ದೇಶದಲ್ಲಿ ಅನ್ಯಾಯದ ಕತ್ತಲೆ ಆವರಿಸಿದೆ, ನ್ಯಾಯದ ಬೆಳಕು ತರಬೇಕು: ಸೋನಿಯಾ ಗಾಂಧಿ

Date:

Advertisements

ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಘನತೆ ಮತ್ತು ಪ್ರಜಾಪ್ರಭುತ್ವವನ್ನು ನಾಶ ಮಾಡುತ್ತಿದ್ದಾರೆ. ದೇಶದ ಪ್ರಜಾಪ್ರಭುತ್ವ ಅಪಾಯದಲ್ಲಿದೆ. ಸಂವಿಧಾನ ಬದಲಾವಣೆಗೆ ಸಂಚು ರೂಪಿಸಲಾಗುತ್ತಿದೆ ಎಂದು ಬಿಜೆಪಿ ವಿರುದ್ಧ ಸೋನಿಯಾ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

ರಾಜಸ್ಥಾನದ ಜೈಪುರದಲ್ಲಿ ನಡೆದ ಚನಾವಣಾ ಪ್ರಚಾರದ ವೇಳೆ ಅವರು ಮಾತನಾಡಿದರು. “ವಿರೋಧ ಪಕ್ಷಗಳ ನಾಯಕರನ್ನು ಬಿಜೆಪಿಗೆ ಸೇರುವಂತೆ ಒತ್ತಾಯಿಸಲು ವಿವಿಧ ತಂತ್ರಗಳನ್ನು ಬಳಸಲಾಗುತ್ತಿದೆ” ಎಂದು ಆರೋಪಿಸಿದರು.

“ಕಳೆದ 10 ವರ್ಷಗಳಿಂದ ದೇಶವು ನಿರುದ್ಯೋಗ, ಹಣದುಬ್ಬರ, ಆರ್ಥಿಕ ಬಿಕ್ಕಟ್ಟು ಮತ್ತು ಅಸಮಾನತೆ ಹೆಚ್ಚಾಗುತ್ತಿದೆ. ಇದೆಲ್ಲವನ್ನೂ ಸರ್ಕಾರವೇ ಉತ್ತೇಜಿಸುತ್ತಿದೆ. ಮೋದಿ ಸರ್ಕಾರ ಏನು ಮಾಡಿದೆ ಎಂಬುದು ನಮ್ಮೆಲ್ಲರ ಮುಂದಿದೆ. ಎಲ್ಲೆಡೆ ಅನ್ಯಾಯದ ಕತ್ತಲೆ ಆವರಿಸಿದೆ. ನಾವೆಲ್ಲರೂ ಇದರ ವಿರುದ್ಧ ಹೋರಾಡಬೇಕು, ನ್ಯಾಯದ ಬೆಳಕನ್ನು ತರಬೇಕು” ಎಂದು ಅವರು ಹೇಳಿದರು.

Advertisements

“ತಮ್ಮನ್ನು ತಾವು ಶ್ರೇಷ್ಠ ಎಂದು ಪರಿಗಣಿಸಿರುವ ಮೋದಿ ಅವರು ದೇಶದ ಘನತೆ ಮತ್ತು ಪ್ರಜಾಪ್ರಭುತ್ವದ ಘನತೆಯನ್ನು ಹಾಳು ಮಾಡುತ್ತಿದ್ದಾರೆ. ಪ್ರಜಾಪ್ರಭುತ್ವ ಸಂಸ್ಥೆಗಳನ್ನು ನಾಶಪಡಿಸಲಾಗುತ್ತಿದೆ. ಬಿಜೆಪಿ ಸರ್ಕಾರವು ಸರ್ವಾಧಿಕಾರಿಯಾಗಿದ್ದು, ನಾವೆಲ್ಲರೂ ಇದಕ್ಕೆ ಉತ್ತರ ನೀಡುತ್ತೇವೆ” ಎಂದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೀರತ್ ಗಡಿಯಾರ ಗೋಪುರ ಹತ್ತಿ ವಿಡಿಯೋ ಮಾಡುವ ಸಾಹಸ ಮಾಡಿದ ‘ಸ್ಪೈಡರ್‌ಮ್ಯಾನ್’ ಬಂಧನ!

'ಸ್ಪೈಡರ್‌ಮ್ಯಾನ್' ವೇಷಭೂಷಣವನ್ನು ಧರಿಸಿ ಮೀರತ್‌ನ ಐತಿಹಾಸಿಕ ಗಡಿಯಾರ ಗೋಪುರವನ್ನು ಹತ್ತಿ ಅಪಾಯಕಾರಿ...

ಸರ್ಕಾರದಿಂದ ನಷ್ಟ ಸರಿದೂಗಿಸಲಾಗದು, ರೈತರೇ ಕಷ್ಟಕ್ಕೆ ಒಗ್ಗಿಕೊಳ್ಳಬೇಕು: ಬಿಜೆಪಿ ನಾಯಕನ ಹೇಳಿಕೆಗೆ ತೀವ್ರ ಆಕ್ರೋಶ

ಇತ್ತೀಚಿಗೆ ಆದ ಅತಿವೃಷ್ಟಿಯಿಂದ ರೈತರಿಗೆ ಆಗಿರುವ ನಷ್ಟಕ್ಕೆ ಸರ್ಕಾರ ಪರಿಹಾರ ನೀಡಲು...

ಏನಿದು ಅನಿಲ್ ಅಂಬಾನಿ ಬ್ಯಾಂಕ್ ವಂಚನೆ? ಕ್ರಮ ಕೈಗೊಳ್ಳುತ್ತಾರ ಮೋದಿ?

ತನ್ನನ್ನು ತಾನು ದಿವಾಳಿ ಎಂದು ಘೋಷಿಸಿಕೊಂಡಿರುವ ಭಾರತದ ಭಾರೀ ಶ್ರೀಮಂತ ಉದ್ಯಮಿ...

Download Eedina App Android / iOS

X