ಅಮೆರಿಕಾ| ಮತ್ತೋರ್ವ ಭಾರತೀಯ ವಿದ್ಯಾರ್ಥಿ ಮೃತ್ಯು; ಈ ವರ್ಷದಲ್ಲಿ ಹತ್ತನೇ ಘಟನೆ

Date:

Advertisements

ಅಮೆರಿಕಾರದ ಓಹಿಯೋ ರಾಜ್ಯದಲ್ಲಿ ಭಾರತೀಯ ವಿದ್ಯಾರ್ಥಿ ಮೃತರಾಗಿದ್ದು, ಸಾವಿನ ಕಾರಣವನ್ನು ಪತ್ತೆಹಚ್ಚಲು ತನಿಖೆ ನಡೆಯುತ್ತಿದೆ ಎಂದು ನ್ಯೂಯಾರ್ಕ್‌ನಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಶುಕ್ರವಾರ ತಿಳಿಸಿದೆ.

ಉಮಾ ಸತ್ಯ ಸಾಯಿ ಗದ್ದೆ ಎಂಬ ವಿದ್ಯಾರ್ಥಿ ಮೃತರಾಗಿದ್ದು, ಅವರು ಕ್ಲೀವ್‌ಲ್ಯಾಂಡ್‌ನಲ್ಲಿ ತನ್ನ ಶಿಕ್ಷಣವನ್ನು ಪಡೆಯುತ್ತಿದ್ದರು. ಭಾರತೀಯ ವಿದ್ಯಾರ್ಥಿ ಸಾವಿಗೆ ಭಾರತೀಯ ರಾಯಭಾರಿ ಕಚೇರಿ ತೀವ್ರ ದುಃಖವನ್ನು ವ್ಯಕ್ತಪಡಿಸಿದ್ದು ಕುಟುಂಬಕ್ಕೆ ಸಂತಾಪವನ್ನು ವ್ಯಕ್ತಪಡಿಸಿದೆ.

ಇದನ್ನು ಓದಿದ್ದೀರಾ?   ತೈವಾನ್‌ | ಭೂಕಂಪಕ್ಕೆ 9 ಬಲಿ, ಇಬ್ಬರು ಭಾರತೀಯರು ನಾಪತ್ತೆ

Advertisements

ಉಮಾ ಸತ್ಯರ ಪಾರ್ಥಿವ ಶರೀರವನ್ನು ಭಾರತಕ್ಕೆ ಸಾಗಿಸಲು ಅನುಕೂಲವಾಗುವಂತೆ ಸಾಧ್ಯವಿರುವ ಎಲ್ಲ ಸಹಾಯವನ್ನು ಕುಟುಂಬಕ್ಕೆ ಒದಗಿಸಲಾಗುತ್ತಿದೆ ಎಂದು ಭಾರತೀಯ ರಾಯಭಾರಿ ಕಚೇರಿ ಭರವಸೆ ನೀಡಿದೆ.

ಈ ಬಗ್ಗೆ ನ್ಯೂಯಾರ್ಕ್‌ನಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಎಕ್ಸ್‌ ಪೋಸ್ಟ್ ಮಾಡಿದ್ದು, “ಓಹಿಯೋದ ಕ್ಲೀವ್‌ಲ್ಯಾಂಡ್‌ನಲ್ಲಿರುವ ಭಾರತೀಯ ವಿದ್ಯಾರ್ಥಿ ಉಮಾ ಸತ್ಯ ಸಾಯಿ ಗದ್ದೆ ಅವರ ದುರದೃಷ್ಟಕರ ನಿಧನದಿಂದ ತೀವ್ರ ದುಃಖವಾಗಿದೆ. ಪಪಲೀಸ್ ತನಿಖೆ ನಡೆಯುತ್ತಿದೆ. ಅವರ ಪಾರ್ಥೀವ ಶರೀರವನ್ನು ಆದಷ್ಟು ಬೇಗ ಭಾರತಕ್ಕೆ ತಲುಪಿಸಲಾಗುವುದು” ಎಂದು ಹೇಳಿದೆ.

ಯುನೈಟೆಡ್ ಸ್ಟೇಟ್ಸ್‌ನಲ್ಲಿ ಈ ವರ್ಷ ಹತ್ತನೇ ಘಟನೆ

ಯುನೈಟೆಡ್ ಸ್ಟೇಟ್ಸ್‌ನಲ್ಲಿ ಭಾರತೀಯ ವಿದ್ಯಾರ್ಥಿ ಸಾವನ್ನಪ್ಪಿದ ಹತ್ತನೇ ಘಟನೆ ಇದಾಗಿದೆ ಎಂದು ವರದಿಯಾಗಿದೆ. ಮಾರ್ಚ್‌ನಲ್ಲಿ, ಮತ್ತೊಬ್ಬ ಭಾರತೀಯ ವಿದ್ಯಾರ್ಥಿ, ಮೊಹಮ್ಮದ್ ಅಬ್ದುಲ್ ಅರಾಫತ್ ನಿಗೂಢವಾಗಿ ಕ್ಲೀವ್‌ಲ್ಯಾಂಡ್ ಪ್ರದೇಶದಿಂದ ನಾಪತ್ತೆಯಾಗಿದ್ದರು. ಅದಾದ ಬಳಿಕ ವಿದ್ಯಾರ್ಥಿಯನ್ನು ಅಪಹರಿಸಿದವರು ಕುಟುಂಬದ ಮುಂದೆ ಹಣದ ಬೇಡಿಕೆ ಇಟ್ಟಿದ್ದರು.

ಇದನ್ನು ಓದಿದ್ದೀರಾ?   ಅಮೆರಿಕದಲ್ಲಿ ಮೂವರು ಭಾರತೀಯ ಸಂಜಾತ ವಿದ್ಯಾರ್ಥಿಗಳ ನಿಗೂಢ ಸಾವು

ಈ ವರ್ಷದ ಆರಂಭದಲ್ಲಿ, ಹೈದರಾಬಾದ್‌ನ ವಿದ್ಯಾರ್ಥಿ ಸೈಯದ್ ಮಜಾಹಿರ್ ಅಲಿ ಮೇಲೆ ಚಿಕಾಗೋದಲ್ಲಿ ಅಮಾನುಷವಾಗಿ ಹಲ್ಲೆ ನಡೆಸಲಾಗಿದ್ದು ವಿದ್ಯಾರ್ಥಿ ತೀವ್ರವಾಗಿ ಗಾಯಗೊಂಡಿದ್ದರು. ಚಿಕಾಗೋದಲ್ಲಿರುವ ಭಾರತೀಯ ರಾಯಭಾರಿ ಕಚೇರಿ ತಕ್ಷಣವೇ ಮಧ್ಯಪ್ರವೇಶಿಸಿ ಅಲಿ ಮತ್ತು ಅವರ ಕುಟುಂಬಕ್ಕೆ ಬೆಂಬಲ ನೀಡಿದೆ.

ಇಂಡಿಯಾನಾದ ಪರ್ಡ್ಯೂ ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ನೀಲ್ ಆಚಾರ್ಯ ಸಾವು ಮತ್ತು ಜಾರ್ಜಿಯಾದಲ್ಲಿ ವಿವೇಕ್ ಸೈನಿಯ ಕ್ರೂರ ಹತ್ಯೆಯು ಈ ವರ್ಷದಲ್ಲೇ ನಡೆದಿರುವ ಘಟನೆಗಳಾಗಿದೆ. 2024 ರ ಆರಂಭದಿಂದ ಈವರೆಗಿನ ಮೂರು ತಿಂಗಳ ಅವಧಿಯಲ್ಲಿ ಭಾರತೀಯ ಅಥವಾ ಭಾರತೀಯ ಮೂಲದ ವಿದ್ಯಾರ್ಥಿ ಸಾವನ್ನಪ್ಪಿದ ಹತ್ತನೇ ಘಟನೆ ಇದಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಿಂಸಾಚಾರ ಪ್ರಕರಣ: ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್‌ಗೆ ಜಾಮೀನು

ಪಾಕಿಸ್ತಾನದ ಮಾಜಿ ಪ್ರಧಾನಮಂತ್ರಿ ಇಮ್ರಾನ್ ಖಾನ್‌ಗೆ ಮೇ 9, 2023ರ ಹಿಂಸಾಚಾರ...

ಅಮೆರಿಕದ ‘ಅಕ್ಕರೆಯ ನ್ಯಾಯಾಧೀಶ’ ಫ್ರಾಂಕ್ ಕ್ಯಾಪ್ರಿಯೊ ನಿಧನ

ರೋಡ್ ಐಲ್ಯಾಂಡ್‌ನ ನಿವೃತ್ತ ಮುನಿಸಿಪಲ್ ನ್ಯಾಯಾಧೀಶರಾಗಿದ್ದ, ಸಾಮಾಜಿಕ ಜಾಲತಾಣಗಳಲ್ಲಿ 'ಅಕ್ಕರೆಯ ನ್ಯಾಯಾಧೀಶ'...

ಅಫ್ಘಾನಿಸ್ತಾನ | ಭೀಕರ ಅಪಘಾತ: ಹೊತ್ತಿ ಉರಿದ ಬಸ್, 17 ಮಕ್ಕಳು ಸೇರಿ 71 ಮಂದಿ ದಾರುಣ ಸಾವು

ಅಫ್ಘಾನಿಸ್ತಾನದ ಪಶ್ಚಿಮ ಹೆರಾತ್ ಪ್ರಾಂತ್ಯದಲ್ಲಿ ನಡೆದ ಭೀಕರ ಬಸ್ ಅಪಘಾತದಲ್ಲಿ ಬಸ್...

ಗಾಝಾದಲ್ಲಿ ಕದನ ವಿರಾಮ ಪ್ರಸ್ತಾಪಕ್ಕೆ ಒಪ್ಪಿಕೊಂಡ ಹಮಾಸ್: ವರದಿ

ಗಾಝಾದ ಮೇಲೆ ಇಸ್ರೇಲ್ ದಾಳಿ ಕೊನೆಗೊಳಿಸುವ ನಿಟ್ಟಿನಲ್ಲಿ ಕದನ ವಿರಾಮ ಪ್ರಸ್ತಾಪದ...

Download Eedina App Android / iOS

X