ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಸೋಮವಾರ ನಡೆದ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 22ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ವಿರುದ್ಧ ಏಳು ವಿಕೆಟ್‌ಗಳ ಭರ್ಜರಿ ಗೆಲುವು ದಾಖಲಿಸಿತು.
ಈ ಗೆಲುವಿನೊಂದಿಗೆ ಚೆನ್ನೈ ತಂಡ ತಮ್ಮ ತವರಿನ ಪಂದ್ಯದಲ್ಲಿ ಕೆಕೆಆರ್ ತಂಡವನ್ನು ಮಣಿಸಿ ಗೆಲುವಿನ ಟ್ರ್ಯಾಕ್‌ಗೆ ಮರಳಿದರೆ, ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು ಪ್ರಸಕ್ತ ಋತುವಿನಲ್ಲಿ ಮೊದಲ ಸೋಲುಂಡಿದೆ.
138 ರನ್‌ಗಳ ಸಾಧಾರಣ ಗುರಿ ಪಡೆದ ಸಿಎಸ್‌ಕೆ ತಂಡವು ನಾಯಕ ರುತುರಾಜ್ ಗಾಯಕ್ವಾಡ್ ಅವರ ಅಮೋಘ ಅರ್ಧಶತಕದ ನೆರವಿನಿಂದ 17.4 ಓವರ್‌ಗಳಲ್ಲಿ ಕೇವಲ 3 ವಿಕೆಟ್ ಕಳೆದುಕೊಂಡು ಸುಲಭವಾಗಿ ಗೆಲುವಿನ ದಡ ಸೇರಿತು.
They are 🔙 to winning ways 👍
Chennai Super Kings 💛 remain unbeaten at home with a complete performance 👏👏
Scorecard ▶ https://t.co/5lVdJVscV0 #TATAIPL | #CSKvKKR | @ChennaiIPL pic.twitter.com/16nzv4vt8b
— IndianPremierLeague (@IPL) April 8, 2024
ಚೆನ್ನೈ ಸೂಪರ್ ಕಿಂಗ್ಸ್ ತಂಡದ ಬ್ಯಾಟಿಂಗ್ ಆರಂಭಿಸಿದ ನಾಯಕ ರುತುರಾಜ್ ಗಾಯಕ್ವಾಡ್ ಮತ್ತು ರಚಿನ್ ರವೀಂದ್ರ ಉತ್ತಮ ಆರಂಭ ನೀಡಿದರು. ಈ ಜೋಡಿ ಮೊದಲ ವಿಕೆಟ್‌ಗೆ 3.2 ಓವರ್‌ಗಳಲ್ಲಿ 27 ರನ್‌ಗಳ ಜೊತೆಯಾಟ ನೀಡಿತು. ಈ ವೇಳೆ ರಚಿನ್ ರವೀಂದ್ರ 8 ಎಸೆತಗಳಲ್ಲಿ 3 ಬೌಂಡರಿ ಸಹಿತ 15 ರನ್ ಗಳಿಸಿ ಔಟಾದರು.
ನಂತರ ಬಂದ ಡೆರಿಲ್ ಮಿಚೆಲ್ 19 ಎಸೆತಗಳಲ್ಲಿ 1 ಬೌಂಡರಿ ಹಾಗೂ 1 ಸಿಕ್ಸರ್ ಮೂಲಕ 25 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಯುವ ಬ್ಯಾಟರ್ ಶಿವಂ ದುಬೆ ಸ್ಫೋಟಕ ಬ್ಯಾಟಿಂಗ್ ಮಾಡಿ 18 ಎಸೆತಗಳಲ್ಲಿ 1 ಬೌಂಡರಿ ಹಾಗೂ 3 ಸಿಕ್ಸರ್‌ಗಳ ಸಮೇತ 28 ರನ್ ಗಳಿಸಿದರು.
CSK DEFEATED KKR AT THE CHEPAUK STADIUM…!!! ⭐ pic.twitter.com/Ihxk2MXbiw
— Mufaddal Vohra (@mufaddal_vohra) April 8, 2024
ನಾಯಕ ರುತುರಾಜ್ ಗಾಯಕ್ವಾಡ್ ಕೊನೆಯವರೆಗೂ ಕ್ರೀಸ್‌ನಲ್ಲಿದ್ದು ಸಿಎಸ್‌ಕೆ ತಂಡವನ್ನು ಗೆಲುವಿನ ದಡ ತಲುಪಿಸಿದರು. ಗಾಯಕ್ವಾಡ್ 58 ಎಸೆತಗಳಲ್ಲಿ 9 ಬೌಂಡರಿಗಳ ನೆರವಿನಿಂದ 67 ರನ್ ಬಾರಿಸಿ ಅಜೇಯರಾಗುಳಿದರು. ಕೊನೆಯಲ್ಲಿ ಬಂದ ಮಾಜಿ ನಾಯಕ ಎಂಎಸ್ ಧೋನಿ ಔಟಾಗದೆ 1 ರನ್ ಗಳಿಸಿದರು.
ಕೆಕೆಆರ್ ಪರ ಬೌಲಿಂಗ್‌ನಲ್ಲಿ ವೈಭವ್ ಅರೋರಾ 2 ವಿಕೆಟ್ ಪಡೆದರೆ, ಸುನಿಲ್ ನರೇನ್ 1 ವಿಕೆಟ್ ತಮ್ಮದಾಗಿಸಿಕೊಂಡರು.
ಇದಕ್ಕೂ ಮುನ್ನ ಬ್ಯಾಟಿಂಗ್ ನಡೆಸಿದ್ದ ಕೆಕೆಆರ್, ಉತ್ತಮ ರನ್ ಕಲೆ ಹಾಕುವಲ್ಲಿ ವಿಫಲವಾಯಿತು. ಇನ್ನಿಂಗ್ಸ್ ಆರಂಭಿಸಿದ ಫಿಲ್ ಸಾಲ್ಟ್ ಮತ್ತು ಸುನಿಲ್ ನರೇನ್ ಉತ್ತಮ ಆರಂಭ ನೀಡಲಿಲ್ಲ.
ಫಿಲ್ ಸಾಲ್ಟ್ ಮೊದಲ ಓವರ್ ಎಸೆದ ದೇಶಪಾಂಡೆಯ ಮೊದಲ ಎಸೆತದಲ್ಲೇ ಜಡೇಜಾಗೆ ಕ್ಯಾಚಿತ್ತು ವಿಕೆಟ್ ಒಪ್ಪಿಸಿದರು. ಸುನಿಲ್ ನರೇನ್ 20 ಎಸೆತಗಳಲ್ಲಿ 3 ಬೌಂಡರಿ ಹಾಗೂ 2 ಸಿಕ್ಸರ್‌ಗಳ ಸಮೇತ 27 ರನ್ ಗಳಿಸಿ ಔಟಾದರು.
ಬಳಿಕ ಬಂದ ರಘುವಂಶಿ 18 ಎಸೆತಗಳಲ್ಲಿ 3 ಬೌಂಡರಿ ಹಾಗೂ 1 ಸಿಕ್ಸರ್ ಮೂಲಕ 24 ರನ್ ಗಳಿಸಿದರೆ, ನಾಯಕ ಶ್ರೇಯಸ್ ಅಯ್ಯರ್ 32 ಎಸೆತಗಳಲ್ಲಿ 3 ಬೌಂಡರಿ ನೆರವಿನಿಂದ 34 ರನ್ ಗಳಿಸಿದರು.
ಉಳಿದಂತೆ ವೆಂಕಟೇಶ್ ಅಯ್ಯರ್ 3 ರನ್, ರಮಣದೀಪ್ ಸಿಂಗ್ 13 ರನ್, ರಿಂಕು ಸಿಂಗ್ 9 ರನ್, ಆಂಡ್ರೆ ರಸೆಲ್ 10 ರನ್, ಅನುಕೂಲ್ ರಾಯ್ 3 ರನ್ ಮಾತ್ರ ಗಳಿಸಿ ತಂಡದ ಮೊತ್ತವನ್ನು 130ರ ಗಡಿ ದಾಟಿಸಿದರು.
ಬೌಲಿಂಗ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ ರವೀಂದ್ರ ಜಡೇಜಾ 4 ಓವರ್‌ಗಳಲ್ಲಿ 18 ರನ್ ನೀಡಿ 3 ವಿಕೆಟ್ ಕಬಳಿಸಿದರೆ, ತುಷಾರ್ ದೇಶಪಾಂಡೆ 4 ಓವರ್‌ಗಳಲ್ಲಿ 33 ರನ್ ನೀಡಿ 3 ವಿಕೆಟ್ ಪಡೆದರು. ಮುಸ್ತಾಫಿಜುರ್ ರಹಮಾನ್ 4 ಓವರ್‌ಗಳಲ್ಲಿ 22 ರನ್ ನೀಡಿ 2 ವಿಕೆಟ್ ಕಬಳಿಸಿದರು. ಮಹೇಶ ತೀಕ್ಷಣ ಒಂದು ವಿಕೆಟ್ ಪಡೆದರು.
.@imjadeja set the ball rolling for @ChennaiIPL & bagged the Player of the Match award as #CSK beat #KKR at Chepauk 👏 👏
Scorecard ▶ https://t.co/5lVdJVscV0#TATAIPL | #CSKvKKR pic.twitter.com/cjMwEo83hB
— IndianPremierLeague (@IPL) April 8, 2024
ಎರಡು ಕ್ಯಾಚ್ ಹಾಗೂ ಮೂರು ವಿಕೆಟ್ ಪಡೆದಿದ್ದ ಆಲ್‌ರೌಂಡರ್ ಆಟಗಾರ ರವೀಂದ್ರ ಜಡೇಜಾ ಪಂದ್ಯಶ್ರೇಷ್ಢ ಪ್ರಶಸ್ತಿಗೆ ಪಾತ್ರರಾದರು.
ಚೆನ್ನೈ ಸೂಪರ್ ಕಿಂಗ್ಸ್ ತಂಡವು ಆಡಿದ ಐದು ಪಂದ್ಯಗಳಲ್ಲಿ ಮೂರು ಗೆಲುವು ಮತ್ತು ಎರಡು ಸೋಲಿನೊಂದಿಗೆ 2024ರ ಐಪಿಎಲ್‌ನ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದರೆ, ಒಂದು ಸೋಲಿನೊಂದಿಗೆ ಕೆಕೆಆರ್ ತಂಡವು ಎರಡನೇ ಸ್ಥಾನದಲ್ಲಿ ಮುಂದುವರೆದಿದೆ.