ರಾಜ್ಯ ರಾಜಧಾನಿ ಬೆಂಗಳೂರಿನ ನಾಯಂಡಹಳ್ಳಿ ಮೇಲ್ಸೇತುವೆಯಿಂದ ಜಿಗಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಏಪ್ರಿಲ್ 12ರಂದು ನೆಡೆದಿದೆ.
ನವೀನ್ (30) ಮೃತ ದುರ್ದೈವಿ. ಇವರು ಜ್ಞಾನಭಾರತಿ ನಿವಾಸಿಯಾಗಿದ್ದು, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್)ನಲ್ಲಿ ಗುತ್ತಿಗೆ ನೌಕರನಾಗಿ ಕೆಲಸ ಮಾಡುತ್ತಿದ್ದರು.
ಏ.12ರಂದು ಬೆಳಿಗ್ಗೆ 8:20ರ ಸುಮಾರಿಗೆ ನವೀನ್ ಮೇಲ್ಸೇತುವೆ ಮೇಲೆ ಬೈಕ್ ಪಾರ್ಕ್ ಮಾಡಿದ್ದಾರೆ. ಬಳಿಕ, ಏಕಾಏಕಿ ಮೇಲ್ಸೆತುವೆ ಮೇಲಿನಿಂದ ಜಿಗಿದಿದ್ದಾರೆ. ಮೃತ ನವೀನ್ ನಾಲ್ಕು ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದರು ಎಂದು ತಿಳಿದುಬಂದಿದೆ.
ಈ ಸುದ್ದಿ ಓದಿದ್ದೀರಾ? ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಪಶ್ಚಿಮ ಬಂಗಾಳದಲ್ಲಿ ಇಬ್ಬರು ಶಂಕಿತರ ಬಂಧನ
ಘಟನಾ ಸ್ಥಳದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಬ್ಯಾಟರಾಯನಪುರ ಸಂಚಾರ ಪೊಲೀಸರು ಕೂಡಲೇ ನವೀನ್ ಬಳಿ ಧಾವಿಸಿದ್ದಾರೆ. ಇನ್ನು ಸ್ಥಳಕ್ಕೆ ಬ್ಯಾಟರಾಯನಪುರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಏ.12ರಂದು ಬೆಳಗ್ಗೆ ಡ್ಯೂಟಿಗೆ ಹೋಗುತ್ತೇನೆ ಎಂದು ಮನೆಯಿಂದ ಹೊರಟಿದ್ದ ನವೀನ್ ನಾಯಂಡಹಳ್ಳಿ ಫ್ಲೈಓವರ್ ಮೇಲಿಂದ ಕೆಳಗೆ ಜಿಗಿದಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ…