ರೈತರು ಕನಿಷ್ಠ ಬೆಂಬಲ ಬೆಲೆ, ಯುವಕರು ಉದ್ಯೋಗ ನೀಡಿಕೆ, ಮಹಿಳೆಯರು ಹಣದುಬ್ಬರದಿಂದ ನಿವಾರಣೆ ಬಗ್ಗೆ ಕೇಂದ್ರವನ್ನು ಕೇಳುತ್ತಿದ್ದರೂ ಸರ್ಕಾರ ಮಾತ್ರ ಕೇಳಿಸಿಕೊಳ್ಳುತ್ತಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದರು.
ರಾಜಸ್ಥಾನದ ಬಿಕನೇರ್‌ನಲ್ಲಿ ಸಾರ್ವಜನಿಕ ರ್ಯಾಲಿಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಮುಂದಿನ ಲೋಕಸಭಾ ಚುನಾವಣೆಯಲ್ಲಿ ದೇಶದ ಸಂವಿಧಾನ ಹಾಗೂ ಪ್ರಜಾಪ್ರಭುತ್ವವನ್ನು ರಕ್ಷಿಸಬೇಕಿದೆ. ಈ ಚುನಾವಣೆಯು ಹಿಂದುಳಿದ ವರ್ಗ, ದಲಿತರು, ಬುಡಕಟ್ಟು ವರ್ಗ ಹಾಗೂ ಸಾಮಾನ್ಯ ವರ್ಗದ ಬಡಜನರ ಚುನಾವಣೆಯಾಗಿದೆ ಎಂದು ಹೇಳಿದರು.
ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ದೊಡ್ಡ ಉದ್ಯಮಿಗಳಿಂದ ಚುನಾವಣಾ ಬಾಂಡ್ ಮೂಲಕ ಹಣ ತೆಗೆದುಕೊಂಡಿದೆ. ನಮ್ಮ ಪಕ್ಷದ ಬ್ಯಾಂಕ್ ಅಕೌಂಟ್‌ಗಳನ್ನು ಸ್ಥಗಿತಗೊಳಿಸಲಾಗಿದೆ. ಮುಂಬರುವ ಲೋಕಸಭಾ ಚುನಾವಣೆಯು ದೇಶದ ಬಡ ಜನರು ಹಾಗೂ 22-25 ಉದ್ಯಮಿಗಳ ನಡುವೆ ನಡೆಯುವ ಚುನಾವಣೆಯಾಗಿದೆ ಎಂದರು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕಾಂಗ್ರೆಸ್ ಪ್ರಣಾಳಿಕೆ- ಸುಳ್ಳು ಸುಳ್ಳೇ ಮುಸ್ಲಿಮ್ ಲೀಗ್ ಮೊಹರು ಹಾಕಿದ ಮೋದಿ
ಪ್ರಸ್ತುತ ದೇಶದ ಅತೀ ದೊಡ್ಡ ಸಮಸ್ಯೆಗಳೆಂದರೆ ನಿರುದ್ಯೋಗ ಹಾಗೂ ಹಣದುಬ್ಬರ. ಆದರೆ ಈ ಸಮಸ್ಯೆಗಳನ್ನು ಮಾಧ್ಯಮಗಳಲ್ಲಿ ತೋರಿಸಲಾಗುತ್ತಿಲ್ಲ ಎಂದು ರಾಹುಲ್ ಗಾಂಧಿ ಬೇಸರ ವ್ಯಕ್ತಪಡಿಸಿದರು.
ಪಕ್ಷದ ಚುನಾವಣಾ ಪ್ರಣಾಳಿಕೆ ಬಗ್ಗೆ ಮಾತನಾಡಿದ ರಾಹುಲ್ ಗಾಂಧಿ, ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಶೀಘ್ರದಲ್ಲೇ ನೀಡಿದ ಭರವಸೆಗಳನ್ನು ಪೂರ್ಣಗೊಳಿಸಲಾಗುವುದು ಎಂದು ಹೇಳಿದರು.
ಪ್ರಧಾನಿ ನರೇಂದ್ರ ಮೋದಿ 15-20 ಉದ್ಯಮಿಗಳ ಸಾಲ ಮನ್ನ ಮಾಡಲಾಗಿದೆ. ಇದೇ ಹಣವನ್ನು ಮನ್‌ರೇಗಾ ಯೋಜನೆಯ ಕೂಲಿಗಾಗಿ 24 ವರ್ಷಗಳವರೆಗೂ ಖರ್ಚು ಮಾಡಬಹುದಿತ್ತು ಎಂದು ರಾಹುಲ್ ಗಾಂಧಿ ಹೇಳಿದರು.
ಭಾರತದ ಇತಿಹಾಸದಲ್ಲಿಯೇ ನಮ್ಮ ದೇಶದ ರೈತರು ತೆರೆಗೆಯನ್ನು ಪಾವತಿಸುತ್ತಿರುವುದು ಇದೇ ಮೊದಲು ಎಂದು ಎಂದು ಕೇಂದ್ರ ಸರ್ಕಾರದ ರೈತ ವಿರೋಧ ನೀತಿಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು.
