ಕಲಬುರಗಿ ಲೋಕಸಭೆ ಎಸ್‌ಸಿ ಮೀಸಲು ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಅವರು ಶುಕ್ರವಾರ ಜಿಲ್ಲಾ ಚುನಾವಣಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರಿಗೆ ಶುಕ್ರವಾರ ನಾಮಪತ್ರ ಪ್ರತಿ ಸಲ್ಲಿಸಿದರು.
ನಾಮಪತ್ರ ಪ್ರತಿ ಸಲ್ಲಿಕೆಯ ವೇಳೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ, ಶಾಸಕ ಎಂ.ವೈ.ಪಾಟೀಲ್, ರಾಜ್ಯ ರೇಷ್ಮೆ ಉದ್ಯಮಗಳ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಕನೀಜಾ ಫಾತೀಮಾ, ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ಇದ್ದರು.
ಈ ಸುದ್ದಿ ಓದಿ? ಕಲಬುರಗಿ | ಎದೆಯ ಮೇಲೆ ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕ್ ಖರ್ಗೆ ಟ್ಯಾಟೂ
ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿ, “ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಅವರು ಜಯಗಳಿಸುತ್ತಾರೆ. ಬಿಜೆಪಿಯವರಿಗೆ ಸೋಲಿನ ಭೀತಿ ಎದುರಾಗಿದೆ, ಹೀಗಾಗಿ ಪ್ರಧಾನಿ ಮೋದಿ ಕಲಬುರಗಿಯಿಂದ ಚುನಾವಣಾ ಪ್ರವಾಸ ಆರಂಭಿಸಿದ್ದರು” ಎಂದರು.