಯದಲ್ಲಿ ಇಡತಕ್ಕದ್ದು. ಇದೇ ಪುಸ್ತಕದ ಆಧಾರದ ಮೇಲೆ ಪ್ರಶ್ನೆಪತ್ರಿಕೆಗಳನ್ನು ಸಿದ್ಧಪಡಿಸಿ 705 ಪುಟಗಳನ್ನು ಒಳಗೊಂಡಿರುವ ಪುಸ್ತಕದಲ್ಲಿ ಪ್ರತಿವಾರ 50 ಪುಟಗಳನ್ನು ಒಳಗೊಂಡಂತೆ ವಿಷಯ ವಸ್ತು ಆಧರಿಸಿ ಪ್ರಶ್ನೆಪತ್ರಿಕೆ ಸಿದ್ಧಪಡಿಸಿ ಇ-ಮೇಲ್ ಮೂಲಕ ಕಳುಹಿಸಬೇಕು.

Advertisements

ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿ/ವಿದ್ಯಾರ್ಥಿನಿಯರ ಹಾಜರಾತಿ ರಿಜಿಸ್ಟರ್ ಹಾಗೂ ಪರೀಕ್ಷೆಯಲ್ಲಿ ಪಡದೆ ಅಂಕಗಳನ್ನು ಅಂಕಪಟ್ಟಿ ರಿಜಿಸ್ಟ್ರಾರ್ ನಲ್ಲಿ ನಿರ್ವಾಹಿಸುಬೇಕು. ಹಾಗೂ ಪರೀಕ್ಷೆ ನಡೆಯುವ ಛಾಯಾಚಿತ್ರದ (ಜಿ.ಪಿ.ಎಸ್.ಪೋಟೋ ಅನ್ನು ) ಪ್ರತಿವಾರ ಇ-ಮೇಲ್ ಮೂಲಕ ಕಚೇರಿಗೆ ಕಳುಹಿಸಬೇಕು. ಪ್ರಶ್ನೆ ಪತ್ರಿಕೆಯು 40 ಅಂಕಗಳದ್ದಾಗಿರುತ್ತದೆ ಮತ್ತು ಕನ್ನಡ ಮಾಧ್ಯಮದಲ್ಲಿರುತ್ತದೆ ಹಾಗೂ 30 ನಿಮಿಷಗಳಲ್ಲಿ ಉತ್ತರಿಸಬೇಕಾಗಿರುತ್ತದೆ.

ಒಟ್ಟಾರೆಯಾಗಿ ಈ ʼಶಬರಿʼ ಸರಣಿ ಸ್ಪರ್ಧಾತ್ಮಕ ಪರೀಕ್ಷೆ ಯೋಜನೆಯು ಲಕ್ಷಾಂತರ ವಿದ್ಯಾರ್ಥಿಗಳಿಗೆ ತುಂಬಾ ಅನುಕೂಲಕರವಾಗಿದ್ದು. ಸ್ಪರ್ಧಾತ್ಮಕ ಪರೀಕ್ಷೆ ತರಬೇತಿಗಾಗಿ ಸಾವಿರಾರು ರೂಪಾಯಿ ಖರ್ಚು ಮಾಡಿ, ಧಾರವಾಡ ಸೇರಿದಂತೆ ದೂರದ ನಗರಗಳಿಗೆ ಹೋಗಿ ಅಭ್ಯಾಸ ಮಾಡಲು ಅಸಾಧ್ಯವಾಗಿದ್ದು, ಈ ಯೋಜನೆಯನ್ನು ಕೇವಲ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಗೆ ಸೀಮಿತಗೊಳಿಸಿ ತಾರತಮ್ಯ ಮಾಡದೇ ಹೆಚ್ಚುವರಿ ಅನುದಾನ ಒದಗಿಸಿ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಸತಿ ನಿಲಯದ ಎಲ್ಲಾ ವಿದ್ಯಾರ್ಥಿಗಳಿಗೂ ಯೋಜನೆಯನ್ನು ವಿಸ್ತರಿಸಲು ಸಂಬಂಧಿಸಿದ ಇಲಾಖೆಗಳು ಮುಂದಾಗ ಬೇಕು. ಈ ಮೂಲಕ ಬಡ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ಸರಾಗವಾಗಿ ಎದುರಿಸಲು ಸಹಕರಿಸಬೇಕೆಂದು ಪತ್ರಿಕಾ ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X