ಲೋಕಸಭಾ ಚುನಾವಣೆ | ವಿಶೇಷ ಮತಗಟ್ಟೆಗಳಲ್ಲಿ ವಿಶಿಷ್ಟ ಚಿತ್ರ ಬಿಡಿಸಿ: ಸಿಇಒ

Date:

Advertisements

ಲೋಕಸಭಾ ಸಾರ್ವತ್ರಿಕ ಚುನಾವಣೆಯ ನಿಮಿತ್ಯ ವಿಶೇಷ ಮತಗಟ್ಟೆಗಳಲ್ಲಿ ವಿಶಿಷ್ಟ ಚಿತ್ರ ಬಿಡಿಸಿ ಇದೇ ಏಪ್ರಿಲ್ ಮಾಸದ ಅಂತ್ಯದೊಳಗಾಗಿ ಪೂರ್ಣಗೊಳಿಸಬೇಕು ಎಂದು ಗದಗ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ನೋಡಲ್ ಅಧಿಕಾರಿ ಭರತ್ ಎಸ್ ತಿಳಿಸಿದರು.

ಗದಗ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾ ಸ್ವೀಪ್ ಸಮಿತಿಯಿಂದ ಮಾದರಿ ಮತಗಟ್ಟೆಗಳ ನಿರ್ಮಾಣಕ್ಕಾಗಿ ಚಿತ್ರಕಲಾ ಶಿಕ್ಷಕರೊಂದಿಗೆ ಸಭೆ ಜರುಗಿಸಿ ಮಾತನಾಡಿದರು.

ಗದಗ ಸ್ವೀಪ್‌ 1

“ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ಅಂಗವಾಗಿ “ಚುನಾವಣಾ ಪರ್ವ ದೇಶದ ಗರ್ವ” ಎಂಬ ಘೋಷವಾಕ್ಯದಂತೆ ಜಿಲ್ಲೆಯಲ್ಲಿ ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರತಿಯೊಂದು ವಿಧಾನಸಭಾ ಕ್ಷೇತ್ರದಲ್ಲಿ ಸಖಿ-5, ಯುವ-1, ಪಿಡಬ್ಲ್ಯೂಡಿ-1, ಧ್ಯೇಯ ಆಧಾರಿತ-1, ಥೀಮ್-1ರಂತೆ ಒಂದು ವಿಧಾನಸಭಾ ಕ್ಷೇತ್ರದಲ್ಲಿ 9 ಮತಗಟ್ಟೆಗಳಂತೆ ಜಿಲ್ಲೆಯಲ್ಲಿ ಒಟ್ಟಾರೆಯಾಗಿ 36 ವಿಶೇಷ ಮತಗಟ್ಟೆಗಳನ್ನು ನಿರ್ಮಿಸಲು ಉದ್ದೇಶಿಸಲಾಗಿದೆ. ಈ ಮತಗಟ್ಟೆಗಳಲ್ಲಿ ವಿಶಿಷ್ಟವಾಗಿ ಚಿತ್ರಗಳನ್ನು ಬಿಡಿಸಲು ಮತ್ತು ಇದೇ ಏಪ್ರಿಲ್ ಮಾಸಾಂತ್ಯದೊಳಗಾಗಿ ಪೂರ್ಣಗೊಳಿಸಬೇಕು” ಎಂದು ಸಲಹೆ ಮಾಡಿದರು.

Advertisements

ಈ ಸುದ್ದಿ ಓದಿದ್ದೀರಾ? ರೂಪ ಮತ್ತೀಕೆರೆ ಅವರಿಗೆ ನಂಜನಗೂಡು ತಿರುಮಲಾಂಭ ಪ್ರಶಸ್ತಿ

“ವಿಶಿಷ್ಟ ಮತಗಟ್ಟೆಗಳಲ್ಲಿ ಬಿಡಿಸುವ ಚಿತ್ರಗಳಲ್ಲಿ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ನೋಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ಚಿತ್ರಗಳನ್ನು ಬಿಡಿಸುವ ಪೂರ್ವದಲ್ಲಿ ಸಂಬಂಧಿಸಿದ ವಿಧಾನಸಭಾ ಕ್ಷೇತ್ರಗಳ ಸಹಾಯಕ ಚುನಾವಣಾಧಿಕಾರಿಗಳ ಗಮನಕ್ಕೆ ತಂದು ಅವರಿಂದ ಅನುಮತಿ ಪಡೆದ ಚಿತ್ರಗಳನ್ನು ಮಾತ್ರ ಮತಗಟ್ಟೆಗಳಲ್ಲಿ ಬಿಡಿಸಲು ಕ್ರಮವಹಿಸಬೇಕು” ಎಂದು ನಿರ್ದೇಶನ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಸಿ ಬಿ ದೇವರಮನಿ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಂ ಎ ರಡ್ಡೇರ, ವಿವಿಧ ಶಾಲೆಗಳ ಚಿತ್ರಕಲಾ ಶಿಕ್ಷಕರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | 15 ವರ್ಷದ ಬಳಿಕ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಆರ್. ಮಾರುತಿ ವರ್ಗಾವಣೆ!

ಶಿವಮೊಗ್ಗ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಕಳೆದ 15...

ಸಿಂಧನೂರು | ಮಹಿಳಾ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆ – ವಿದ್ಯಾರ್ಥಿನಿಯರ ಪ್ರತಿಭಟನೆ

ಸಿಂಧನೂರಿನ ಕುಷ್ಟಗಿ ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಪದವಿ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆಯಿಂದಾಗಿ...

ಶಿವಮೊಗ್ಗ | ಸೆ. 6ಕ್ಕೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ

ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ಉತ್ಸವದಲ್ಲಿ ಈ ಬಾರಿ ಏನೆಲ್ಲಾ...

ಬೆಳಗಾವಿ : ಗಾಂಜಾ ಮಾರಾಟ ಮಾಫಿಯಾ 9 ಮಂದಿ ಅರೆಸ್ಟ್ : ರೂ 30 ಲಕ್ಷ ಮೌಲ್ಯದ ಗಾಂಜಾ ವಶ

ಬೆಳಗಾವಿ ನಗರದಲ್ಲಿ ಗಾಂಜಾ ಮಾರಾಟ ಜಾಲ ಬಯಲಾಗಿದ್ದು, ಬೆಳಗಾವಿ ಪೊಲೀಸರು ದೊಡ್ಡ...

Download Eedina App Android / iOS

X