ಮಣಿಪುರ ಹಿಂಸಾಚಾರ| ಸ್ಥಳಾಂತರಗೊಂಡ 24,000 ಕ್ಕೂ ಹೆಚ್ಚು ನಾಗರಿಕರಿಗೆ ಪರಿಹಾರ ಶಿಬಿರದಲ್ಲೇ ಮತದಾನಕ್ಕೆ ಅವಕಾಶ

Date:

Advertisements

ಸುಮಾರು ಹನ್ನೊಂದು ತಿಂಗಳ ಮಣಿಪುರ ಹಿಂಸಾಚಾರದ ಸಂದರ್ಭದಲ್ಲಿ 50,000 ಕ್ಕೂ ಹೆಚ್ಚು ಸ್ಥಳಾಂತರಗೊಂಡಿದ್ದು, ಕೆಲವರು ಚುನಾವಣೆಯನ್ನೇ ಧಿಕ್ಕರಿಸುತ್ತಿದ್ದಾರೆ. ಈ ನಡುವೆ ಚುನಾವಣಾ ಆಯೋಗವು ಹಿಂಸಾಚಾರ ಪೀಡಿತ ರಾಜ್ಯದಲ್ಲಿಯೇ ಲೋಕಸಭೆ ಚುನಾವಣೆಯನ್ನು ನಡೆಸುವ ಸವಾಲಿನ ಕಾರ್ಯಕ್ಕೆ ಸಜ್ಜಾಗಿದೆ.

ಮುಖ್ಯ ಚುನಾವಣಾಧಿಕಾರಿ, ಪ್ರದೀಪ್ ಕುಮಾರ್ ಝಾ ಅವರು, “24,500 ಕ್ಕೂ ಹೆಚ್ಚು ಸ್ಥಳಾಂತರಗೊಂಡ ಜನರನ್ನು ಮುಂಬರುವ ಚುನಾವಣೆಯಲ್ಲಿ ಮತ ಚಲಾಯಿಸಲು ಅರ್ಹರು ಎಂದು ಗುರುತಿಸಲಾಗಿದೆ. ಅವರು ಪರಿಹಾರ ಶಿಬಿರಗಳಿಂದ ತಮ್ಮ ಹಕ್ಕು ಚಲಾಯಿಸಲು ಸಾಧ್ಯವಾಗುವಂತೆ ವಿಶೇಷ ವ್ಯವಸ್ಥೆಗಳನ್ನು ಮಾಡಲಾಗಿದೆ” ಎಂದು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ?   ಮಣಿಪುರ ಹಿಂಸಾಚಾರ | ಸ್ಥಳಾಂತರಗೊಂಡ ಮತದಾರರಿಗೆ ʼಚುನಾವಣೆʼಗಳು ಅರ್ಥಹೀನ

Advertisements

“ಲೋಕಸಭಾ ಚುನಾವಣೆಗಾಗಿ ರಾಜ್ಯದಲ್ಲಿ ಒಟ್ಟು 2,955 ಮತಗಟ್ಟೆಗಳನ್ನು ಸ್ಥಾಪಿಸಲಾಗುವುದು. ಅವುಗಳಲ್ಲಿ ಸುಮಾರು ಶೇಕಡ 50ರಷ್ಟು ಮತಗಟ್ಟೆಗಳನ್ನು ಸೂಕ್ಷ್ಮ, ದುರ್ಬಲ ಅಥವಾ ನಿರ್ಣಾಯಕ ಎಂದು ಗುರುತಿಸಲಾಗಿದೆ. ನಾವು ಆಂತರಿಕವಾಗಿ ಸ್ಥಳಾಂತರಗೊಂಡ ವ್ಯಕ್ತಿಗಳು ಮತದಾನ ಮಾಡಲು ಅನುಕೂಲವಾಗುವಂತೆ 94 ವಿಶೇಷ ಮತಗಟ್ಟೆಗಳನ್ನು ಸಹ ಸ್ಥಾಪಿಸುತ್ತಿದ್ದೇವೆ” ಎಂದು ಪ್ರದೀಪ್ ಕುಮಾರ್ ಝಾ ಪಿಟಿಐಗೆ ಮಾಹಿತಿ ನೀಡಿದರು.

ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿಯಮಗಳ ಪ್ರಕಾರ, ಕುಗ್ರಾಮಗಳು, ಗ್ರಾಮಗಳು ಮತ್ತು ಬೆದರಿಕೆ ಇರುವ ವಿಭಾಗಗಳ ಮ್ಯಾಪಿಂಗ್ ಅನ್ನು ಚುನಾವಣೆಗೆ ಮುನ್ನ ನಡೆಸಲಾಗುತ್ತದೆ.

ಇದನ್ನು ಓದಿದ್ದೀರಾ?  ಲೋಕಸಭೆ ಚುನಾವಣೆಗೂ ಮುನ್ನ ಮಣಿಪುರಕ್ಕೆ ಅಮಿತ್ ಶಾ ಭೇಟಿ ಸಾಧ್ಯತೆ

“ಈ ಮತದಾರರನ್ನು ಸಹಾನುಭೂತಿಯಿಂದ ನಡೆಸಿಕೊಳ್ಳಲು ವಿಶೇಷ ತಂಡಗಳನ್ನು ರಚಿಸಲಾಗಿದೆ. ನಾವು ಮತದಾರರ ಜಾಗೃತಿ ಚಟುವಟಿಕೆಗಳನ್ನು ಸಹ ಪ್ರಾರಂಭಿಸಿದ್ದೇವೆ. ತಮ್ಮ ಮನೆಯಲ್ಲೇ ಇರುವ ಸೌಕರ್ಯವನ್ನು ಕಳೆದುಕೊಂಡಿರುವ ನಿರಾಶ್ರಿತ ಜನರ ಹತಾಶೆಯ ಭಾವನೆಯನ್ನು ನಾವು ಗಮನದಲ್ಲಿಟ್ಟುಕೊಂಡು ತಯಾರಿಯನ್ನು ನಡೆಸುತ್ತೇವೆ” ಎಂದು ಪ್ರದೀಪ್ ಕುಮಾರ್ ಝಾ ಹೇಳಿದರು.

ಪರಿಶಿಷ್ಟ ಪಂಗಡ (ಎಸ್‌ಟಿ) ಸ್ಥಾನಮಾನಕ್ಕಾಗಿ ಮೈತಿ ಸಮುದಾಯದ ಬೇಡಿಕೆಯನ್ನು ವಿರೋಧಿಸಿ ‘ಬುಡಕಟ್ಟು ಐಕ್ಯತಾ ಮೆರವಣಿಗೆ’ ಆಯೋಜಿಸಿದ ಬಳಿಕ ಕಳೆದ ವರ್ಷ ಮೇ 3 ರಂದು ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ಆರಂಭವಾಗಿದ್ದು, ರಾಜ್ಯದಲ್ಲಿ ಕನಿಷ್ಠ 219 ಜನರು ಸಾವನ್ನಪ್ಪಿದ್ದಾರೆ. 50,000 ಕ್ಕೂ ಜನರು ಸ್ಥಳಾಂತರಗೊಂಡಿದ್ದಾರೆ. ಜನರು ಪ್ರಸ್ತುತ ಐದು ಕಣಿವೆ ಜಿಲ್ಲೆಗಳು ಮತ್ತು ಮೂರು ಬೆಟ್ಟದ ಜಿಲ್ಲೆಗಳಲ್ಲಿ ಪರಿಹಾರ ಕೇಂದ್ರಗಳಲ್ಲಿ ತಂಗಿದ್ದಾರೆ. ಏಪ್ರಿಲ್ 19 ಮತ್ತು 26 ರಂದು ಎರಡು ಹಂತಗಳಲ್ಲಿ ಮಣಿಪುರ ಲೋಕಸಭಾ ಚುನಾವಣೆ ನಡೆಯಲಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X