ದಾವಣಗೆರೆ | ರಂಜಾನ್ ಹಬ್ಬ: ದಿನಸಿ ಸಾಮಾಗ್ರಿ ನೀಡಿ ಮತದಾರರಿಗೆ ಕಾಂಗ್ರೆಸ್‌ ಆಮಿಷವೊಡ್ಡುತ್ತಿದೆ; ಸತೀಶ್ ಕೊಳೇನಹಳ್ಳಿ ಆರೋಪ

Date:

Advertisements

ಕಾಂಗ್ರೆಸ್ ವತಿಯಿಂದ ರಂಜಾನ್ ಹಬ್ಬದ ಪ್ರಯುಕ್ತ ಅಕ್ಕಿ ಮತ್ತು ಇತರ ದಿನಸಿ ಸಾಮಾಗ್ರಿಗಳನ್ನು ವಿತರಣೆ ಮಾಡುತ್ತಿರುವುದು ಕಂಡು ಬಂದಿದೆ, ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವಾಗ ದಾವಣಗೆರೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪರವಾಗಿ ಮುಸ್ಲಿಂ ಮತದಾರರನ್ನು ಓಲೈಸುವ ನಿಟ್ಟಿನಲ್ಲಿ ಇಂತಹ ಕೃತ್ಯಗಳನ್ನು ನಡೆಸಿ, ಆಸೆ ಆಮಿಷ ತೋರಿಸುವ ಕುತಂತ್ರ ರೂಪಿಸುತ್ತಿದೆ ಎಂದು ದಾವಣಗೆರೆ ಜಿಲ್ಲಾ ಬಿಜೆಪಿ ವಕ್ತಾರ ಬಿ.ಎಂ. ಸತೀಶ್ ಕೊಳೇನಹಳ್ಳಿ ಆರೋಪಿಸಿದ್ದಾರೆ.

ದಾವಣಗೆರೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೋಲಿನ ಮುನ್ಸೂಚನೆಯಿಂದ ಕಾಂಗ್ರೆಸ್ ಪಕ್ಷ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ನಂಬಿಕೆ ಕಳೆದುಕೊಂಡಿದೆ. ಅಡ್ಡದಾರಿ ಹಿಡಿದು ಮತದಾರರಿಗೆ ರಂಜಾನ್ ಹಬ್ಬದ ಪ್ರಯುಕ್ತ ಆಹಾರ ಧಾನ್ಯಗಳ ವಿತರಣೆ ಮಾಡುತ್ತಿರುವುದು ಪ್ರಜಾಪ್ರಭುತ್ವ ವಿರೋಧಿ ಧೋರಣೆಯಾಗಿದೆ. ನೂರು ವರ್ಷಗಳ ಇತಿಹಾಸವಿದೆ ಎಂದು ಹೇಳಿಕೊಳ್ಳುವ  ಪಕ್ಷಕ್ಕೆ ಇಂತಹ ದುರ್ಗತಿ ಬರಬಾರದಾಗಿತ್ತು ಎಂದು ವ್ಯಂಗ್ಯವಾಡಿದರು.

ಯಾವಾಗಲೂ ಭ್ರಷ್ಟ ನಡೆ ಅನುಸರಿಸುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಮತದಾರ ಪ್ರಭು ಬರುವ ಲೋಕಸಭಾ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸುತ್ತಾರೆ. ಹಿಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಕುಕ್ಕರ್ ಹಂಚಿ ಮತದಾರರಿಗೆ ಆಸೆ ಆಮಿಷ ತೋರಿಸಿದ್ದು ಇನ್ನು ಮರೆಯದೆ ಮನಸ್ಸಿನಲ್ಲಿ ಇರುವಾಗ ಮತ್ತೇ ಇಂತಹ ಕೃತ್ಯಕ್ಕೆ ಇಳಿದಿರುವುದು ಭ್ರಷ್ಟ ಕಾಂಗ್ರೆಸ್‌ಗೆ ಇನ್ನು ಬುದ್ದಿ ಬಂದಿಲ್ಲ. ಭಗತ್ ಸಿಂಗ್ ನಗರ, ಯಲ್ಲಮ್ಮನಗರ, ಎಸ್.ಒ.ಜಿ ಕಾಲೋನಿಯಲ್ಲಿ ಕಾಂಗ್ರೆಸ್ ಪಕ್ಷ ಮತದಾರರಿಗೆ ಆಹಾರ ಧಾನ್ಯಗಳ ಕಿಟ್ ವಿತರಣೆ ಮಾಡುತ್ತಿರುವುದು ಬೆಳಕಿಗೆ ಬಂದಿದೆ ಎಂದು ಆರೋಪಿಸಿದರು.

Advertisements

ಸುದ್ದಿಗೋಷ್ಠಿಯಲ್ಲಿ ಧನಂಜಯ ರಾಘವೇಂದ್ರ, ಕಡ್ಲೆಬಾಳು, ವಿಶ್ವಾಸ್ ಎಚ್.ಪಿ. ಮತ್ತಿತರರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಪೋಕ್ಸೋ ಪ್ರಕರಣ: ಆರೋಪಿಗಳಿಗೆ ದಂಡ, ತಲಾ ಹತ್ತು ವರ್ಷ ಜೈಲು ಶಿಕ್ಷೆ

ಪೋಕ್ಸೋ ಪ್ರಕರಣದಲ್ಲಿ ಇಬ್ಬರು ಆರೋಪಿಗಳಿಗೆ ತಲಾ ಹತ್ತು ವರ್ಷ ಜೈಲು ಶಿಕ್ಷೆ...

ಮಂಗಳೂರು | ಅಲ್‌ ವಫಾ ಟ್ರಸ್ಟ್‌ನಿಂದ 15 ಜೋಡಿಗಳಿಗೆ ಸರಳ ಸಾಮೂಹಿಕ ವಿವಾಹ

ಮಂಗಳೂರಿನ ಅಲ್ ವಫಾ ಚಾರಿಟೆಬಲ್ ಟ್ರಸ್ಟ್ ಹಮ್ಮಿಕೊಂಡಿದ್ದ 15 ಜೋಡಿಗಳ ಸರಳ...

ಚಿಕ್ಕಮಗಳೂರು l ಶೋ ರೂಮ್ ಸಿಬ್ಬಂದಿಯಿಂದಲೇ ಡೀಸೆಲ್ ಕಳ್ಳತನ

ಶೋ ರೂಂ ಸಿಬ್ಬಂದಿಯೇ ಹೊಸ ವಾಹನದ ಡೀಸೆಲ್‌ ಕಳ್ಳತನ ಮಾಡಿದ ಘಟನೆ...

ಗದಗ | ಒಳಮೀಸಲಾತಿ ಜಾರಿ, ಬಹುದಿನಗಳ ಕನಸು ನನಸು ಮಾಡಿದ ಎಲ್ಲರಿಗೂ ಅಭಿನಂದನೆ: ಎಸ್. ಎನ್. ಬಳ್ಳಾರಿ

ಪರಿಶಿಷ್ಟ ಜಾತಿಗಳ ಮೂರು ದಶಕಗಳ ಒಳಮೀಸಲಾತಿ ಹೋರಾಟವನ್ನು ಮಾನ್ಯ ಸುಪ್ರೀಂ ಕೋರ್ಟ್...

Download Eedina App Android / iOS

X