ಬಿಸಿಲಿನ ಜಳಕ್ಕೆ ಕೋಳಿಗಳ ಸಾವು; ಗ್ರಾಹಕರಿಗೆ ತಟ್ಟಿದ ಬೆಲೆ ಏರಿಕೆ ಬಿಸಿ

Date:

Advertisements

ಬೇಸಿಗೆ ಜಳಕ್ಕೆ ಕೋಳಿಫಾರಂಗಳಲ್ಲಿ ಕೋಳಿ ಸಾಯುತ್ತಿರುವ ಹಿನ್ನೆಲೆ ಕೋಳಿ ಉತ್ಪಾದನೆ ಕುಸಿದಿದ್ದು, ಮಾರಾಟಕ್ಕೆ ಮಾಂಸದ ಕೊರತೆ ಉಂಟಾಗಿದೆ.

ಯುಗಾದಿ ಹಬ್ಬಕ್ಕೆ ಸಹಜವಾಗಿಯೇ ಕೋಳಿ ಬೆಲೆ ಹೆಚ್ಚಾಗುತ್ತದೆ. ಹಾಗಾಗಿಯೇ ಹಬ್ಬಕ್ಕೆ ಮಾರುಕಟ್ಟೆಗೆ ಬರುವಂತೆ ರೈತರು ಫಾರಂ ಕೋಳಿಗಳನ್ನು ಸಾಕಾಣಿಕೆ ಮಾಡುತ್ತಾರೆ. ಆದರೆ ಈ ಬಾರಿ ಬಿಸಿಲಿನ ತೀವ್ರತೆ ಹೆಚ್ಚಾಗಿರುವುದರಿಂದ ಕೋಳಿಗಳು ಸಾಕಾಣಿಕೆ ಕೇಂದ್ರದಲ್ಲಿ ಸಾಯುವ ಪ್ರಮಾಣ ಹೆಚ್ಚಾಗಿದೆ.

ಹೀಗಾಗಿಯೇ ಕೋಳಿ ಮಾಂಸ ಇಂದು ಮಾರುಕಟ್ಟೆಯಲ್ಲಿ 1ಕೆಜಿಗೆ ₹240ಗಳಿಗೆ ಮಾರಾಟವಾಗುತ್ತಿದೆ. ಒಂದು ವಾರದ ಹಿಂದೆ 1 ಕೆಜಿಗೆ ₹210 ಇತ್ತು ಎಂದು ತಿಳಿದುಬಂದಿದೆ.

Advertisements

ಸಾಮಾನ್ಯವಾಗಿ ಯುಗಾದಿ ಹಬ್ಬ ಒಂದು ವಾರ ಇರುವಂತೆ ಮಾರುಕಟ್ಟೆಗೆ ಕೋಳಿ ಸಬರಾಜು ಕಡಿಮೆಯಾಗುತ್ತದೆ. ಹಾಗೆಯೇ ಖರೀದಿಯೂ ಕಡಿಮೆಯಾಗುತಿತ್ತು. ಆದರೆ ಈ ಬಾರಿ ಖರೀದಿ ಮಾತ್ರ ಕಡಿಮೆಯಾಗಿಲ್ಲ. ರಂಜಾನ್‌, ಯುಗಾದಿ ಹಬ್ಬ ಎರಡೂ ಒಂದೆರಡು ದಿನಗಳ ಅಂತರದಲ್ಲೇ ಇರುವುದರಿಂದ ಕೋಳಿ ಮಾಂಸದ ಬೆಲೆ ಮತ್ತಷ್ಟು ಹೆಚ್ಚಾಗಿದೆ.

ಈ ಸುದ್ದಿ ಓದಿದ್ದೀರಾ? ಹಾಸನ | ಕಾಂಗ್ರೆಸ್ ಅಭ್ಯರ್ಥಿ ಪರ ಕರಪತ್ರ ಮುದ್ರಣ; ಅನುಮತಿ ಪಡೆಯದ ಪ್ರಿಂಟಿಂಗ್ ಪ್ರೆಸ್‌ಗೆ ಬೀಗಮುದ್ರೆ

ಲೋಕಸಭಾ ಚುನಾವಣೆ ಇರುವುದರಿಂದ ಜನಸಾಮಾನ್ಯರ ಕೈಯಲ್ಲಿ ಹಣ ಇರುವುದು ಹಾಗೂ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಯ ಗೃಹಲಕ್ಷ್ಮಿ ಯೋಜನೆಯಿಂದಾಗಿ ಮಹಿಳೆಯರ ಕೈಯಲ್ಲೂ ಹಣ ಇರುವುದರಿಂದ ಕೊಳ್ಳುವ ಶಕ್ತಿ ವೃದ್ಧಿಯಾಗಿದೆ. ಈ ಎಲ್ಲ ಕಾರಣಗಳಿಂದಾಗಿ ಕೋಳಿ ಮಾಂಸ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯು ಇದೆ ಎಂಬುದು ಕೋಳಿ ಮಾರಾಟಗಾರರ ಲೆಕ್ಕಾಚಾರವಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

ದಾವಣಗೆರೆ | ಶಾಲೆಗೆ ರಸ್ತೆ ಅಭಿವೃದ್ಧಿಪಡಿಸಲು ಆರನೇ ತರಗತಿ ವಿದ್ಯಾರ್ಥಿನಿ ಗ್ರಾ.ಪಂ. ಮುಂದೆ ಧರಣಿ

ಶಾಲೆಗೆ ಹೋಗುವ ರಸ್ತೆ ಸರಿಪಡಿಸಿ ಅಭಿವೃದ್ಧಿಪಡಿಸಲು ಒತ್ತಾಯಿಸಿ ಆರನೇ ತರಗತಿ ವಿದ್ಯಾರ್ಥಿನಿಯೊಬ್ಬಳು...

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

Download Eedina App Android / iOS

X