ಮೈಸೂರು | ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ; ಜಿಲ್ಲೆಯು 17ನೇ ಸ್ಥಾನಕ್ಕೆ ಕುಸಿತ

Date:

Advertisements

ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶದಲ್ಲಿ ಕಳೆದ ಬಾರಿ 13ನೇ ಸ್ಥಾನದಲ್ಲಿದ್ದ ಮೈಸೂರು ಜಿಲ್ಲೆಯು 17ನೇ ಸ್ಥಾನಕ್ಕೆ ಕುಸಿದಿದೆ.

ಕಾಲೇಜು ಶಿಕ್ಷಣ ಇಲಾಖೆಯು ಬುಧವಾರ ಪರೀಕ್ಷಾ ಫಲಿತಾಂಶ ಪ್ರಕಟಿಸಿದ್ದು, ಜಿಲ್ಲೆಯ ಫಲಿತಾಂಶವು ಶೇ 79.89ರಿಂದ ಶೇ83.13ಕ್ಕೆ ಏರಿಕೆಯಾಗಿದೆ. ‌ರಾಜ್ಯದಲ್ಲಿ ಟಾಪ್‌ 10ರಲ್ಲಿ ಕಾಣಿಸಿಕೊಳ್ಳಬೇಕೆಂಬ ಮೈಸೂರು ಜಿಲ್ಲೆಯ ಕನಸು ಈ ಬಾರಿಯೂ ಈಡೇರಲಿಲ್ಲ.

ವಿಜ್ಞಾನ ವಿಭಾಗದಲ್ಲಿ ಕುವೆಂಪುನಗರದ ಆದಿಚುಂಚನಗಿರಿ ಪಿಯು ಕಾಲೇಜಿನ ಕೆ ಎಚ್ ಉರ್ವಿಶ್‌ ಪ್ರಶಾಂತ್‌ ಹಾಗೂ ಮೇಟಗಳ್ಳಿಯ ಆರ್‌ವಿಪಿಬಿ ಕಾಲೇಜಿನ ಜಾಹ್ನವಿ ತುಮಕೂರು ಗುರುರಾಜ್‌ ತಲಾ 597 ಅಂಕಗಳೊಂದಿಗೆ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದ್ದಾರೆ.

Advertisements

ಉರ್ವಿಶ್ ಪ್ರಶಾಂತ್ ಅವರು ಕನ್ನಡ, ಇಂಗ್ಲಿಷ್, ಭೌತವಿಜ್ಞಾನದಲ್ಲಿ ತಲಾ 99, ರಸಾಯನ ವಿಜ್ಞಾನ, ಗಣಿತ ಹಾಗೂ ಜೀವವಿಜ್ಞಾನದಲ್ಲಿ 100 ಅಂಕ ಪಡೆದಿದ್ದಾರೆ. ಭಾರತೀಯ ತಾಂತ್ರಿಕ ಸಂಸ್ಥೆಯಲ್ಲಿ (ಐಐಟಿ) ಎಂಜಿನಿಯರಿಂಗ್ ಮಾಡಿ, ಇಸ್ರೊ ಸೇರುವ ಕನಸಿರುವುದಾಗಿ ಹೇಳಿಕೊಂಡಿದ್ದಾರೆ.

ಜಾಹ್ನವಿ ಅವರು ಸಂಸ್ಕೃತ, ಗಣಿತ, ಜೀವವಿಜ್ಞಾನ ಹಾಗೂ ರಸಾಯನ ವಿಜ್ಞಾನದಲ್ಲಿ ತಲಾ 100 ಅಂಕ, ಇಂಗ್ಲಿಷ್‌ನಲ್ಲಿ 99 ಮತ್ತು ಭೌತವಿಜ್ಞಾನದಲ್ಲಿ 98 ಅಂಕ ಗಳಿಸಿದ್ದಾರೆ. ಮಹಾರಾಣಿ ಪಿಯು ಕಾಲೇಜಿನ ಶ್ರೇಯಾ ಗಣೇಶ್ ಅಯ್ಯರ್ 5ನೇ ಸ್ಥಾನ ಪಡೆದಿದ್ದಾರೆ.

ವಾಣಿಜ್ಯ ವಿಭಾಗದಲ್ಲಿ ನಗರದ ಸದ್ವಿದ್ಯಾ ಪಿಯು ಕಾಲೇಜಿನ ಸ್ವಾತಿ ಎಸ್ ಭಟ್ 594 ಅಂಕಗಳೊಂದಿಗೆ ರಾಜ್ಯಕ್ಕೆ 4ನೇ ಸ್ಥಾನ ಪಡೆದಿದ್ದು, ವ್ಯವಹಾರಿಕ ಅಧ್ಯಯನ, ಅಕೌಂಟೆನ್ಸಿ, ಗಣಿತ ಹಾಗೂ‌ ಸಂಸ್ಕೃತದಲ್ಲಿ ತಲಾ 100, ಇಂಗ್ಲಿಷ್‌ನಲ್ಲಿ 96, ಸಂಖ್ಯಾಶಾಸ್ತ್ರದಲ್ಲಿ 98 ಅಂಕ ಪಡೆದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಗದಗ | ನಿಮ್ಮ ಮತದಿಂದ ನಿಮ್ಮ ಅಭಿವೃದ್ಧಿ, ದೇಶದ ಅಭಿವೃದ್ಧಿ ಸಾಧ್ಯ: ಎಸ್.ಕೆ ಇನಾಮದಾರ

ಫಲಿತಾಂಶ ಹೆಚ್ಚಳ: “ಜಿಲ್ಲೆಯು ಫಲಿತಾಂಶದಲ್ಲಿ ಕಳೆದ ಬಾರಿಗಿಂತ ಉತ್ತಮ ಸಾಧನೆ ಮಾಡಿದೆ. ಶೇ.79.89ರಿಂದ ಶೇ.83.13ಕ್ಕೆ ಏರಿಕೆಯಾಗಿದೆ. ರ‍್ಯಾಂಕಿಂಗ್‌ನಲ್ಲಿ ಮಾತ್ರ 17ನೇ ಸ್ಥಾನ ಸಿಕ್ಕಿದೆ” ಎಂದು ಡಿಡಿಪಿಯು ಮರಿಸ್ವಾಮಿ ಮಾಧ್ಯಮವೊಂದಕ್ಕೆ ತಿಳಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X