2024-25ರ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ಮೇ 29ರಿಂದ ಶಾಲೆಗಳು ಆರಂಭ

Date:

Advertisements

2024-25ರ ಕರ್ನಾಟಕ ಶಾಲಾ ಶೈಕ್ಷಣಿಕ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಇಲಾಖೆ ಪ್ರಕಟಿಸಿದ್ದು, ಮೇ 29ರಿಂದ ಶಾಲೆಗಳು ಆರಂಭವಾಗಲಿವೆ.

ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯು ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಅನ್ವಯವಾಗುವಂತಹ 2024-2025ರ ಸಾಲಿನ ವಾರ್ಷಿಕ ಶೈಕ್ಷಣಿಕ ವೇಳಾಪಟ್ಟಿ ಪ್ರಕಟಿಸಿದೆ. ಮೇ 29ಕ್ಕೆ ಶಾಲೆಗಳು ಆರಂಭವಾಗಲಿದ್ದು, ಮುಂದಿನ ಶೈಕ್ಷಣಿಕ ವರ್ಷದ ಚಟುವಟಿಕೆ ಶುರುವಾಗಲಿವೆ.

ಈ ವೇಳಾಪಟ್ಟಿಯ ಪ್ರಕಾರ ಮೊದಲನೇ ಅವಧಿಯು 2024ರ ಮೇ 29ರಿಂದ ಅಕ್ಟೋಬರ್ 2ರವರೆಗೆ ಇರಲಿದೆ. ಎರಡನೇ ಅವಧಿಯು 2024ರ ಅಕ್ಟೋಬರ್‌ 21ರಿಂದ 2025ರ ಏಪ್ರಿಲ್‌ 10 ರವರೆಗೆ ಇರಲಿದೆ.

Advertisements

ಇದರ ನಡುವೆ, ಅಕ್ಟೋಬರ್ 3 ರಿಂದ 20 ರವರೆಗೆ ದಸರಾ ರಜೆ, 2025ರ ಏಪ್ರಿಲ್ 11 ರಿಂದ ಮೇ 28ರವರೆಗೆ ಬೇಸಿಗೆ ರಜೆ ನಿಗದಿ ಮಾಡಿದೆ. 244 ಶಾಲಾ ಕರ್ತವ್ಯದ ದಿನಗಳು ಇರಲಿದ್ದು, ಇದರಲ್ಲಿ ಪರೀಕ್ಷೆ ಮೌಲ್ಯಾಂಕನ ಕಾರ್ಯಕ್ಕೆ 26 ದಿನಗಳು, ಪಠ್ಯೇತರ ಚಟುವಟಿಕೆಗೆ 24 ದಿನಗಳು, ಮೌಲ್ಯಮಾಪನ, ಫಲಿತಾಂಶ ವಿಶ್ಲೇಷಣೆಗೆ 10 ದಿನ, ಶಾಲಾ ಸ್ಥಳೀಯ ರಜೆ 4 ದಿನ, ಬೋಧನಾ ಕಲಿಕೆಗೆ 180 ದಿನಗಳು ಎಂದು ವಿಂಗಡಿಸಲಾಗಿದೆ.

ಈ ವಾರ್ಷಿಕ ಮಾರ್ಗಸೂಚಿಯಲ್ಲಿ ಮಾಸಿಕ ಪಾಠ ಹಂಚಿಕೆ, ಪತ್ಯೇತರ ಚಟುವಟಿಕೆ, ಗುಣಮಟ್ಟದ ಶಿಕ್ಷಣಕ್ಕಾಗಿ ಫಲಿತಾಂಶಮುಖಿ ಚಟುವಟಿಕೆ, ಸಂಭ್ರಮ ಶನಿವಾರ ಸೇರಿ ಇತರ ಯೋಜನೆಗಳನ್ನು ನಿರ್ವಹಿಸುವಂತೆ ಶಾಲಾ ಶಿಕ್ಷಣ ಆಯುಕ್ತರು ಸೂಚನೆ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಮೇಶ್ವರಂ ಕೆಫೆ ಸ್ಪೋಟ | ಪರಿಶೀಲಿಸದ ಸುದ್ದಿಗಳು ಪ್ರಕರಣದ ತನಿಖೆಗೆ ಅಡ್ಡಿ: ಎನ್‌ಐಎ

ಏಪ್ರಿಲ್ 8 ಮತ್ತು 10ಕ್ಕೆ 1ರಿಂದ 9ನೇ ತರಗತಿ ಫಲಿತಾಂಶ

ಈಗಾಗಲೇ ನಡೆದಿರುವ 5, 8 ಮತ್ತು 9 ನೇ ತರಗತಿಯ ಎಸ್‌ಎ-2 ಮೌಲ್ಯಾಂಕನ ಸೇರಿ ಉಳಿದ 1 ರಿಂದ 9 ನೇ ತರಗತಿಗಳ ಫಲಿತಾಂಶವನ್ನು ನಿಗದಿಪಡಿಸಿದಂತೆ ಏಪ್ರಿಲ್ 8 ರಂದು ಪ್ರಾಥಮಿಕ ಶಾಲಾ ಹಂತದ ಫಲಿತಾಂಶ ಪ್ರಕಟವಾಗಲಿದೆ.

ಏಪ್ರಿಲ್ 10ರಂದು ಪ್ರೌಢಶಾಲಾ ಹಂತದ ಎರಡನೇ ಸಮುದಾಯ ದತ್ತ ಶಾಲೆ/ ಪೋಷಕರ ಸಭೆ ಕರೆದು ಫಲಿತಾಂಶ ಪ್ರಕಟಿಸಲಾಗುತ್ತದೆ.

ಏಪ್ರಿಲ್ 10ಕ್ಕೆ ಪ್ರಸಕ್ತ ಶೈಕ್ಷಣಿಕ ಸಾಲು 1 ರಿಂದ 9ನೇ ತರಗತಿವರೆಗೆ ಮುಕ್ತಾಯವಾಗಲಿದೆ. ಏಪ್ರಿಲ್ 11ರಿಂದ ಮೇ 28ರ ತನಕ ಬೇಸಿಗೆ ರಜೆ ಇರಲಿದೆ.

ಶಾಲಾ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು, ಹಾಗೂ ಎಸ್.ಡಿ.ಎಂ.ಸಿ/ ಖಾಸಗಿ ಶಾಲೆಗಳಲ್ಲಿ ಸಂಬಂಧಿಸಿದ ಆಡಳಿತ ಮಂಡಳಿಯವರು ಮತ್ತು ಮಕ್ಕಳೊಂದಿಗೆ ಉತ್ತಮ ಪೂರ್ವ ತಯಾರಿಯೊಂದಿಗೆ ಪ್ರಸ್ತುತ ಚಾಲ್ತಿ ಇರುವ ಲೋಕಸಭಾ ಚುನಾವಣಾ ಮಾರ್ಗಸೂಚಿ ಪ್ರಕಾರ ಏಪ್ರಿಲ್ 14ರಂದು ಡಾ. ಬಿ.ಆರ್. ಅಂಬೇಡ್ಕರ್ ಜಯಂತಿಯನ್ನು ಎಲ್ಲ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಆಚರಿಸಲು ಶಿಕ್ಷಣ ಇಲಾಖೆ ಸೂಚನೆ ನೀಡಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

Download Eedina App Android / iOS

X