ತೇಜಸ್ವಿ ಸೂರ್ಯ ನಾಮಪತ್ರ ಸಮಾವೇಶದ ವೇಳೆ ‘ದ್ವೇಷ ಪಂಚರ್ ಮಾಡಿ’ ಬ್ಯಾನರ್ ಪ್ರದರ್ಶಿಸಿದ ಸಾಮಾಜಿಕ ಕಾರ್ಯಕರ್ತರು

Date:

Advertisements

ತೇಜಸ್ವಿ ಸೂರ್ಯ ನಾಮಪತ್ರ ಸಲ್ಲಿಕೆಗೂ ಮುನ್ನ ಆಯೋಜಿಸಲಾಗಿದ್ದ ಸಮಾವೇಶದಲ್ಲಿ ‘ಪ್ರೀತಿಯಿಂದ ದ್ವೇಷವನ್ನು ಪಂಚರ್ ಮಾಡಿ’ ಎಂದು ಸಾಮಾಜಿಕ ಕಾರ್ಯಕರ್ತರ ತಂಡವೊಂದು ಬ್ಯಾನ‌ರ್ ಪ್ರದರ್ಶನ ಮಾಡಿದ ಬೆಳವಣಿಗೆ ಬೆಂಗಳೂರಿನ ಜಯನಗರದಲ್ಲಿ ಇಂದು ನಡೆದಿದೆ.

ಬ್ಯಾನರ್ ಪ್ರದರ್ಶನದ ವೇಳೆ ಸ್ಥಳದಲ್ಲಿದ್ದ ಬಿಜೆಪಿ ಕಾರ್ಯಕರ್ತರು ಹಾಗೂ ತೇಜಸ್ವಿ ಸೂರ್ಯ ಬೆಂಬಲಿಗರು ಇದಕ್ಕೆ ವಿರೋಧ ವ್ಯಕ್ತಪಡಿಸಿದ ಘಟನೆ ಕೂಡ ನಡೆಯಿತು.

ಗುರುವಾರ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ತೇಜಸ್ವಿ ಸೂರ್ಯ ನಾಮಪತ್ರ ಸಲ್ಲಿಕೆ ಹಿನ್ನೆಲೆಯಲ್ಲಿ ಜಯನಗರದಲ್ಲಿ ಕಾರ್ಯಕರ್ತರ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಈ ಸಮಾವೇಶದಲ್ಲಿ ಕೇಂದ್ರ ಸಚಿವ ಅನುರಾಗ್ ಠಾಕೂರ್, ವಿಪಕ್ಷದ ನಾಯಕ ಆರ್ ಅಶೋಕ್‌, ಪ್ರತಾಪ್ ಸಿಂಹ ಸೇರಿದಂತೆ ಮತ್ತಿತರ ಮುಖಂಡರು ಉಪಸ್ಥಿತರಿದ್ದರು.

Advertisements

ಈ ವೇಳೆ ಸಾಮಾಜಿಕ ಕಾಯಕರ್ತ ವಿನಯ್ ಕುಮಾರ್ ಅವರ ನೇತೃತ್ವದ ಐದರಿಂದ ಆರು ಜನರಿದ್ದ ತಂಡವೊಂದು ಸ್ಥಳಕ್ಕೆ ಆಗಮಿಸಿ, ಬ್ಯಾನರ್‌ ಪ್ರದರ್ಶನ ಮಾಡಿತು. ಬ್ಯಾನ‌ರ್‌ನಲ್ಲಿ ‘ಪ್ರೀತಿಯಿಂದ ದ್ವೇಷವನ್ನು ಪಂಚ‌ರ್ ಮಾಡಿ(Puncture Hate With Love)‘ ಎಂದು ಇಂಗ್ಲಿಷ್‌ನಲ್ಲಿ ಬರೆಯಲಾಗಿತ್ತು. ಈ ಬ್ಯಾನರ್ ಪ್ರದರ್ಶನ ಮಾಡುತ್ತಿದ್ದಂತೆ ಸ್ಥಳದಲ್ಲಿದ್ದ ಬಿಜೆಪಿ ಕಾರ್ಯಕರ್ತರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.

ಈ ವಿಚಾರವಾಗಿ ಈ ದಿನ.ಕಾಮ್ ಜೊತೆಗೆ ಮಾತನಾಡಿದ ತಂಡದ ಸದಸ್ಯ ವಿನಯ್ ಕುಮಾರ್, “ದೇಶದಲ್ಲಿ ಇರುವ ಕೋಮುವಾದ ವಿರೋಧಿಸಿ ಬ್ಯಾನ‌ರ್ ಪ್ರದರ್ಶನ ಮಾಡಿದ್ದೇವೆ. ತೇಜಸ್ವಿ ಸೂರ್ಯ ಬಂಧುತ್ವ ಬೆಳೆಸುವ ಕೆಲಸ ಮಾಡಬೇಕು. ಇತ್ತೀಚೆಗೆ ನಗರ್ತಪೇಟೆಯ ಘಟನೆಯಲ್ಲೂ ಕೂಡ ಅವರು ದ್ವೇಷ ಹರಡುವ ಕೆಲಸ ಮಾಡುವ ಮೂಲಕ ಬೆಂಗಳೂರಿಗೆ ಕಳಂಕ ತಂದಿದ್ದರು. ಅಲ್ಲದೇ, ವಿವಾದಾತ್ಮಕ ಹೇಳಿಕೆಗಳನ್ನು ಕೂಡ ನೀಡುತ್ತಿದ್ದಾರೆ. ನೀವು ಜನಪ್ರತಿನಿಧಿಯಾಗಿ ತಪ್ಪು ಮಾಡುತ್ತಾ ಇದ್ದೀರಿ ಎಂಬುದನ್ನು ನೆನೆಪಿಸಲು ನಮ್ಮ ಕರ್ತವ್ಯ ಮಾಡಿದ್ದೇವೆ” ಎಂದು ತಿಳಿಸಿದರು.

“ಜನರಲ್ಲಿ ದ್ವೇಷ ಭಾವನೆ ಹುಟ್ಟುವಂತೆ ಮಾಡಬಾರದು. ಅದಕ್ಕೆ ಪ್ರೀತಿ ಬೆಳೆಯಲಿ ದ್ವೇಷ ಬೇಡ ಎಂದು ಬ್ಯಾನ‌ರ್ ಪ್ರದರ್ಶನ ಮಾಡಿದ್ದೇವೆ. ನಮಗೆ ವೈಯಕ್ತಿಕವಾಗಿ ಅವರ ಮೇಲೆ ಸಿಟ್ಟಿಲ್ಲ. ಸಮಾಜದ ಸೌಹಾರ್ದ ಹಾಗೂ ಶಾಂತಿ ಕದಡಿಸುವ ಹೇಳಿಕೆ ಕೊಡಬಾರದು. ಅದರ ಅಗತ್ಯ ನಮ್ಮಂತಹ ಜನಸಾಮಾನ್ಯರಿಗಿಲ್ಲ. ಅದನ್ನು ತಿಳಿಸಲು ನಮ್ಮ ಶ್ರಮ” ಎಂದು  ಎಂದರು.

ಸಾಮಾಜಿಕ ಕಾರ್ಯಕರ್ತರ ತಂಡದಲ್ಲಿ ಗೀತಾ,ಮಾಧುರಿ ಸೇರಿದಂತೆ ಹಲವರಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಳಂಕಿತ ನೈಸ್ ಕಂಪನಿಗೆ ಯಾವುದೇ ಕಾಮಗಾರಿ ನೀಡದಂತೆ ಸರ್ಕಾರಕ್ಕೆ ನೈಸ್ ಭೂ ಸಂತ್ರಸ್ತ ರೈತರ ಆಗ್ರಹ

ಬಿಎಂಐಸಿ-ನೈಸ್ ಕಂಪನಿ ಕುರಿತು ಮುಂದಿನ ನಿರ್ಧಾರ ಕೈಗೊಳ್ಳಲು ರಾಜ್ಯ ಸರ್ಕಾರ ಸಲಹಾ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

Download Eedina App Android / iOS

X