ಎನ್‌ಡಿಎ ಮೈತ್ರಿಕೂಟದ ತುಮಕೂರು ಲೋಕಸಭಾ ಕ್ಷೇತ್ರ ಅಭ್ಯರ್ಥಿ ವಿ ಸೋಮಣ್ಣ ನಾಮಪತ್ರ ಸಲ್ಲಿಸಿದ್ದಾರೆ. ಅವರು ನಾಮಪತ್ರ ಸಲ್ಲಿಸುವಾಗ ಮಾಜಿ ಮುಖ್ಯಮತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಎಚ್.ಡಿ ಕುಮಾರಸ್ವಾಮಿ ಜೊತೆಗಿದ್ದು, ಸಾಥ್ ನೀಡಿದ್ದಾರೆ.
ಏ.3ರಂದು ಬೆಳಿಗ್ಗೆ 11ಗಂಟೆಗೆ ವಿ.ಸೋಮಣ್ಣ ಕಾಲ್ಟೆಕ್ಸ್ ಸರ್ಕಲ್‍ನ ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಸಾವಿರಾರು ಕಾರ್ಯಕರ್ತರೊಂದಿಗೆ ಟೌನ್‍ಹಾಲ್ ಸರ್ಕಲ್, ಗಾಯತ್ರಿ ಟಾಕೀಸ್ ಮುಂಭಾಗದಿಂದ ಎಂ.ಜಿ.ರಸ್ತೆಯ ಮೂಲಕ ಮೆರವಣಿಗೆಯಲ್ಲಿ ತೆರಳಿ ನಾಮ ಪತ್ರ ಸಲ್ಲಿಸಿದರು. ಮಾಜಿ ಸಿಎಂಗಳಾದ ಬಿ.ಎಸ್.ಯಡಿಯೂರಪ್ಪ, ಎಚ್.ಡಿ. ಕುಮಾರಸ್ವಾಮಿ, ಸೋಮಣ್ಣಗೆ ಸಾಥ್ ನೀಡಿದರು.
ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಸಂಸದ ಜಿ.ಎಸ್. ಬಸವರಾಜು ಉಪಸ್ಥಿತ್ತರಿದ್ದರು.
