ವಿಜಯಪುರ | ತೊರವಿ ಭಾಗಕ್ಕೂ ಶೀಘ್ರದಲೇ ನೀರಾವರಿ ಕಲ್ಪಿಸಲಾಗುವುದು: ಎಂ ಬಿ ಪಾಟೀಲ್

Date:

Advertisements

ವಿಜಯಪುರ ಜಿಲ್ಲೆಯ ತೊರವಿ ಭಾಗಕ್ಕೂ ನೀರಾವರಿ ಸೌಲಭ್ಯ ಕಲ್ಪಿಸಲು ಯೋಜನೆ ರೂಪಿಸಲಾಗಿದ್ದು, ತವರೂರಿನ ಋಣ ತೀರಿಸುವುದಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ್ ಹೇಳಿದ್ದಾರೆ.‌

ಕಾಂಗ್ರೆಸ್ ಅಭ್ಯರ್ಥಿ ಪ್ರೊ.ರಾಜು ಆಲಗೂರ ಪರ ಬುಧವಾರ ರಾತ್ರಿ ತೊರವಿಯಲ್ಲಿ ಪ್ರಚಾರ ಕೈಗೊಂಡಿದ್ದ ವೇಳೆ ಮಾತನಾಡಿದರು.

“ರಾಜ್ಯ ಸರ್ಕಾರ ಪ್ರತಿಯೊಬ್ಬರ ಮನೆಗಳಿಗೆ ಗ್ಯಾರಂಟಿ ಯೋಜನೆಗಳನ್ನು ತಲುಪಿಸಿದೆ. ಆದರೆ, ಕೇಂದ್ರ ಸರ್ಕಾರ ಜನರ ಜೀವನವನ್ನು ಬೆಲೆ ಏರಿಕೆಯಿಂದ ದು‌ರ್ಬರಗೊಳಿಸಿದೆ. ಪೆಟ್ರೋಲ್, ಅಡುಗೆ ಅನಿಲ ಬೆಲೆ ಹೆಚ್ಚಳವಾದಾಗ ಗದ್ದಲ ಉಂಟು ಮಾಡುತ್ತಿದ್ದ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರಂಥವರು ಈಗ ಮೌನ ವಹಿಸಿದ್ದಾರೆ. ಚುನಾವಣೆ ಬಾಂಡ್ ಇವರ ನಿಜವಾದ ಮುಖವಾಡವನ್ನು ಬಯಲು ಮಾಡಿದೆ” ಎಂದು ಹೇಳಿದರು.

Advertisements

“ನಾವು ಕೊಟ್ಟ ಭರವಸೆ ಈಡೇರಿಸಿ ಮತ ಕೇಳಲು ಬಂದಿದ್ದೇವೆ. ಸಬ್ ಕಾ ಸಾಥ್ ಎಂದವರು ಈಗ ದೇಶದಲ್ಲಿ ಬಿರುಕು ಮೂಡಿಸುತ್ತಿದ್ದಾರೆ. ಈ ಬಾರಿ ಅವರಿಗೆ ಪ್ರಸ್ತಾಪಿಸಲು ಯಾವುದೇ ವಿಷಯಗಳಿಲ್ಲ. ಯಾವ ಗಾಳಿಯೂ ಇಲ್ಲ. ಹಾಗಾಗಿ ನಿಮ್ಮೂರಿನ ಮಗ ರಾಜು ಆಲಗೂರ ಅವರಿಗೆ ಮತ ನೀಡಿ” ಎಂದು ಮನವಿ ಮಾಡಿದರು.

“ತೊರವಿ ಭಾಗಕ್ಕೂ ನೀರು ನೀಡುವ ಯೋಜನೆ ರೂಪಿಸುತ್ತಿದ್ದೇವೆ. ನಮ್ಮೂರಿನ ಋಣ ತೀರಿಸುವೆ. ಆಲಮಟ್ಟಿ ಅಣೆಕಟ್ಟು ಎತ್ತರಿಸಲು ಗೆಜೆಟ್ ನೋಟಿಫಿಕೇಷನ್ ಆದರೆ ಇಡೀ ಜಿಲ್ಲೆ ದೇಶದಲ್ಲಿಯೇ ಶ್ರೀಮಂತವಾಗಲಿದೆ. ಈ ಕೆಲಸ ಜಾರಿಯಾಗಬೇಕಾದರೆ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಬೇಕು” ಎಂದು ಸಚಿವ ಎಂ ಬಿ ಪಾಟೀಲ್ ಹೇಳಿದರು.‌

ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ಮಾತನಾಡಿ, “ಪಕ್ಷಾತೀತವಾಗಿ ಗ್ರಾಮದವರು ತಮಗೆ ಬೆಂಬಲಿಸಬೇಕು. ಲೋಕಸಭೆಯಲ್ಲಿ ನಿಮ್ಮ ಭರವಸೆಗೆ ತಕ್ಕಂತೆ ಧ್ವನಿಯಾಗಿ ಕೆಲಸ ಮಾಡುತ್ತೇನೆ. ಕಾಂಗ್ರೆಸ್‌ನ ಅಭಿವೃದ್ಧಿ ಕಾರ್ಯಗಳು ನಮ್ಮ ಬೆನ್ನಿಗಿವೆ. ಜಿಲ್ಲೆಯಲ್ಲಿ ಪಕ್ಷದ ಪರ ಅಲೆ ಇದೆ. ಕಳೆದ 25 ವರ್ಷಗಳ ನಂತರ ಈಗ ಬದಲಾವಣೆ ಗಾಳಿ ಬೀಸಿದೆ. ತೊರವಿ ಗ್ರಾಮಸ್ಥರು ಕಾಂಗ್ರೆಸ್‌ಗೆ ಸಂಪೂರ್ಣ ಬೆಂಬಲ ನೀಡಬೇಕು” ಎಂದು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ರಾಮನಗರ | ನಾಮಪತ್ರ ವಾಪಸ್‌ ಪಡೆದ ಬಿಎಸ್‌ಪಿ ಅಭ್ಯರ್ಥಿ; ಪಕ್ಷದಿಂದ ಉಚ್ಛಾಟನೆ

ಮುಖಂಡ ಎನ್ ಎಸ್ ಬಿರಾದಾರ ಪ್ರಾಸ್ತಾವಿಕವಾಗಿ ಮಾತನಾಡಿ, “ತೊರವಿ ಗ್ರಾಮಕ್ಕೆ ರಾಜಕೀಯ ಇತಿಹಾಸವಿದೆ. ಬಿ ಎಂ ಪಾಟೀಲ್ ಅವರಿಂದ ಹಿಡಿದು, ಎಂ ಬಿ ಪಾಟೀಲ್ ವರೆಗೆ ರಾಜಕಾರಣದ ಹಲವು ಮೈಲಿಗಲ್ಲು ದಾಖಲಾಗಿವೆ. ಈ ಬಾರಿ ಲೋಕಸಭಾ ಅಭ್ಯರ್ಥಿಯಾಗಿ ಇದೇ ಗ್ರಾಮದ ರಾಜು ಆಲಗೂರ ಅವರು ಸ್ಪರ್ಧಿಸಿರುವುದು ನಮಗೆಲ್ಲ ಹೆಮ್ಮೆಯ ವಿಷಯ. ನಾವೆಲ್ಲರೂ ಒಟ್ಟಾಗಿ ಅವರನ್ನು ಗೆಲ್ಲಿಸಬೇಕಾಗಿದೆ” ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಮುಖಂಡರುಗಳಾದ ಹಮೀದ್ ಮುಶ್ರೀಫ್, ನರಸಿಂಗ ಮಹಾರಾಜರು, ಭೀಮು ಮಹಾರಾಜರು, ಸುರೇಶಗೌಡ ಪಾಟೀಲ್‌ ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

Download Eedina App Android / iOS

X