ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರು ಶುಕ್ರವಾರ (ಏ.5) ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.
ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿಗೆ ಬೆಂಬಲ ಸೂಚಿಸಿದ್ದ ಅವರು, ಈ ಬಾರಿ ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿಯಿಂದ ಟಿಕೆಟ್ ನಿರೀಕ್ಷೆಯಲ್ಲಿದ್ದರು. ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಯಿಂದಾಗಿ ಮಂಡ್ಯ ಟಿಕೆಟ್ ಜೆಡಿಎಸ್ ಪಾಲಾಗಿದ್ದು, ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರು ಸ್ಪರ್ಧಿಸುತ್ತಿದ್ದಾರೆ.
ಮಂಡ್ಯ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಮಂಡ್ಯದಲ್ಲಿ ತಮ್ಮ ಬೆಂಬಲಿಗ ಸಭೆ ನಡೆಸಿದ ಸುಮಲತಾ ಅವರು ಪ್ರಧಾನಿ ಮೋದಿ ಮಾತಿಗೆ ಗೌರವಕೊಟ್ಟು ಬಿಜೆಪಿ ಸೇರುವುದಾಗಿ ಘೋಷಿಸಿದ್ದರು. ಆ ಪ್ರಕಾರ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಪಕ್ಷದ ಕಚೇರಿಯಲ್ಲಿ ಬಿಜೆಪಿ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಪಕ್ಷದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಸಮ್ಮುಖದಲ್ಲಿ ಬಿಜೆಪಿ ಸೇರಿದರು.
“ಮಂಡ್ಯ ಜಿಲ್ಲೆಯ ಸಮಗ್ರ ಅಭಿವೃದ್ಧಿಯೇ ನನ್ನ ಮೂಲ ಮಂತ್ರವಾಗಿದೆ. ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿ ಎಂಬ ಆಶಯದಿಂದ ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದೇನೆ. ಮಂಡ್ಯದ ನನ್ನ ಅಭಿಮಾನಿಗಳು, ಅಂಬರೀಶ್ ಅಭಿಮಾನಿಗಳು ಹಿತೈಷಿಗಳ ಹಾರೈಕೆ ಮತ್ತು ಆಶೀರ್ವಾದವಿರಲಿ” ಎಂದು ಸುಮಲತಾ ಅಂಬರೀಶ್ ಅವರು ಸಾಮಾಜಿಕ ಜಾಲತಾಣದ ಮೂಲಕ ಮನವಿ ಮಾಡಿದ್ದಾರೆ.
ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲು, ತಮ್ಮ ನಿರಂತರ ಕಾರ್ಯದೊತ್ತಡದ ನಡುವೆಯೂ ನನಗೆ ಸಮಯ ನೀಡಿದ್ದಕ್ಕಾಗಿ, ಭಾರತ ದೇಶದ ಹೆಮ್ಮೆಯ ಪ್ರಧಾನ ಮಂತ್ರಿಗಳಾದ @PMOIndia ಸನ್ಮಾನ್ಯ ಶ್ರೀ ನರೇಂದ್ರ ಮೋದಿರವರಿಗೆ ನನ್ನ ಧನ್ಯವಾದಗಳು. @narendramodi ಶ್ರೀ ನರೇಂದ್ರ ಮೋದಿರವರು ವಿಶ್ವದ ಮಹಾನ್… pic.twitter.com/60y9sX7H53
— Sumalatha Ambareesh 🇮🇳 ಸುಮಲತಾ ಅಂಬರೀಶ್ (@sumalathaA) February 9, 2024
