ಧಾರವಾಡ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ವಿನೋದ್ ಅಸೂಟಿ ಅವರ ಪರವಾಗಿ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಹಲವೆಡೆ ಪ್ರಚಾರ ಸಭೆಗಳನ್ನು ನಡೆಸಿದರು.
ಸಮೃದ್ಧಿ ಫೌಂಡೇಶನ್ ಸದಸ್ಯೆಯರ ಭೇಟಿ
ಧಾರವಾಡದ ಸಮೃದ್ಧಿ ಫೌಂಡೇಶನ್ ಮಹಿಳಾ ಸಂಘದ ಸದಸ್ಯೆಯರನ್ನು ಭೇಟಿ ಮಾಡಿದ ಸಚಿವ ಸಂತೋಷ್ ಲಾಡ್, ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ವಿನೋದ್ ಅಸೂಟಿ ಅವರ ಪರವಾಗಿ ಬೆಂಬಲ ನೀಡಬೇಕು ಎಂದು ಮನವಿ ಮಾಡಿದರು.
ವಾಲ್ಮೀಕಿ ಸಮುದಾಯದ ಮುಖಂಡರ ಸಭೆ
ಅಸೂಟಿ ಅವರ ಪರ ಚುನಾವಣಾ ಪ್ರಚಾರದ ಅಂಗವಾಗಿ ವಾಲ್ಮೀಕಿ ಸಮುದಾಯದ ಮುಖಂಡರ ಸಭೆ ನಡೆಸಿದ ಸಚಿವ ಲಾಡ್ ಅವರು ಮತಯಾಚನೆ ಮಾಡಿದರು.
ಕ್ಷೇತ್ರದ ಸಮಸ್ತ ವಾಲ್ಮೀಕಿ ಸಮುದಾಯ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಲಿದ್ದಾರೆ ಎಂಬ ವಿಶ್ವಾಸ ನಮ್ಮದು. ನಮ್ಮ ಕಾಂಗ್ರೆಸ್ ಸರ್ಕಾರ ವಾಲ್ಮೀಕಿ ಸಮುದಾಯದ ಪರವಾಗಿದೆ ಎಂದು ಹೇಳಿದರು.
ಈ ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅನಿಲ್ ಕುಮಾರ್ ಪಾಟೀಲ್, ವಾಲ್ಮೀಕಿ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.
