ಎಲ್ಗಾರ್ ಪರಿಷತ್‌ ಪ್ರಕರಣ | ಸುಪ್ರೀಂ ಕೋರ್ಟ್‌ನಿಂದ ಪ್ರೊಫೆಸರ್ ಶೋಮಾ ಸೇನ್‌ಗೆ ಜಾಮೀನು

Date:

Advertisements

ಎಲ್ಗಾರ್ ಪರಿಷತ್‌-ಮಾವೋವಾದಿಗಳ ಜೊತೆಗಿನ ಸಂಪರ್ಕ ಪ್ರಕರಣದಲ್ಲಿ ಬಂಧಿತರಾಗಿದ್ದ ಪ್ರೊಫೆಸರ್ ಶೋಮಾ ಸೇನ್‌ ಅವರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಜಾಮೀನು ಮಂಜೂರು ಮಾಡಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ 2018ರ ಜೂನ್ 6ರಂದು ಇಂಗ್ಲಿಷ್ ಸಾಹಿತ್ಯ ಪ್ರಾಧ್ಯಾಪಕಿಯೂ ಆಗಿರುವ ಮಹಿಳಾ ಹಕ್ಕುಗಳ ಕಾರ್ಯಕರ್ತೆ ಸೇನ್ ಅವರನ್ನು ಬಂಧಿಸಲಾಗಿತ್ತು.

ಜಾಮೀನು ಮಂಜೂರು ಆದೇಶವನ್ನು ಪ್ರಕಟಿಸಿದ ನ್ಯಾಯಮೂರ್ತಿಗಳಾದ ಅನಿರುದ್ಧ ಬೋಸ್ ಮತ್ತು ಆಗಸ್ಟಿನ್ ಜಾರ್ಜ್ ಮಸಿಹ್ ಅವರಿದ್ದ ಪೀಠವು, ವಿಶೇಷ ನ್ಯಾಯಾಲಯದ ಅನುಮತಿಯಿಲ್ಲದೆ ಸೇನ್ ಮಹಾರಾಷ್ಟ್ರವನ್ನು ತೊರೆಯುವಂತಿಲ್ಲ ಸೇರಿದಂತೆ ಇತರ ಷರತ್ತುಗಳೊಂದಿಗೆ ಜಾಮೀನು ನೀಡಿದ್ದಾರೆ. ಸೇನ್ ಪ್ರಕರಣದಲ್ಲಿ ಯುಎಪಿಎ ಕಾಯ್ದೆಯ ಸೆಕ್ಷನ್ 433ಡಿ(5) ಅನ್ವಯ ಜಾಮೀನು ಮಂಜೂರು ಮಾಡಲು ಇರುವ ನಿರ್ಬಂಧಗಳು ಅನ್ವಯಿಸುವುದಿಲ್ಲ ಎಂದು ಸುಪ್ರೀಂ ಕೋರ್ಟ್‌ ಅಭಿಪ್ರಾಯಪಟ್ಟಿದೆ.

Advertisements

ಸೇನ್ ಹಿರಿಯ ವಯಸ್ಸಿನ ಹಾಗೂ ಹಲವು ಅಸ್ವಸ್ಥತೆಗಳನ್ನು ಹೊಂದಿರುವ ಮಹಿಳೆ ಎಂದೂ ಪೀಠ ಉಲ್ಲೇಖಿಸಿದೆ. ಅವರ ಮೇಳಿನ ಆರೋಪಗಳ ಸ್ವರೂಪ ಹಾಗೂ ವಿಚಾರಣೆ ಆರಂಭಕ್ಕೆ ಆಗಿರುವ ವಿಳಂಬದಿಂದಾಗಿ ಅವರು ಸುಧೀರ್ಘ ಸೆರೆಮನೆ ವಾಸ ಅನುಭವಿಸಿದ್ದಾರೆ ಎಂಬ ಅಂಶವನ್ನು ಜಾಮೀನು ಆದೇಶದಲ್ಲಿ ತಿಳಿಸಲಾಗಿದೆ.

ಜಾಮೀನು ಅವಧಿಯಲ್ಲಿ ಸೇನ್ ತಾವು ವಾಸವಾಗಿರುವ ವಿಳಾಸದ ಬಗ್ಗೆ ಎನ್‌ಐಎ ತನಿಖಾಧಿಕಾರಿಗೆ ತಿಳಿಸಬೇಕು. ಸೇನ್ ತನ್ನ ಮೊಬೈಲ್ ಫೋನ್‌ನ ಜಿಪಿಎಸ್ ಅನ್ನು ದಿನದ 24 ಗಂಟೆಯೂ ಸಕ್ರಿಯವಾಗಿರಿಸಿಕೊಳ್ಳಬೇಕು ಎಂದು ಪೀಠ ಹೇಳಿದೆ.

ಈ ಪ್ರಕರಣವು 2017ರ ಡಿಸೆಂಬರ್ 31ರಂದು ಪುಣೆಯ ಶನಿವಾರವಾಡದಲ್ಲಿ ನಡೆದ ಎಲ್ಗಾರ್ ಪರಿಷದ್ ಸಮಾವೇಶದಲ್ಲಿ ಮಾಡಿದ ಪ್ರಚೋದನಕಾರಿ ಭಾಷಣಗಳಿಗೆ ಸಂಬಂಧಿಸಿದೆ. ಇದು ಮರುದಿನ ನಗರದ ಹೊರವಲಯದಲ್ಲಿರುವ ಭೀಮಾ ಕೋರೆಗಾಂವ್ ಯುದ್ಧ ಸ್ಮಾರಕದ ಬಳಿ ಹಿಂಸಾಚಾರವನ್ನು ಪ್ರಚೋದಿಸಿತು ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ‘RCB ಸೋಲಿಗೆ ಅಶ್ವಿನಿ ಪುನೀತ್ ರಾಜ್​ಕುಮಾರ್ ಕಾರಣ’ ಎಂದು ಅವಹೇಳನಾಕಾರಿ ಟ್ವೀಟ್: ಕಮಿಷನರ್‌ಗೆ ದೂರು

ಈ ಹಿಂಸಾಚಾರದಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದು, ಹಲವು ಮಂದಿ ಗಾಯಗೊಂಡಿದ್ದರು. ಹನ್ನೆರಡಕ್ಕೂ ಹೆಚ್ಚು ಕಾರ್ಯಕರ್ತರು ಮತ್ತು ಶಿಕ್ಷಣ ತಜ್ಞರನ್ನು ಆರೋಪಿಗಳೆಂದು ಹೆಸರಿಸಲಾಗಿರುವ ಈ ಪ್ರಕರಣವನ್ನು ಪುಣೆ ಪೊಲೀಸರು ತನಿಖೆ ನಡೆಸಿದ್ದರು. ಈ ಸಮಾವೇಶಕ್ಕೆ ಮಾವೋವಾದಿಗಳ ಬೆಂಬಲವಿದೆ ಎಂದು ಪುಣೆ ಪೊಲೀಸರು ಆರೋಪಿಸಿದ್ದರು. ಸದ್ಯ ಈ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್‌ಐಎ) ವರ್ಗಾಯಿಸಲಾಗಿದೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X