ಅಬಕಾರಿ ನೀತಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಭಾರತ ರಾಷ್ಟ್ರ ಸಮಿತಿ (ಬಿಆರ್ಎಸ್) ನಾಯಕಿ ಕೆ ಕವಿತಾ ಅವರ ಬಂಧನವನ್ನು ದೆಹಲಿಯ ನ್ಯಾಯಾಲಯವು ಮಂಗಳವಾರ ಎಪ್ರಿಲ್ 23 ರವರೆಗೆ ವಿಸ್ತರಿಸಿದೆ.
ತನಿಖಾ ಸಂಸ್ಥೆಯು 14 ದಿನಗಳ ಕಸ್ಟಡಿಯನ್ನು ಕೋರಿದ್ದು ಕವಿತಾ ಅವರು ಸಾಕ್ಷಿಗಳ ಮೇಲೆ ಪ್ರಭಾವ ಬೀರಲು ಪ್ರಯತ್ನಿಸಿದ್ದು, ಸಾಕ್ಷ್ಯ ನಾಶ ಮಾಡಿದ್ದಾರೆ ಎಂದು ರೂಸ್ ಅವೆನ್ಯೂ ನ್ಯಾಯಾಲಯದ ಮುಂದೆ ವಾದಿಸಿದೆ.
ಅಬಕಾರಿ ನೀತಿ ಹಗರಣದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರ್ಚ್ 15 ರಂದು ಕವಿತಾ ಅವರನ್ನು ತನಿಖಾ ಸಂಸ್ಥೆ ಬಂಧಿಸಿದ್ದು ನಂತರ ಕವಿತಾ ಅವರು ಸಿಬಿಐ ಕಸ್ಟಡಿಯಲ್ಲಿದ್ದಾರೆ. ಈ ಹಿಂದೆ ಕವಿತಾ ಅವರು ಮಧ್ಯಂತರ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ಆದೇಶವನ್ನು ನ್ಯಾಯಾಲಯವು ಎಪ್ರಿಲ್ 9 ಕ್ಕೆ ಕಾಯ್ದಿರಿಸಿತ್ತು.
#WATCH | Delhi: BRS MLC K Kavitha says, “This is a case completely based on the statement. It is a political case. This is a case of targeting the opposition parties. CBI has already recorded my statement in jail.” pic.twitter.com/IYwwdEPgeH
— ANI (@ANI) April 9, 2024
ಕವಿತಾ ಅವರು ಈ ಹಿಂದೆ ತನ್ನ 16 ವರ್ಷದ ಪುತ್ರನಿಗೆ ಪರೀಕ್ಷೆಯ ಸಮಯದಲ್ಲಿ ಬೆಂಬಲಿಸುವ ಅಗತ್ಯವಿದೆ ಎಂದು ಹೇಳಿ ಮಧ್ಯಂತರ ಜಾಮೀನು ಅರ್ಜಿ ಸಲ್ಲಿಸಿದ್ದರು. ಆದರೆ ನ್ಯಾಯಾಲಯ ಅರ್ಜಿಯನ್ನು ವಜಾಗೊಳಿಸಿದೆ. ಕವಿತಾ ಅವರು ಅಬಕಾರಿ ನೀತಿ ಪ್ರಕರಣದಲ್ಲಿ ಉಲ್ಲೇಖಿಸಲಾದ “ಸೌತ್ ಗ್ರೂಪ್” ನ ಪ್ರಮುಖ ಸದಸ್ಯರಾಗಿದ್ದಾರೆ ಎಂದು ಆರೋಪಿಸಲಾಗಿದೆ.
ಇದನ್ನು ಓದಿದ್ದೀರಾ? ಅಬಕಾರಿ ನೀತಿ ಹಗರಣ | ಬಿಆರ್ಎಸ್ ನಾಯಕಿ ಕವಿತಾಗೆ ಮಧ್ಯಂತರ ಜಾಮೀನು ನಿರಾಕರಣೆ
ದೆಹಲಿ ಅಬಕಾರಿ ನೀತಿಯ ರಚನೆ ಮತ್ತು ಅನುಷ್ಠಾನಕ್ಕೆ ಸಂಬಂಧಿಸಿದ ಪ್ರಯೋಜನಗಳನ್ನು ಪಡೆಯಲು ಕವಿತಾ ಎಎಪಿಯ ಉನ್ನತ ನಾಯಕರಾದ ಅರವಿಂದ್ ಕೇಜ್ರಿವಾಲ್ ಮತ್ತು ಮನೀಶ್ ಸಿಸೋಡಿಯಾ ಅವರೊಂದಿಗೆ ಕಾರ್ಯನಿರ್ವಹಿಸಿದ್ದಾರೆ. ಎಎಪಿ ನಾಯಕರಿಗೆ 100 ಕೋಟಿ ರೂಪಾಯಿ ನೀಡುವಲ್ಲಿ ಅವರು ಪಾತ್ರ ವಹಿಸಿದ್ದಾರೆ ಎಂದು ದೂರಲಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಎಎಪಿ ನಾಯಕ ಮನೀಶ್ ಸಿಸೋಡಿಯಾ, ಸಂಜಯ್ ಸಿಂಗ್ರನ್ನು ಕೂಡಾ ಬಂಧಿಸಿದೆ. ಇತ್ತೀಚೆಗೆ ಸಂಜಯ್ ಸಿಂಗ್ ಜಾಮೀನು ಮೇಲೆ ಹೊರಬಂದಿದ್ದಾರೆ.