ವಿಜಯಪುರ | ಎರಡು ಲಕ್ಷ ಮತಗಳ ಅಂತರದಿಂದ ಆಲಗೂರ್ ದಿಗ್ವಿಜಯ: ಮಲ್ಲಿಕಾರ್ಜುನ್ ಲೋಣಿ

Date:

Advertisements

ಎರಡು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಕಾಂಗ್ರೆಸ್‌ನ ಲೋಕಸಭೆ ಅಭ್ಯರ್ಥಿ ರಾಜು ಆಲಗೂರ ಗೆಲ್ಲಲಿದ್ದಾರೆ ಎಂದು ಮಲ್ಲಿಕಾರ್ಜುನ್ ಲೋಣಿ ವಿಶ್ವಾಸ ವ್ಯಕ್ತಪಡಿಸಿದರು.

ವಿಜಯಪುರ ನಗರದ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ (ಏ.9) ಪಕ್ಷದ ಜಿಲ್ಲಾ ಅಧ್ಯಕ್ಷ ಸ್ಥಾನ ವಹಿಸಿದ್ದ ಅವರು ಮಾತನಾಡಿ, ಪಕ್ಷದ ಮುಖಂಡರು, ಕಾರ್ಯಕರ್ತರು  ಈ ಲೋಕಸಭೆ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿದ್ದಾರೆ. ತಮ್ಮ ಮೇಲೆ ವಿಶ್ವಾಸವಿಟ್ಟು, ಪಕ್ಷ ಈ ಮಹತ್ತರ ಜವಾಬ್ದಾರಿ ನೀಡಿದೆ. ಇದಕ್ಕೆ ಬದ್ಧವಾಗಿ ಶ್ರಮವಹಿಸಿ ಸಂಘಟನೆಯಲ್ಲಿ ತೊಡಗುವೆ. ರಾಜ್ಯದಲ್ಲಿ ಕಾಂಗ್ರೆಸ್ ಉತ್ತಮ ಆಡಳಿತ ನಡೆಸಿ, ಜನಾನುರಾಗಿಯಾಗಿದೆ. ಇದನ್ನು ಜನರಿಗೆ ನಮ್ಮ ಕಾರ್ಯಕರ್ತರು ತಿಳಿಸಬೇಕು ಎಂದರು.

ನಮ್ಮ ಪಕ್ಷದ ಲೋಕಸಭೆ ಅಭ್ಯರ್ಥಿ ಆಲಗೂರರು ಪ್ರಬುದ್ಧರಾಗಿದ್ದಾರೆ. ಇಷ್ಟು ದಿನ ಅವಿರತ ಶ್ರಮದಿಂದ ಪಕ್ಷವನ್ನು ಕಟ್ಟಿ ಬೆಳೆಸಿದ್ದಾರೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡಿದ್ದಾರೆ. ಅವರಂತೆ ತಾವು ಕೂಡ ಪಕ್ಷದ ಏಳ್ಗೆಗೆ ಶ್ರಮಿಸುವೆ ಎಂದು ಹೇಳಿದ ಲೋಣಿ, ಆಲಗೂರರ ಗೆಲುವು ನೂರಕ್ಕೆ ನೂರು ನಿಶ್ಚಿತವಾಗಿದೆ. ನಾವೆಲ್ಲ ಕಷ್ಟಪಟ್ಟರೆ ಎರಡು ಲಕ್ಷ ಮತಗಳಿಂದ ಅವರನ್ನು ಗೆಲ್ಲಿಸಬಹುದು ಎಂದು ಹೇಳಿದರು.

Advertisements

ಅಭ್ಯರ್ಥಿಯಾದ ರಾಜು ಆಲಗೂರ ಮಾತನಾಡಿ, ಲೋಣಿಯವರ ನೇಮಕದಿಂದ ಪಕ್ಷ ಸಂಘಟನೆಗೆ ಇನ್ನಷ್ಟು ಶಕ್ತಿ ಬರಲಿದೆ. ಈ ಚುನಾವಣೆಯನ್ನು ಎಲ್ಲರೂ ಒಟ್ಟಾಗಿ ಎದುರಿಸಬೇಕು. ಬಿಜೆಪಿಯ ಸುಳ್ಳುಗಳನ್ನು ಜನರಿಗೆ ಮನದಟ್ಟು ಮಾಡಿಸಬೇಕು ಎಂದರು.

ಸಿದ್ದರಾಮಯ್ಯರ ನೇತೃತ್ವದ ಕಾಂಗ್ರೆಸ್ ಸರ್ಕಾರ ಗ್ಯಾರಂಟಿಗಳ ಮೂಲಕ ಜನಸಾಮಾನ್ಯರ ಮನ ಮುಟ್ಟಿದೆ, ಅವರ ಹೃದಯ ಗೆದ್ದಿದೆ. ಈ ಬಾರಿಯ ಲೋಕಸಭೆಯ ಚುನಾವಣೆಯಲ್ಲಿ ಪಕ್ಷ ಕೇಂದ್ರದಲ್ಲೂ ಅಧಿಕಾರ ಹಿಡಿಯಲಿದೆ ಎಂದು ಭರವಸೆ ವ್ಯಕ್ತಪಡಿಸಿದರು.

ಬೇವು-ಬೆಲ್ಲ ನೀಡಿ ಅಧಿಕಾರ ಹಸ್ತಾಂತರ

ಹೊಸ ಶಕ್ತಿ ಬಂದಿದೆ, ಲಕ್ಷ ಮತಗಳ ಅಂತರದಿಂದ ಗೆಲ್ಲುವೆ. ಇಷ್ಟು ದಿನಗಳ ಸಹಕಾರಕ್ಕೆ ಧನ್ಯವಾದ, ಎಂದು ಹೇಳುತ್ತ ರಾಜು ಆಲಗೂರ್ ಅವರು ಯುಗಾದಿಯ ಬೇವು-ಬೆಲ್ಲವನ್ನು ನೀಡಿ ಮಲ್ಲಿಕರ‍್ಜುನ ಲೋಣಿಯವರಿಗೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸ್ಥಾನದ ಅಧಿಕಾರವನ್ನು ಹಸ್ತಾಂತರಿಸಿದ್ದು ವಿಶೇಷವಾಗಿತ್ತು.

ಆಲಗೂರರು ಹೇಳಿರುವುದಕ್ಕಿಂತ ಹೆಚ್ಚಿನ ಅಂತರದಿಂದ ಪಕ್ಷ ಗೆಲ್ಲುವ ವಿಶ್ವಾಸವಿದೆ. ಎಲ್ಲರೊಡಗೂಡಿ ಸಂಘಟನೆ, ಚುನಾವಣೆ ಎದುರಿಸಲು ಪಣ ತೊಟ್ಟಿರುವೆವು. ರಾಜ್ಯದಲ್ಲಿ ಇಪ್ಪತ್ತಕ್ಕೂ ಹೆಚ್ಚು ಸೀಟುಗಳನ್ನು ಕಾಂಗ್ರೆಸ್ ಗೆಲ್ಲಲಿದೆ ಎಂದು ಮಲ್ಲಿಕಾರ್ಜುನ್‌ ಲೋಣಿ ಹೇಳಿದರು.

ಈ ಸಂದರ್ಭದಲ್ಲಿ ಶಾಸಕ ವಿಠ್ಠಲ ಕಟಕದೊಂಡ, ಕಾಂಗ್ರೆಸ್ ಮುಖಂಡರಾದ ಎಂ.ಆರ್. ಪಾಟೀಲ, ಹಮೀದ್ ಮುಶ್ರೀಫ್, ಗಂಗಾಧರ ಸಂಬಣ್ಣಿ, ಚಾಂದಸಾಬ ಗಡಗಲಾವ, ವೈಜನಾಥ ಕರ್ಪೂರಮಠ, ಸುಭಾಷ ಕಾಲೇಬಾಗ, ಚಂದ್ರಕಾಂತ ಶೆಟ್ಟಿ, ಮಹ್ಮದರಫೀಕ ಟಪಾಲ, ಆಜಾದ ಪಟೇಲ, ಮಹಾದೇವಿ ಗೋಕಾಕ, ಎಸ್.ಎಂ. ಪಾಟೀಲ ಗಣಿಹಾರ, ಸೋಮನಾಥ ಕಳ್ಳಿಮನಿ, ಬಿಡಿಎ ಅಧ್ಯಕ್ಷ ಕನ್ನಾನ ಮುಶ್ರೀಫ್, ಉಪಮೇಯರ್ ದಿನೇಶ ಹಳ್ಳಿ, ಸ್ನೇಹಾ ಕಟ್ಟಿ, ವಿದ್ಯಾವತಿ ಅಂಕಲಗಿ, ಶಬ್ಬೀರ ಜಾಗಿರದಾರ, ಸಾಹೇಬಗೌಡ ಬಿರಾದಾರ, ಸುರೇಶ ಗೊಣಸಗಿ, ವಿಜಯಕುಮಾರ ಘಾಟಗೆ, ಐ.ಎಂ. ಇಂಡಿಕರ, ವಸಂತ ಹೊನಮೊಡೆ, ಜಾಕಿರ ಮುಲ್ಲಾ, ಹಾಜಿಲಾಲ ದಳವಾಯಿ, ಚನಬಸಪ್ಪ ನಂದರಗಿ, ಅಷ್ಫಾಕ ಮನಗೂಳಿ, ಅಮಿತ ಚವ್ಹಾಣ, ರಮೇಶ ಗುಬ್ಬೇವಾಡ, ನಿಂಗಪ್ಪ ಸಂಗಾಪೂರ, ರಾಜೇಶ್ವರಿ ಚೋಳಕೆ, ಬಾಪುಗೌಡ ಪಾಟೀಲ, ಶಂಕರಸಿಂಗ್ ಹಜೇರಿ, ಸುಭಾಷ ಗುಡಿಮನಿ, ಆನಂದ ಜಾಧವ, ಮಹ್ಮದಹನೀಫ್ ಮಕಾನದಾರ, ಬ್ಲಾಕ್ ಅಧ್ಯಕ್ಷರುಗಳಾದ ಆರತಿ ಶಹಾಪೂರ, ಗುರು ತಾರನಾಳ, ಜಾವಿದ ಮೊಮಿನ, ಸಂತೋಷ ಬಾಲಗಾಂವಿ, ಶ್ರೀದೇವಿ ಉತ್ಸಲಾರ ಅನೇಕರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ನಾಲ್ಕು ದಿನಗಳಿಂದ ರೈತರು ಪ್ರತಿಭಟನೆ, ಸ್ಪಂದಿಸದ ಆಡಳಿತ: ಜೆಡಿಎಸ್ ರಾಜ್ಯ ವಕ್ತಾರ ವೆಂಕನಗೌಡ ಗೋವಿಂದಗೌಡ್ರ ಕಿಡಿ

"ಬಗರ್‌ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡಬೇಕು ಎಂದು ಒತ್ತಾಯಿಸಿ ರೈತರು ನಾಲ್ಕು ದಿನಗಳಿಂದ...

ಕೊಪ್ಪಳ | ಅಕ್ರಮ ಗಾಂಜಾ ಮಾರಾಟ : ಒಂದೇ ಕುಟುಂಬದ 3 ಸೇರಿ ನಾಲ್ವರ ಬಂಧನ

ಸಾರ್ವಜನಿಕ ಸ್ಥಳಗಳಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದವರ ಮೇಲೆ ದಾಳಿ ನಡೆಸಿ...

ಧಾರವಾಡ | ಹೆಬ್ಬಳ್ಳಿ ಗ್ರಾಮದಲ್ಲಿ 91 ಪಿಓಪಿ ಗಣೇಶ ವಿಗ್ರಹಗಳ ವಶಕ್ಕೆ ಪಡೆದ ತಪಾಸಣೆ ತಂಡ

ತಾಲೂಕಿನ ಹೆಬ್ಬಳ್ಳಿಯಲ್ಲಿ 91 ಪಿಓಪಿ ಗಣಪತಿಗಳನ್ನು ಜಿಲ್ಲಾಧಿಕಾರಿ ಆದೇಶದಂತೆ ರಚಿಸಿದ ಕಾರ್ಯ...

ಚಿಕ್ಕಮಗಳೂರು l ಪೋಕ್ಸೋ ಪ್ರಕರಣ: ಆರೋಪಿಗಳಿಗೆ ದಂಡ, ತಲಾ ಹತ್ತು ವರ್ಷ ಜೈಲು ಶಿಕ್ಷೆ

ಪೋಕ್ಸೋ ಪ್ರಕರಣದಲ್ಲಿ ಇಬ್ಬರು ಆರೋಪಿಗಳಿಗೆ ತಲಾ ಹತ್ತು ವರ್ಷ ಜೈಲು ಶಿಕ್ಷೆ...

Download Eedina App Android / iOS

X