ಶಿರಹಟ್ಟಿ ಬಿಜೆಪಿ ಅಭ್ಯರ್ಥಿಗೆ ಬಿಗ್‌ ರಿಲೀಫ್; ಷರತ್ತುಬದ್ಧ ರಾಜೀನಾಮೆ ಅಂಗೀಕರಿಸಿದ ಆರೋಗ್ಯ ಇಲಾಖೆ

Date:

Advertisements
  • ರಾಜೀನಾಮೆ ಸಲ್ಲಿಸಿ 2 ವರ್ಷ ಕಳೆದರೂ ಆಗದ ಅಂಗೀಕಾರ
  • ವೈದ್ಯನಾಗಿ ಸೇವೆ ಸಲ್ಲಿಸುತ್ತಿದ್ದ ಡಾ. ಚಂದ್ರು ಲಮಾಣಿ

ಶಿರಹಟ್ಟಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಗೆ ಬಿಗ್‌ ರಿಲೀಫ್‌ ಸಿಕ್ಕಿದ್ದು, ಆರೋಗ್ಯ ಇಲಾಖೆಯು ಷರತ್ತುಬದ್ಧವಾಗಿ ರಾಜೀನಾಮೆ ಅಂಗೀಕರಿಸಿದೆ. ನಾಮಪತ್ರ ಸಲ್ಲಿಸಲು ಇಂದೇ ಕೊನೆ ದಿನವಾಗಿರುವುದರಿಂದ ಇಂದು ಸಂಜೆಯ ಒಳಗೆ ನಾಮಪತ್ರ ಸಲ್ಲಿಸಲಿದ್ದಾರೆ.

ಸರ್ಕಾರಿ ಸಿಬ್ಬಂದಿಗಳು ಚುನಾವಣೆಗೆ ಸ್ಪರ್ಧಿಸಬೇಕೆಂದು ತೀರ್ಮಾನ ಮಾಡಿದರೆ, ತಮ್ಮ ವೃತ್ತಿಗೆ ರಾಜೀನಾಮೆ ನೀಡಬೇಕು ಎಂಬ ನಿಯಮ ಚುನಾವಣಾ ಆಯೋಗದ ಮಾನದಂಡದಲ್ಲಿದೆ.

ಗದಗ ಜಿಲ್ಲೆ ಶಿರಹಟ್ಟಿ ಮೀಸಲು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ತೀರ್ಮಾನಿಸಿದ್ದ ಡಾ. ಚಂದ್ರು‌ ಲಮಾಣಿ ಸರ್ಕಾರಿ ವೈದ್ಯ ಹುದ್ದೆಗೆ 2021 ಆ.31 ರಂದು ರಾಜೀನಾಮೆ ನೀಡಿದ್ದರು.

Advertisements

ಡಾ. ಚಂದ್ರು ರಾಜೀನಾಮೆ ಸಲ್ಲಿಸಿ 2 ವರ್ಷವಾದರೂ ಕೂಡ ಆರೋಗ್ಯ ಇಲಾಖೆ ರಾಜೀನಾಮೆ ಅಂಗೀಕರಿಸಿರಲಿಲ್ಲ. ಆದರೂ ಬಿಜೆಪಿ ಟಿಕೆಟ್‌ ಪಡೆದು ಚುನಾವಣೆಗೆ ಸ್ಪರ್ಧಿಸಲು ಸಿದ್ದತೆ ನಡೆಸಿದ್ದರು. ಇದಕ್ಕೆ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್ ಆಕ್ಷೇಪ ವ್ಯಕ್ತಪಡಿಸಿದ್ದರು.

ಈ ಸುದ್ದಿ ಓದಿದ್ದೀರಾ? : ಡಿಕೆಶಿ ವಿರುದ್ಧ ಮೊಯಿದ್ದೀನ್ ಬಾವಾ ವಾಗ್ದಾಳಿ : ಕಾಂಗ್ರೆಸ್‌ ತೊರೆದು ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕೆ

“ಡಾ. ಚಂದ್ರು ಲಮಾಣಿ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲಾಗಿದ್ದು, ಈ ಆರೋಪದಿಂದ ತಪ್ಪಿಸಿಕೊಳ್ಳಲು ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಅಂಗೀಕಾರವಾಗದಿದ್ದರೂ ಚುನಾವಣೆಗೆ ಸ್ಪರ್ಧಿಸಲು ಸಿದ್ದತೆ ನಡೆಸುತ್ತಿದ್ದಾರೆ” ಎಂದು ಆಯುಕ್ತರಿಗೆ ಜಿಲ್ಲಾಧಿಕಾರಿ ಪತ್ರ ಬರೆದಿದ್ದರು.

ಜಿಲ್ಲಾಧಿಕಾರಿಗಳ ಪತ್ರಕ್ಕೆ ಸ್ಪಂದಿಸಿದ ಆರೋಗ್ಯ ಇಲಾಖೆಯು ಡಾ. ಚಂದ್ರು ಅವರ ರಾಜೀನಾಮೆ ಅಂಗೀಕರಿಸಿದ್ದು, ಕೆಲವು ಷರತ್ತುಗಳನ್ನು ವಿಧಿಸಿದೆ.

ಆರೋಗ್ಯ ಇಲಾಖೆ ನೀಡಿರುವ ಷರತ್ತುಗಳು

  • ಲೋಕಾಯುಕ್ತ ಅಧಿಕಾರಿಗಳು ನಡೆಸಿರುವ ವಿಚಾರಣೆ ಹೊರಬಂದ ಮೇಲೆ ಸರ್ಕಾರವು ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧವಾಗಿರಬೇಕು.
  • ವೈದ್ಯನಾಗಿ ಸೇವೆ ಸಲ್ಲಿಸುತ್ತಿರುವಾಗ ಕರ್ತವ್ಯಲೋಪ ಎಸಗಿರುವುದು ಕಂಡುಬಂದಿದ್ದರೆ, ಮುಂದೆ ಬರುವ ಕಾನೂನು ಕ್ರಮಕ್ಕೆ ಬದ್ಧರಾಗಿರಬೇಕು.
  • ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದಲ್ಲಿ ಅದನ್ನ ಮುಂದುವರೆಸಲು ಬದ್ಧಗೊಳಿಸಿರುವುದು.
  • ಸರ್ಕಾರಕ್ಕೆ ಬರಬೇಕಾದ ಬೇಬಾಕಿಗಳೇನಾದರೂ ಇದ್ದಲ್ಲಿ ಕಾನೂನು ರೀತಿ ವಸೂಲಿ ಮಾಡುವ ಕ್ರಮಕ್ಕೆ ಬದ್ಧರಾಗಿರಬೇಕು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಮುಶಿಗೇರಿ ವಸತಿ ನಿಲಯಕ್ಕೆ ಮೂಲ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಗೋಳು ಕೇಳೋರ್ಯಾರು?

ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ವಸತಿ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

Download Eedina App Android / iOS

X