ದೇಶದ ಪ್ರತಿ ವ್ಯಕ್ತಿಯ ಮೇಲೆ ₹92 ಸಾವಿರ ಸಾಲ!; ಅಶೋಕನ ‘ಅನರ್ಥಶಾಸ್ತ್ರ’ದಲ್ಲಿ ಮೋದಿ ಸಾಲಕ್ಕೆ ಲೆಕ್ಕವಿಲ್ಲವೇ: ಸಿದ್ದರಾಮಯ್ಯ ಕಿಡಿ

Date:

Advertisements

2014ರಲ್ಲಿ ಕೇವಲ ರೂ.55 ಲಕ್ಷ ಕೋಟಿಯಷ್ಟು ಇದ್ದ ಭಾರತದ ಸಾಲ ಈ ಹಣಕಾಸಿನ ವರ್ಷದಲ್ಲಿ ರೂ.183.67 ಲಕ್ಷ ಕೋಟಿಗೆ ತಲುಪಿದೆ. ಹತ್ತು ವರ್ಷಗಳಲ್ಲಿ ನರೇಂದ್ರ ಮೋದಿ ಅವರು ಮಾಡಿರುವ ಸಾಲ ರೂ.123 ಲಕ್ಷ ಕೋಟಿ. ಅಂದರೆ ಪ್ರತಿಯೊಬ್ಬ ಭಾರತೀಯನ ತಲೆ ಮೇಲೆ 92 ಸಾವಿರ ರೂಪಾಯಿಗಳ ಸಾಲದ ಹೊರೆ ಇದೆ. “ಸಬ್ ಕಾ ಸಾಥ್ ಸಬ್ ಕೋ ಸಾಲ” ಎಂದು ಸಿಎಂ ಸಿದ್ದರಾಮಯ್ಯ ಆರ್‌ ಅಶೋಕ್‌ಗೆ ತಿರುಗೇಟು ನೀಡಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, “ಆರ್ ಅಶೋಕ್ ಅವರೇ, ಯಾಕೆ ನಮ್ಮ ಕೈಯಲ್ಲಿ ಬಡಿಗೆ ಕೊಟ್ಟು ಬಡಿಸಿಕೊಳ್ಳುತ್ತೀರಿ? ರಾಜ್ಯ ಸರ್ಕಾರದ ಸಾಲದ ಲೆಕ್ಕ ಹೇಳಿದ್ದೀರಿ, ಕೇಂದ್ರದಲ್ಲಿ ನರೇಂದ್ರ ಮೋದಿಯವರ ನೇತೃತ್ವದ ನಿಮ್ಮದೇ ಪಕ್ಷದ ಸರ್ಕಾರದ ಸಾಲದ ಕತೆಯನ್ನು ಸ್ವಲ್ಪ ಹೇಳಿ ಬಿಡಿ. ನೀವು ಮರೆತಿದ್ದರೆ ನಾನು ಹೇಳುತ್ತೇನೆ ಕೇಳಿ” ಎಂದಿದ್ದಾರೆ.

“ಅಶೋಕ್ ಅವರೇ, ನಿಮಗೆ ಈ ಆರ್ಥಿಕ ವ್ಯವಹಾರಗಳು ಅರ್ಥವಾಗುವುದಿದ್ದರೆ ಸ್ವಲ್ಪ ಕೇಳಿಸಿಕೊಳ್ಳಿ. ನಮ್ಮ ರಾಜ್ಯ ಸರ್ಕಾರದ ಸಾಲ ‘’ಹಣಕಾಸು ಜವಾಬ್ದಾರಿ ಮತ್ತು ಬಜೆಟ್ ನಿರ್ವಹಣಾ ಕಾಯ್ದೆ (ಎಫ್ ಆರ್ ಬಿ)ಯ ವ್ಯಾಪ್ತಿಯಲ್ಲಿಯೇ ಇದೆ. ನಮ್ಮ ಒಟ್ಟು ಸಾಲ ಒಂದು ಲಕ್ಷ ಕೋಟಿಯನ್ನು ಮೀರಿದ್ದರೂ ಅದು ನಮ್ಮ ಜಿಎಸ್‌ಡಿಪಿಯ ಶೇ.25ರ ಮಿತಿಯೊಳಗೆಯೇ ಇದೆ. ನಮ್ಮ ಹಣಕಾಸು ಕೊರತೆ ಕೂಡಾ ಜಿಎಸ್‌ಡಿಪಿಯ ಶೇಕಡಾ ಮೂರನ್ನೂ ಮೀರಿಲ್ಲ” ಎಂದು ಹೇಳಿದ್ದಾರೆ.

Advertisements

“ಕೇಂದ್ರದ ಬಿಜೆಪಿ ಆಡಳಿತದಲ್ಲಿ ಸರ್ಕಾರದ ಸಾಲ ಮಾತ್ರ ಹೆಚ್ಚಾಗುತ್ತಿಲ್ಲ, ಅವಶ್ಯಕ ವಸ್ತುಗಳ ಬೆಲೆ ಏರಿಕೆಯಿಂದಾಗಿ ಜನರ ವೈಯಕ್ತಿಕ ಸಾಲ ಕೂಡಾ ಹೆಚ್ಚಾಗುತ್ತಿದ್ದರೆ, ನಿರುದ್ಯೋಗದಿಂದಾಗಿ ಕುಟುಂಬದ ಆದಾಯ ಕುಸಿಯತ್ತಿದೆ. ಹಾಗಿದ್ದರೆ ನರೇಂದ್ರ ಮೋದಿ ಸರ್ಕಾರದ ಸಾಲದ ಹಣ ಎಲ್ಲಿ ಸೋರಿಹೋಗುತ್ತಿದೆ” ಎಂದು ಸಿಎಂ ಪ್ರಶ್ನಿಸಿದ್ದಾರೆ.

“ಬೆಲೆ ಏರಿಕೆ, ನಿರುದ್ಯೋಗಗಳಿಂದಾಗಿ ತತ್ತರಿಸಿ ಹೋಗಿರುವ ರಾಜ್ಯದ ಜನತೆ ನಮ್ಮ ಗ್ಯಾರಂಟಿ ಮತ್ತು ಇತರ ಜನ ಕಲ್ಯಾಣ ಯೋಜನೆಗಳಿಂದಾಗಿ ಉಸಿರಾಡುವಂತಾಗಿದೆ. ಗ್ಯಾರಂಟಿ ಯೋಜನಗೆಳು ರಾಜ್ಯದ ಒಂದೂವರೆ ಕೋಟಿ ಕುಟುಂಬಗಳನ್ನು ನೇರವಾಗಿ ತಲುಪಿದೆ. 1.22 ಕೋಟಿ ಮಹಿಳೆಯರು ನಮ್ಮ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಾಗಿದ್ದಾರೆ. ನಮ್ಮ ಗ್ಯಾರಂಟಿ ಮತ್ತಿತರ ಕಲ್ಯಾಣ ಯೋಜನೆಗಳಿಂದಾಗಿ ಪ್ರತಿ ಕುಟುಂಬದ ಮಾಸಿಕ ಆದಾಯ ಏಳರಿಂದ ಹತ್ತು ಸಾವಿರ ರೂಪಾಯಿಗಳಷ್ಟು ಹೆಚ್ಚಾಗಿದೆ” ಕಿಡಿಕಾರಿದ್ದಾರೆ.

“ಅಶೋಕ್ ಅವರೇ, ಬೆಂಗಳೂರು ನಗರದಲ್ಲಿ ಕೂತು ಆಧಾರವಿಲ್ಲದ ರಾಜಕೀಯ ಹೇಳಿಕೆಗಳನ್ನು ನೀಡುತ್ತಾ ಕಾಲ ಹರಣ ಮಾಡಬೇಡಿ. ಹಳ್ಳಿಗಳಿಗೆ ಹೋಗಿ ನಿಮ್ಮ ಪಕ್ಷದ ಬೆಂಬಲಿಗರ ಜೊತೆಯಲ್ಲಿಯೇ ಮಾತನಾಡಿ. ನಮ್ಮ ಸರ್ಕಾರದ ಯೋಜನೆಗಳಿಂದ ಅವರು ಏನನ್ನು ಪಡೆದುಕೊಳ್ಳುತ್ತಿದ್ದಾರೆ ಎನ್ನುವುದನ್ನು ಅವರ ಬಾಯಿಯಿಂದಲೇ ಕೇಳಿ ನೋಡಿ. ಇಡೀ ಕರ್ನಾಟಕ ನಮ್ಮ ಸರ್ಕಾರದ ಸಾಧನೆಗಳ ಬಗ್ಗೆ ಮಾತನಾಡುತ್ತಿದೆ” ಎಂದು ತಿಳಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X