ಸಿಎಂ ಸಿದ್ದರಾಮಯ್ಯ ವಿರುದ್ಧ ‘ಸುಳ್ಳು ಸುದ್ದಿ’; ಕಿಡಿಗೇಡಿಗಳ ವಿರುದ್ಧ ಎಫ್‌ಐಆರ್ ದಾಖಲು

Date:

Advertisements

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸುಳ್ಳು ಸುದ್ದಿ ಸೃಷ್ಟಿಸಿ, ಸುದ್ದಿಪತ್ರಿಕೆಯ ರೀತಿಯಲ್ಲಿ ಚಿತ್ರಿಸಿ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದ 7 ಮಂದಿ ಕಿಡಿಗೇಡಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

“ಹಿಂದುಗಳ ಅಗತ್ಯ ನಮಗೆ ಬೇಡ. ಮುಸ್ಲಿಮರ ಓಟು ಸಾಕು‌. ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಹುಟ್ಟಲು ಬಯಸುತ್ತೇನೆ. ಮುಸ್ಲಿಂರ ಓಲೈಕೆ ಕುರಿತು ಬಿಜೆಪಿಗರ ಟೀಕೆ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ ಎಂಬ ರೀತಿಯಲ್ಲಿ ಸುಳ್ಳು ಸುದ್ದಿಯನ್ನು ಚಿತ್ರಿಸಿ, ಬಿತ್ತರಿಸಲಾಗಿತ್ತು. ಈ ಬಗ್ಗೆ ಹರೀಶ್‌ ನಾಗರಾಜು ಎಂಬವರು ಪೊಲೀಸರಿಗೆ ದೂರು ನೀಡಿದ್ದರು.

ಅವರ ದೂರಿನ ಆಧಾರದ ಮೇಲೆ ಬೆಂಗಳೂರು ಪಶ್ಚಿಮ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 66, 66ಸಿ ಮತ್ತು 66ಡಿ ಹಾಗೂ ಐಪಿಸಿ ಸೆಕ್ಷನ್‌ 153ಎ, 120ಬಿ, 419, 469, 471, 505(2) ಮತ್ತು 468ರ ಅಡಿಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

Advertisements

ಆರೋಪಿಗಳನ್ನು ಪ್ರಭಾಕರ್, ವಸಂತ್ ಗಿಳಿಯಾರ್, ವಿಜಯ್ ಹೆರಗು, ಪಾಂಡು ಮೋದಿಕ ಎಂದು ಗುರುತಿಸಲಾಗಿದೆ. ಅಲ್ಲದೆ, ಬಿಜೆಪಿ ಸಪೋಟರ್ಸ್‌, ದಾವಣಗೆರೆ ಬಿಜೆಪಿ ಹಾಗೂ ದಾತ್ರಿ ಗೋಶಾಲೆ ಗೋಳೂರು ಎಂಬ ಫೇಸ್‌ಬುಕ್‌ ಪುಟಗಳ ಹೆಸರನ್ನೂ ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ

ತಮ್ಮ ವಿರುದ್ಧ ಸುಳ್ಳು ಸುದ್ದಿ ಪ್ರಕಟಿಸಿದ್ದ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಪೊಲೀಸ್‌ ಇಲಾಖೆಗೆ ದೂರು ನೀಡಿದ್ದಾರೆ. ಬಿಜೆಪಿ-ಜೆಡಿಎಸ್‌ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. “ರಾಜಕೀಯ ವಿರೋಧಿಗಳನ್ನು ನ್ಯಾಯಸಮ್ಮತ ರೀತಿಯಲ್ಲಿ ಎದುರಿಸಲಾಗದೆ ಇಂತಹ ಅಡ್ಡದಾರಿ ಮೂಲಕ ಚುನಾವಣೆ ಗೆಲ್ಲಲು ಹೊರಟಿರುವುದು ಬಿಜೆಪಿ ಮತ್ತು ಜೆಡಿಎಸ್‌ನ ಬೌದ್ಧಿಕ ದಿವಾಳಿತನವನ್ನು ತೋರಿಸುತ್ತದೆ. ಹತ್ತು ವರ್ಷಗಳ ಕಾಲ ದೇಶದ ಆಡಳಿತ ನಡೆಸಿದ ಪಕ್ಷವೊಂದು ಚುನಾವಣೆ ಗೆಲ್ಲಲು ಸುಳ್ಳು ಸುದ್ದಿಯ ಮೊರೆ ಹೋಗುವಂತಹ ಹೀನಾಯ ಸ್ಥಿತಿಗೆ ತಲುಪಬಾರದಿತ್ತು” ಎಂದು ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

Download Eedina App Android / iOS

X