ಮಾಜಿ ಕೇಂದ್ರ ಸಚಿವ ಬಿರೇಂದರ್ ಸಿಂಗ್ ಅವರು ಸೋಮವಾರ ಬಿಜೆಪಿ ತೊರೆದಿದ್ದು ನಾಳೆ (ಎಪ್ರಿಲ್ 9) ಕಾಂಗ್ರೆಸ್‌ಗೆ ಸೇರುವುದಾಗಿ ಘೋಷಿಸಿದ್ದಾರೆ. ಬಿರೇಂದರ್ ಸಿಂಗ್ ಅವರ ಪುತ್ರ ಸುಮಾರು ಒಂದು ತಿಂಗಳ ಹಿಂದೆ ಕಾಂಗ್ರೆಸ್ ಸೇರಿದ್ದಾರೆ.
ಇನ್ನು ಬಿರೇಂದರ್ ಸಿಂಗ್ ಅವರ ಪತ್ನಿ ಹಾಗೂ ಹರಿಯಾಣದ ಬಿಜೆಪಿ ಮಾಜಿ ಶಾಸಕ ಪ್ರೇಮ್ ಲತಾ ಕೂಡ ಬಿಜೆಪಿ ತೊರೆದಿದ್ದಾರೆ.
ಈ ಬಗ್ಗೆ ದೆಹಲಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿರೇಂದರ್ ಸಿಂಗ್, “ನಾನು ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ ಮತ್ತು ನನ್ನ ರಾಜೀನಾಮೆಯನ್ನು ಪಕ್ಷದ ಮುಖ್ಯಸ್ಥ ಜೆಪಿ ನಡ್ಡಾ ಅವರಿಗೆ ಕಳುಹಿಸಿದ್ದೇನೆ” ಎಂದು ಹೇಳಿದ್ದಾರೆ.
ಇದನ್ನು ಓದಿದ್ದೀರಾ? ಜಾರ್ಖಂಡ್ ಬಿಜೆಪಿ ಶಾಸಕ ಜೈ ಪ್ರಕಾಶ್ ಕಾಂಗ್ರೆಸ್ ಸೇರ್ಪಡೆ
ಹಾಗೆಯೇ, ” 2014-2019 ರ ಅವಧಿಯಲ್ಲಿ ಶಾಸಕಿಯಾಗಿದ್ದ ನನ್ನ ಪತ್ನಿ ಪ್ರೇಮಲತಾ ಕೂಡ ರಾಜೀನಾಮೆ ನೀಡಿದ್ದಾರೆ. ನಾಳೆ ನಾವಿಬ್ಬರೂ ಕಾಂಗ್ರೆಸ್ ಸೇರುತ್ತೇವೆ” ಎಂದು ಸ್ಪಷ್ಟಪಡಿಸಿದ್ದಾರೆ.
ಬಿರೇಂದರ್ ಸಿಂಗ್ ಅವರು ಸುಮಾರು 10 ವರ್ಷಗಳ ಹಿಂದೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು. ಸುಮಾರು ನಾಲ್ಕು ದಶಕಗಳ ಸುದೀರ್ಘ ಅವಧಿಗಳ ಕಾಲ ಕಾಂಗ್ರೆಸ್‌ನಲ್ಲಿದ್ದ ಅವರು 2014ರಲ್ಲಿ ಬಿಜೆಪಿ ಸೇರಿದ್ದು ಈಗ ಬಿಜೆಪಿ ತೊರೆದು ಮತ್ತೆ ಕಾಂಗ್ರೆಸ್‌ಗೆ ಸೇರಲಿದ್ದಾರೆ. ಮಾರ್ಚ್ 10 ರಂದು ಅವರ ಮಗ ಕಾಂಗ್ರೆಸ್ ಸೇರಿದ ನಂತರ, ಬಿರೇಂದರ್ ಸಿಂಗ್ ಕೂಡಾ ಕಾಂಗ್ರೆಸ್ ಸೇರಲಿದ್ದಾರೆ ಎಂಬ ಸುದ್ದಿಯಾಗಿತ್ತು.