ಬೆಂಗಳೂರು ಗ್ರಾಮಾಂತರ | ಪಿಎಸ್‌ಐ ಜಗದೀಶ್ ಹತ್ಯೆ ಪ್ರಕರಣ; ಮೂವರ ಖುಲಾಸೆ, ಇಬ್ಬರಿಗೆ ಶಿಕ್ಷೆ

Date:

Advertisements

ಒಂಬತ್ತು ವರ್ಷಗಳ ಹಿಂದೆ ನಡೆದ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆ ಸಬ್‌ ಇನ್ಸ್‌ಪೆಕ್ಟರ್‌ ಜಗದೀಶ್ ಹತ್ಯೆ ಪ್ರಕರಣದ ಐವರು ಆರೋಪಿಗಳ ಪೈಕಿ ಮೂವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯ ಸೋಮವಾರ ಖುಲಾಸೆಗೊಳಿಸಿದ್ದು, ಇಬ್ಬರಿಗೆ ಶಿಕ್ಷೆ ಪ್ರಕಟಿಸಿದೆ.

ರಘು, ತಿಮ್ಮಕ್ಕ, ಯಲಾಲ ಹನುಮಂತರಾವ್ ಅವರನ್ನು ನ್ಯಾಯಾದೀಶ ರಘುನಾಥ್ ಖುಲಾಸೆಗೊಳಿಸಿದ್ದಾರೆ. ಮಧು ಎಂಬಾತನಿಗೆ ಏಳು ವರ್ಷ ಶಿಕ್ಷೆ ಹಾಗೂ ₹1 ಲಕ್ಷ ದಂಡ ಹಾಗೂ ಹರೀಶ್‌ ಬಾಬು ಎಂಬಾತನಿಗೆ ಜೀವಾವಧಿ ಶಿಕ್ಷೆ ಹಾಗೂ ₹3 ಲಕ್ಷ ದಂಡ ವಿಧಿಸಿದೆ.

2015 ಅಕ್ಟೋಬರ್ 16ರಂದು ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆ ಸಬ್‌ಇನ್ಸ್‌ಪೆಕ್ಟರ್‌ ಜಗದೀಶ್‌ ಅವರು ಸಿಬ್ಬಂದಿ ಜತೆಗೆ ಕಳ್ಳರನ್ನು ಬಂಧಿಸಲು ನೆಲಮಂಗಲ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ವೆಂಕಟೇಶ್ವರ ಕಲ್ಯಾಣ ಪಂಟಪದ ಬಳಿಯ ಟರ್ಬೋ ಹೊಂಡಾ ಶೋರೂಂ ಹತ್ತಿರ ಹೋಗಿದ್ದರು.

Advertisements

ಕಳ್ಳತನ ಮಾಡುತ್ತಿದ್ದ ಕೃಷ್ಣಪ್ಪ ಮತ್ತು ಮಧು ಎಂಬ ತಂದೆ–ಮಗನ ಬೆನ್ನುಹತ್ತಿದ ಜಗದೀಶ್ ಅವರನ್ನು ರಸ್ತೆ ಪಕ್ಕದ ಚರಂಡಿಗೆ ನೂಕಿದ್ದ ಮಧು, ಸರ್ವಿಸ್‌ ಪಿಸ್ತೂಲ್ ಕಸಿದುಕೊಂಡು ನಂತರ ಚಾಕುವಿನಿಂದ ಪಕ್ಕೆಗೆ ಐದಾರು ಬಾರಿ ಇರಿದಿದ್ದ. ಇದರಿಂದ ಜಗದೀಶ್‌ ಮೃತಪಟ್ಟಿದ್ದರು.

ಕಾನ್‌ಸ್ಟೆಬಲ್‌ ವೆಂಕಟೇಶ್‌ಕುಮಾರ್ ಎಂಬುವವರಿಗೂ ಚಾಕುವಿನಿಂದ ಇರಿದು, ಪಿಎಸ್‌ಐ ಅವರ ಸರ್ವಿಸ್‌ ಪಿಸ್ತೂಲ್‌ನೊಂದಿಗೆ ಪರಾರಿಯಾಗಿದ್ದರು.

ಘಟನೆ ಬಳಿಕ ರೈಲಿನಲ್ಲಿ ಪರಾರಿಯಾಗಿದ್ದ ಆರೋಪಿಗಳನ್ನು ಆಂಧ್ರಪ್ರದೇಶದಲ್ಲಿ ಬಂಧಿಸಿ ಕರೆತಂದಿದ್ದರು. ನೆಲಮಂಗಲ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಪ್ರಕರಣದ ತನಿಖೆ ಕೈಗೊಂಡ ನೆಲಮಂಗಲ ಉಪವಿಭಾಗದ ಡಿವೈಎಸ್‌ಪಿ ರಾಜೇಂದ್ರಕುಮಾರ್, ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿದ್ದರು. ಈ ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕರಾಗಿ ಮೀನಾಕುಮಾರಿ, ಎಸ್‌ ವಿ ಭಟ್‌ ವಾದಿಸಿದ್ದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ದಲಿತರ ಮೇಲಿನ ಹಲ್ಲೆ; ಜಿಲ್ಲಾಡಳಿತ ನಿರ್ಲಕ್ಷ್ಯ – ಗ್ರಾಮಸ್ಥರ ಪ್ರತಿಭಟನೆ

ಹತ್ಯೆಗೀಡಾದ ಪಿಎಸ್‌ಐ ಜಗದೀಶ್‌ ಅವರ ಪತ್ನಿಗೆ ಅನುಕಂಪದ ಆಧಾರದ ಮೇಲೆ ಸರ್ಕಾರಿ ಉದ್ಯೋಗ ನೀಡಲಾಗಿದೆ. ಅವರಿಗೆ ಇಬ್ಬರು ಹೆಣ್ಣು ಮಕ್ಕಳು ಇದ್ದಾರೆ ಎನ್ನಲಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X