ಶಿವಮೊಗ್ಗ | ನಮ್ಮದು ನಿಜವಾದ ಬಿಜೆಪಿ; ಬಿ.ವೈ. ರಾಘವೇಂದ್ರದ್ದು ಕಾಂಗ್ರೆಸ್ಸಿನ ಛಾಯೆ; ಮೇಲಿನಕೊಪ್ಪ ಮಹೇಶ್‌

Date:

Advertisements

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಕುಟುಂಬ ರಾಜಕಾರಣದಿಂದಾಗಿ ಬಿಜೆಪಿಯ ನಿಜವಾದ ಹಿಂದೂ ಕಾರ್ಯಕರ್ತರಿಗೆ ಅನ್ಯಾಯವಾಗಿದೆ ಎಂದು ಶಿವಮೊಗ್ಗ ಜಿಲ್ಲೆಯ ಬೆಜ್ಜವಳ್ಳಿ ಗ್ರಾ.ಪಂ.ಸದಸ್ಯ, ಜಿಲ್ಲಾ ಬಿಜೆಪಿ ಹಿಂದುಳಿದ ವರ್ಗಗಳ ಘಟಕದ ಸದಸ್ಯ ಮೇಲಿನಕೊಪ್ಪ ಮಹೇಶ್‌ ಹೇಳಿದರು.

ಶಿವಮೊಗ್ಗದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮದು ನಿಜವಾದ ಬಿಜೆಪಿ ಪಕ್ಷ. ಬಿ.ವೈ. ರಾಘವೇಂದ್ರ ಅವರದ್ದು ಕಾಂಗ್ರೆಸ್ಸಿನ ಛಾಯೆ ಇರುವವರು. ಹಾಗಾಗಿ ಹಿಂದುಳಿದ ವರ್ಗಕ್ಕೆ ಸೇರಿದ ತಾನು ಹಾಗೂ ಇತರರು ರಾಷ್ಟ್ರಭಕ್ತ ಪಕ್ಷದ ಪರವಾಗಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಸ್ಫರ್ಧಿಸಲಿರುವ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರನ್ನು ಬೆಂಬಲಿಸುತ್ತಿರುವುದಾಗಿ ಅವರು ಹೇಳಿದರು.

ಯಡಿಯೂರಪ್ಪನವರ ಕುಟುಂಬ ರಾಜಕಾರಣದಿಂದಾಗಿ ಬಿಜೆಪಿಯಲ್ಲಿ ಅನೇಕರಿಗೆ ಅನ್ಯಾಯವಾಗಿದೆ. ಅಂತಹವರಲ್ಲಿ ಈಶ್ವರಪ್ಪನವರು ಪ್ರಮುಖರು. ಈ ಹಿಂದೆ ಬಿಜೆಪಿ ವರಿಷ್ಠರು ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಸ್ಥಗಿತಗೊಳಿಸುವಂತೆ ಹೇಳಿದ್ದರು. ಅದನ್ನು ಈಶ್ವರಪ್ಪ ಪಾಲಿಸಿದ್ದರು. ಮುಂದೆ  ಶಿವಮೊಗ್ಗ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಬಾರದೆಂದು ಈಶ್ವರಪ್ಪನವರಿಗೆ ಹೇಳಿದಾಗ ಮರು ಮಾತಿಲ್ಲದೆ ಅವರು ಒಪ್ಪಿ, ಆ ಚುನಾವಣೆಯಲ್ಲಿ ಸ್ಪರ್ಧಿಸಿರಲಿಲ್ಲ ಎಂದು ತಿಳಿಸಿದರು.

Advertisements

“ಯಡಿಯೂರಪ್ಪನವರು ಹಾವೇರಿಯಲ್ಲಿ ತಮ್ಮ ಮಗನಿಗೆ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಮಾಡಿಕೊಡುವುದಾಗಿ ಈಶ್ವರಪ್ಪನವರಿಗೆ ಭರವಸೆ ನೀಡಿದ್ದರು. ಇದರಂತೆ ಹಾವೇರಿಯಲ್ಲಿ ಈಶ್ವರಪ್ಪನವರ ಪುತ್ರ ತಯಾರಿ ಕೂಡ ಮಾಡಿಕೊಂಡಿದ್ದರು. ಆದರೆ, ಕೊಟ್ಟ ಮಾತನ್ನು ಯಡಿಯೂರಪ್ಪ ನಡೆಸಿಕೊಡದೆ ಈಶ್ವರಪ್ಪನವರಿಗೆ ದ್ರೋಹ ಎಸಗಲಾಗಿದೆ. ಹೀಗಾಗಿ ನಾವೆಲ್ಲರೂ ಈ ಸಲ ಈಶ್ವರಪ್ಪನವರನ್ನು ಬೆಂಬಲಿಸುತ್ತೇವೆ” ಎಂದು ಮಹೇಶ್ ತಿಳಿಸಿದರು.

“ನಮಗೆ ಹತ್ತಿರದ ಪ್ರತಿಸ್ಪರ್ಧಿ ಕಾಂಗ್ರೆಸ್ಸೇ ಆಗಿದ್ದು. ಚುನಾವಣೆಯಲ್ಲಿ ಅಂತಿಮವಾಗಿ ಗೆಲ್ಲುವುದು ನಾವೇ. ತೀರ್ಥಹಳ್ಳಿ ಕ್ಷೇತ್ರದ ಶಾಸಕ ಆರಗ ಜ್ಞಾನೇಂದ್ರ ಅವರಿಗೂ ಈಶ್ವರಪ್ಪನವರು ನಿಕಟವರ್ತಿಗಳು. ಹೀಗಾಗಿ ಅವರ ಸಹಕಾರವನ್ನೂ ಕೇಳುತ್ತೇವೆ”  ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮದನ್ ಗರಕೋಡು, ಶಶಿ ಕುಂದರ್, ಸಚಿನ್ ಗೌಡ, ಪ್ರದೀಪ್ ಕೋದೂರು, ಅನೂಪ್, ರಾಘವೇಂದ್ರ ಮುಂತಾದವರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಒಳ ಮೀಸಲಾತಿ : ಅಲೆಮಾರಿಗಳಿಗೆ ನ್ಯಾಯ ಸಮ್ಮತ ಪಾಲು ನೀಡಲು ಒತ್ತಾಯ

ಒಳ ಮೀಸಲಾತಿ ಕಲ್ಪಿಸುವಲ್ಲಿ ಸೂಕ್ಷ್ಮ, ಅತಿಸೂಕ್ಷ್ಮ ಅಲೆಮಾರಿಯ 59 ಸಮುದಾಯಗಳಿಗೆ ಆಗಿರುವ...

ಗುಬ್ಬಿ | ರೈತನ ಕೃಷಿ ಚಟುವಟಿಕೆಗೆ ಜೇನು ಸಾಕಾಣಿಕೆ ವರದಾನ : ಪುಷ್ಪಲತಾ

ರೈತರು ತಮ್ಮ ಕೃಷಿ ಚಟುವಟಿಕೆಯಲ್ಲಿ ಪ್ರಮುಖ ಘಟವಾದ ಪರಾಗಸ್ಪರ್ಶ ಕ್ರಿಯೆಗೆ...

ಮಂಗಳೂರು | ಆ. 23: ಅಲ್ ವಫಾ ಚಾರಿಟೇಬಲ್ ಟ್ರಸ್ಟ್‌ನಿಂದ 15 ಜೋಡಿಗಳ ಸರಳ ಸಾಮೂಹಿಕ ವಿವಾಹ

ಮಂಗಳೂರು ಭಾಗದಲ್ಲಿ ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿರುವ ಅಲ್ ವಫಾ ಚಾರಿಟೆಬಲ್ ಟ್ರಸ್ಟ್...

ಗುಬ್ಬಿ | ಎಂ.ಎನ್.ಕೋಟೆ ಗ್ರಾಪಂ ಉಪಾಧ್ಯಕ್ಷರಾಗಿ ಸಿದ್ದಗಂಗಮ್ಮ ಅವಿರೋಧ ಆಯ್ಕೆ

ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿ ಎಂ.ಎನ್.ಕೋಟೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸ್ಥಾನಕ್ಕೆ...

Download Eedina App Android / iOS

X