ರೈತರು ಎಂಎಸ್‌ಪಿ – ಯುವಜನರು ಉದ್ಯೋಗ ಕೇಳುತ್ತಿದ್ದಾರೆ; ಆದರೆ, ಆಲಿಸುವವರಿಲ್ಲ: ರಾಹುಲ್‌ ಗಾಂಧಿ

Date:

Advertisements

ರೈತರು ತಮ್ಮ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಕೇಳುತ್ತಿದ್ದಾರೆ, ಯುವಜನರು ಉದ್ಯೋಗ ಹುಡುಕುತ್ತಿದ್ದಾರೆ ಮತ್ತು ಮಹಿಳೆಯರು ಹಣದುಬ್ಬರದಿಂದ ಪರಿಹಾರ ಬಯಸುತ್ತಿದ್ದಾರೆ. ಆದರೆ, ಅವರ ಮಾತುಗಳನ್ನು ಕೇಳಿಸಿಕೊಳ್ಳಲಾಗುತ್ತಿಲ್ಲ ಎಂದು ಕೇಂದ್ರ ಸರ್ಕಾರದ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

ರಾಜಸ್ಥಾನದ ಬಿಕಾನೇರ್‌ನಲ್ಲಿ ನಡೆದ ಚುನಾವಣಾ ರ್‍ಯಾಲಿಯಲ್ಲಿ ಅವರು ಮಾತನಾಡಿದರು. “ಮುಂಬರುವ ಲೋಕಸಭೆ ಚುನಾವಣೆಯು ದೇಶದ ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ರಕ್ಷಿಸುತ್ತದೆ. ಇದು ಹಿಂದುಳಿದವರು, ದಲಿತರು, ಬುಡಕಟ್ಟುಗಳು ಮತ್ತು ಸಾಮಾನ್ಯ ವರ್ಗದ ಬಡವರ ಚುನಾವಣೆಯಾಗಿದೆ” ಎಂದು ಹೇಳಿದ್ದಾರೆ.

“ಕೇಂದ್ರದ ಆಡಳಿತಾರೂಢ ಬಿಜೆಪಿ ಚುನಾವಣಾ ಬಾಂಡ್‌ಗಳ ಮೂಲಕ ದೊಡ್ಡ ಕೈಗಾರಿಕೋದ್ಯಮಿಗಳಿಂದ ಹಣ ಪಡೆದುಕೊಂಡಿದೆ. ಮುಂಬರುವ ಚುನಾವಣೆಯು ದೇಶದ ಬಡ ಜನರು ಮತ್ತು 22-25 ಶತಕೋಟ್ಯಾಧಿಪತಿಗಳ ನಡುವಿನ ಯುದ್ಧವಾಗಿದೆ” ಎಂದು ಅವರು ಹೇಳಿದ್ದಾರೆ.

Advertisements

“ಪ್ರಸ್ತುತ ದೇಶದ ಎರಡು ದೊಡ್ಡ ಸಮಸ್ಯೆಗಳೆಂದರೆ ನಿರುದ್ಯೋಗ ಮತ್ತು ಹಣದುಬ್ಬರ. ಆದರೆ ಇವುಗಳನ್ನು ಮಾಧ್ಯಮಗಳು ಪ್ರಸ್ತಾಪಿಸುತ್ತಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಕಾಂಗ್ರೆಸ್ ತನ್ನ ಲೋಕಸಭಾ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳನ್ನು ಪಕ್ಷ ಅಧಿಕಾರಕ್ಕೆ ಬಂದ ತಕ್ಷಣ ಜಾರಿಗೆ ತರಲು ಕ್ರಮ ಕೈಗೊಳ್ಳಲಾಗುತ್ತದೆ” ಎಂದು ಅವರು ಹೇಳಿದ್ದಾರೆ.

“ಪ್ರಧಾನಿ ನರೇಂದ್ರ ಮೋದಿ ಅವರು 15-20 ಕೈಗಾರಿಕೋದ್ಯಮಿಗಳ ಸಾಲ ಮನ್ನಾ ಮಾಡಿದ್ದಾರೆ. ಆ ಹಣದಲ್ಲಿ 24 ವರ್ಷಗಳ ಕಾಲ ಮನರೇಗಾ ಕಾರ್ಮಿಕರಿಗೆ ವೇತನ ನೀಡಬಹುದಿತ್ತು” ಎಂದು ರಾಹುಲ್ ವಿವರಿಸಿದ್ದಾರೆ.

ಭಾರತದ ಇತಿಹಾಸದಲ್ಲಿ ಮೊದಲ ಬಾರಿಗೆ ರೈತರು ತೆರಿಗೆ ಪಾವತಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X